ಇಂದು ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ಬಹು ಮುಖ್ಯವಾದ ದಿನ. ಇಷ್ಟು ದಿನ ಕಷ್ಟಪಟ್ಟು ಓದಿದ ನಂತರ ಶುಭದಿನ. ಚೆನ್ನಾಗಿ ಬರೆದು ಪರೀಕ್ಷೆ ಫಲಿತಾಂಶಕ್ಕೆಂದು ಅದೇಷ್ಟೋ ವಿದ್ಯಾರ್ಥಿಗಳು ಕಾದು ಕುಳಿತಿದ್ದಾರೆ. ಹೀಗಾಗಿ ವಿದ್ಯಾರ್ಥಿಗಳ ಜೊತೆಗೆ ಪೋಷಕರಲ್ಲೂ ಆತಂಕ ಮನೆಮಾಡಿದೆ. ಏಕೆಂದರೆ ಮಕ್ಕಳ ಪರೀಕ್ಷೆಯಲ್ಲಿ ಪಾಸ್ ಆಗುತ್ತಾರೋ ಇಲ್ಲವೋ ಅಂತ ಯೋಚನೆ ಮಾಡುತ್ತಿದ್ದಾರೆ.
ಹೌದು, ಇಂದು 2023-24ನೇ ಸಾಲಿನ SSLC ಪರೀಕ್ಷೆಯ ಫಲಿತಾಂಶ ಪ್ರಕಟವಾಗಲಿದೆ. ಇಂದು ಬೆಳಗ್ಗೆ 10.30ಕ್ಕೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಫಲಿತಾಂಶ ಪ್ರಕಟವಾಗಲಿದೆ.
ಹೀಗಾಗಿ SSLC ಫಲಿತಾಂಶಕ್ಕಾಗಿ ವಿದ್ಯಾರ್ಥಿಗಳು ಕಾತು ಕುಳಿತಿದ್ದಾರೆ. ಇನ್ನು, ಈ ಬಾರಿ 8.69 ಲಕ್ಷ ವಿದ್ಯಾರ್ಥಿಗಳು ಎಸ್.ಎಸ್.ಎಲ್.ಸಿ ಪರೀಕ್ಷೆ-1ನ್ನು ದಿನಾಂಕ 25.03.2024 ರಿಂದ 06.04.2024 ರವರೆಗೆ ಬರೆದಿದ್ದಾರೆ. 4,41,910 ಬಾಲಕರು ಮತ್ತು 4,28,058 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಇಂದು ಅವರ ಭವಿಷ್ಯ ನಿರ್ಧಾರ. 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶವನ್ನು https://karresults.nic.in ಜಾಲತಾಣದಲ್ಲಿ ಬೆಳಗ್ಗೆ 10.30 ಗಂಟೆಯ ನಂತರ ವೀಕ್ಷಿಸಲಾಗಿದೆ.