ಹಾಸನ: ನೇಣು ಬಿಗಿದುಕೊಂಡು ಅತಿಥಿ ಉಪನ್ಯಾಸಕಿ ಆತ್ಮಹತ್ಯೆ ಮಾಡಿಕೊಂಡಿರೋ ಘಟನೆ ಚನ್ನರಾಯಪಟ್ಟಣದ ಗಾಯಿತ್ರಿ ಬಡಾವಣೆಯಲ್ಲಿ ನಡೆದಿದೆ. ದೀಪಾ (34) ಆತ್ಮಹತ್ಯೆಗೆ ಶರಣಾದ ಅತಿಥಿ ಉಪನ್ಯಾಸಕಿ.
ಸೋಮಶೇಖರ್ ಹಾಗೂ ಭಾಗ್ಯ ದಂಪತಿ ಪುತ್ರಿಯಾಗಿದ್ದ ಮೃತ ದೀಪ. ಚನ್ನರಾಯಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕಿಯಾಗಿದ್ದ ಮೃತ ದೀಪ. ಮನೆಯಲ್ಲಿಯೇ ನೇಣುಬಿಗಿದುಕೊಂಡು ದೀಪ ಆತ್ಮಹತ್ಯೆಗೆ ಶರಣಾಗಿದ್ದಾಳೆ.
ಆದರೆ ಈ ದೀಪಾ ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಮಗಳನ್ನು ಕಳೆದುಕೊಂಡ ದುಃಖದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಆದರೆ ಮೃತ ಉಪನ್ಯಾಸಕಿ ದೀಪಗೆ ಇನ್ನೂ ಮದುವೆ ಆಗಿರಲಿಲ್ಲ. ಈ ವಿಷಯ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ಚನ್ನರಾಯಪಟ್ಟಣ ನಗರ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.