ಬೆಂಗಳೂರು : ತನ್ನ ಅಕ್ಕನ ಮನೆಯಲ್ಲೇ ಹಣ ಹಾಗೂ ಚಿನ್ನಾಭರಣ ಕದ್ದಿದ್ದ ಆರೋಪಿ ತಂಗಿಯನ್ನು ಕೆಂಗೇರಿ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಉಮಾ ಎಂದು ಗುರುತಿಸಲಾಗಿದೆ. ಆರೋಪಿ ತನ್ನ ಅಕ್ಕನಿಗೆ ತೆರಳಿದ್ದ ವೇಳೆ ನಕಲಿ ಕೀ ಬಳಸಿ 52 ಲಕ್ಷ ರೂ. ನಗದು ಹಾಗೂ 180 ಗ್ರಾಂ ಚಿನ್ನಾಭರಣ ಕಳ್ಳತನ ಮಾಡಿದ್ದಳು. ಬಂಧಿತ ಆರೋಪಿಯಿಂದ 65 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ಲಕ್ಷಾಂತರ ರೂ. ಹಣವನ್ನು ವಶಕ್ಕೆ ಪಡೆಯಲಾಗಿದೆ.
ಆರೋಪಿಯ ಅಕ್ಕ ಏ.24 ರಂದು ತೆರಳಿದ್ದರು. ನಮಗೆ ತೆರಳುವ ಮುನ್ನ ಸಂಬಂಧಿಯೊಬ್ಬರ ಮನೆಗೆ ಮನೆಯ ಕೀ ಕೊಟ್ಟು ತೆರಳಿದ್ದರು. ರಾತ್ರಿ ವೇಳೆ ಅವರು ಕಾವಲಿಗೆ ಎಂದು ಮನೆಗೆ ತೆರಳಿದ್ದಾಗ ಕಳ್ಳತನ ಆಗಿರುವುದು ಬೆಳಕಿಗೆ ಬಂದಿತ್ತು.
ಮನೆಯನ್ನು ಪರಿಶೀಲಿಸಿದಾಗ 182 ಗ್ರಾಂ ಚಿನ್ನಾಭರಣ ಹಾಗೂ 52 ಲಕ್ಷ ರೂ. ನಗದು ಕಳ್ಳತನ ಆಗಿರುವುದು ತಿಳಿದು ಬಂದಿತ್ತು. ಈ ಸಂಬಂಧ ಕೆಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು 6 ದಿನಗಳ ಕಾಲ ಬಂಧಿಸಿ ಕಸ್ಟಡಿಗೆ ಪಡೆದಿದ್ದಾರೆ.