ತಮಿಳುನಾಡಿನ  ಶಿವಕಾಶಿ  ಬಳಿಯ ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟ

ಚೆನ್ನೈ: ತಮಿಳುನಾಡಿನ  ಶಿವಕಾಶಿ  ಬಳಿಯ ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ  ಐವರು ಮಹಿಳಾ ಕಾರ್ಮಿಕರು ಸೇರಿದಂತೆ ಎಂಟು ಮಂದಿ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ 12 ಮಂದಿ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.

ವಿರುದುನಗರ ಜಿಲ್ಲೆಯ ಶ್ರೀ ಸುದರ್ಶನ್ ಪಟಾಕಿ ಕಾರ್ಖಾನೆಯಲ್ಲಿ ಈ ಘಟನೆ ನಡೆದಿದೆ. ರಾಸಾಯನಿಕಗಳನ್ನು ಬಳಕೆ ಮಾಡುವ ವೇಳೆ ಈ ಸ್ಫೋಟ ಸಂಭವಿಸಿದೆ ಎಂದು ಅಧಿಕಾರಿಗಳು ಶಂಕಿಸಲಾಗಿದೆ. ಇದು ಪರವಾನಗಿ ಪಡೆದ ಘಟಕವಾಗಿದ್ದು, ಘಟನೆಗೆ ನಿಖರ ಕಾರಣದ ಬಗ್ಗೆ ತನಿಖೆ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.   

ಕಳೆದ ವರ್ಷ ಅಕ್ಟೋಬರ್ ತಿಂಗಳಲ್ಲಿ ನಡೆದಿದ್ದ ಪಟಾಕಿ ಕಾರ್ಖಾನೆಗಳ ಅವಘಡದಲ್ಲಿ 27 ಮಂದಿ ಸಾವನ್ನಪ್ಪಿದ್ದರು. ಈ ತಿಂಗಳ ಕಲ್ಲು ಕ್ವಾರಿಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೂವರು ಸಾವನ್ನಪ್ಪಿದ್ದರು.

ಕಾರ್ಖಾನೆಗಳಲ್ಲಿ 99% ಸ್ಫೋಟಗಳು ಮಾನವ ದೋಷದಿಂದ ಸಂಭವಿಸುತ್ತವೆ. ತರಬೇತಿ ಇಲ್ಲದ ಕಾರ್ಮಿಕರನ್ನು ನೇಮಿಸಿಕೊಳ್ಳುವುದು ಇಂತಹ ಅವಘಡಗಳಿಗೆ ಕಾರಣ ಎಂದು ಅಗ್ನಿಶಾಮಕ ಅಧಿಕಾರಿಗಳು ಅಭಿಪ್ರಾಯಪಟ್ಟಿದ್ದಾರೆ. 

ಈ ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಸಂತಾಪ ಸೂಚಿಸಿದ್ದು, ಮಾದರಿ ಸಂಹಿತೆಯಿಂದಾಗಿ ಚುನಾವಣಾ ಆಯೋಗದ ಒಪ್ಪಿಗೆ ಪಡೆದ ನಂತರ ಘಟನೆಯ ಕುಟುಂಬಗಳಿಗೆ ಪರಿಹಾರ ನೀಡಲಾಯಿತು.

Related Post

Leave a Reply

Your email address will not be published. Required fields are marked *