ಬೆಂಗಳೂರು, ಮೇ 11: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. 6 ಕ್ಷೇತ್ರಗಳ ಪೈಕಿ 1 ಕ್ಷೇತ್ರ ಜೆಡಿಎಸ್‌ಗೆ ಬಿಜೆಪಿ ಬಿಟ್ಟುಕೊಟ್ಟಿದೆ. ವಿಧಾನಪರಿಷತ್‌ನ ನೈಋತ್ಯ ಶಿಕ್ಷಕರ ಕ್ಷೇತ್ರದಲ್ಲಿ ಜೆಡಿಎಸ್ ಸ್ಪರ್ಧೆ ಮಾಡಲಿದೆ. ಪರಿಷತ್‌ನ ಈಶಾನ್ಯ ಪದವೀಧರ ಕ್ಷೇತ್ರದಿಂದ ಅಮರನಾಥ್ ಪಾಟೀಲ್, ಪರಿಷತ್‌ನ ನೈಋತ್ಯ ಪದವೀಧರ ಕ್ಷೇತ್ರದಿಂದ ಡಾ.ಧನಂಜಯ ಸರ್ಜಿ, ಪರಿಷತ್‌ನ ಬೆಂಗಳೂರು ಪದವೀಧರ ಕ್ಷೇತ್ರದಿಂದ ಅ.ದೇವೇಗೌಡ, ಪರಿಷತ್‌ನ ಆಗ್ನೇಯ ಶಿಕ್ಷಕರ ಕ್ಷೇತ್ರದಿಂದ ವೈ.ಎ.ನಾರಾಯಣಸ್ವಾಮಿ ಮತ್ತು ವಿಧಾನಪರಿಷತ್‌ನ ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ಇ.ಸಿ.ನಿಂಗರಾಜು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಮತ್ತೆ ಅಮರನಾಥ್ ಪಾಟೀಲ್ಗೆ ಬಿಜೆಪಿ ಮಣೆ ಕಲಬುರಗಿಯ ಅಮರನಾಥ್ ಪಾಟೀಲ್ರನ್ನ ಹುರಿಯಾಳು ಮಾಡಿದ ಹೈಕಮಾಂಡ್. 2012-16 ಎಂಎಲ್ಸಿಯಾಗಿದ್ದರಿ. ಒಂದು ಭಾರಿ ಇದೇ ಕ್ಷೇತ್ರದಿಂದ ಎಂಎಲ್‌ಸಿ ಆಗಿದ್ದ ಅಮರನಾಥ್ ಪಾಟೀಲ್, ಆದರೆ ಕಳೆದ ಭಾರಿ ಟಿಕೆಟ್ ಕೈತಪ್ಪಿತ್ತು. ಹೀಗಾಗಿ ಕಾಂಗ್ರೆಸ್ ಗೆದ್ದಿತ್ತು. ಆದರೆ ಈ ಭಾರಿ ಮತ್ತೆ ಅಮರನಾಥ್ ಪಾಟೀಲ್ಗೆ ಬಿಜೆಪಿ ಮಣೆ ಹಾಕಿದೆ. ಬಿಜೆಪಿ ಜಿಲ್ಲಾಧ್ಯಕ್ಷರಾಗಿಯು ಕೆಲಸ ಮಾಡಿದ್ದಾರೆ. ಸಂಘ ಪರಿವಾರದೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದಾರೆ.
ಡಾ. ಧನಂಜಯ ಸರ್ಜಿಗೆ ಟಿಕೆಟ್ ಶಿವಮೊಗ್ಗ ನಗರ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ ಆಗಿದ್ದ ಡಾ. ಧನಂಜಯ ಸರ್ಜಿ ಕೊನೆಯ ಕ್ಷಣದಲ್ಲಿ ಟಿಕೆಟ್ ತಪ್ಪಿತ್ತು. ಈ ಹಿನ್ನಲೆಯಲ್ಲಿ ನೈರುತ್ಯ ಪದವೀಧರ ಕ್ಷೇತ್ರದ ಮೇಲೆ ಕಣ್ಣು ಇಟ್ಟಿದ್ದು ಇದೀಗ ಟಿಕೆಟ್ ತಮ್ಮದಾಗಿಸಿಕೊಂಡಿದ್ದಾರೆ. ಶಿವಮೊಗ್ಗ ಸೇರಿದಂತೆ ರಾಜ್ಯದಲ್ಲಿ ಮಕ್ಕಳ ಉತ್ತಮ ವೈದ್ಯ ಎಂಬ ಹೆಗ್ಗಳಿಕೆ ಪಡೆದುಕೊಂಡಿದ್ದಾರೆ. ಶಿವಮೊಗ್ಗ ಲೋಕಸಭಾ ಕ್ಷೇತ್ರ ಗ್ರಾಮಾಂತರ ಕ್ಷೇತ್ರದ ಜವಾಬ್ದಾರಿ ನಿರ್ವಹಣೆ ಮಾಡಿದ್ದ ಸರ್ಜಿ ಸಾಧು ಲಿಂಗಾಯತ ಜಾತಿಗೆ ಸೇರಿದ್ದಾರೆ. ಬಿಎಸ್ ಯಡಿಯೂರಪ್ಪ ಮತ್ತು ಸಂಘ ಪರಿವಾರ ಜೊತೆ ಉತ್ತಮ ಬಾಂಧವ್ಯ ಹೊಂದಿದ್ದಾರೆ.
ಬಿಎಸ್ ಯಡಿಯೂರಪ್ಪ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದಾರೆ. ಶಿವಮೊಗ್ಗ ವಿಧಾನಸಭೆ ಚುನಾವಣೆ ಮೊದಲು ಅಧಿಕೃತವಾಗಿ ಬಿಜೆಪಿ ಸೇರ್ಪಡೆ ಆಗಿದ್ದರು. ಬಿಜೆಪಿ ಸೇರಿ ಒಂದೇ ವರ್ಷದಲ್ಲಿ ಎಲ್ಲರ ಗಮನ ಸೆಳೆದಿದ್ದರು. ಬಿಜೆಪಿಯ ವರಿಷ್ಠರಿಂದ ಸರ್ಜಿ ಬಗ್ಗೆ ಉತ್ತಮ ಅಭಿಪ್ರಾಯ ಹೊಂದಿದ್ದಾರೆ.