ಹಿರಿಯೂರು, ಮೇ. 10 : ಹಾಸನದ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಕೀಲ ದೇವರಾಜೇಗೌಡ ಅವರನ್ನು ಹಿರಿಯೂರು ಗ್ರಾಮಾಂತರ ಪೊಲೀಸರು ಶುಕ್ರವಾರ ರಾತ್ರಿ ಬಂಧಿಸಿದ್ದಾರೆ.
ಹೊಳೆನರಸೀಪುರದಲ್ಲಿ ಬಿಜೆಪಿ ಕಿರುಕುಳ ಕಾರ್ಯಕ್ರಮ ಎಂದು ಮುಖಂಡ ದೇವರಾಜೇಗೌಡ ಮೇಲೆ ಕೇಸ್ ದಾಖಲಾಗಿತ್ತು. ಅದೇ ಮಹಿಳೆ ವಿರುದ್ಧ ಹೆಬ್ಬಾಳದಲ್ಲಿ ದೇವರಾಜೇಗೌಡ ಕೂಡ ದೂರು ದಾಖಲಿಸಿದ್ದರು.
ಈ ಬಗ್ಗೆ ಹೊಳೆನರಸೀಪುರ ಪೊಲೀಸರು ಹಿರಿಯೂರು ಗ್ರಾಮಾಂತರ ಪೊಲೀಸರಿಗೆ ಈ ಬಗ್ಗೆ ಮಾಹಿತಿ ನೀಡಿದ್ದರು. ಈ ಪೈಕಿ ಹಿರಿಯೂರು ಗ್ರಾಮಾಂತರ ಸಿಪಿಐ ಕಾಳಿಕೃಷ್ಣ ನೇತೃತ್ವದಲ್ಲಿ ಹಿರಿಯೂರು ತಾಲೂಕಿನ ಕೆಆರ್ ಹಳ್ಳಿ ಗೇಟ್ ಬಳಿ ಇನೋವಾ ಕಾರಿನಲ್ಲಿ ಬರುತ್ತಿದ್ದಾಗ ಬಂಧಿಸಿದ್ದಾರೆ.