ಬೆಂಗಳೂರು: ಆಸ್ಪತ್ರೆಗೆ ದಾಖಲಾಗಿರುವ ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ಮುಂದುವರಿದಿದೆ.
ವಯೋಸಹಜ ಕಾಯಿಯಲೆಯಿಂದ ಕೆಲ ದಿನಗಳ ಹಿಂದೆ ಎಸ್‌ಎಂಕೆ ಅವರು ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸದ್ಯ ಮಾಜಿ ಮುಖ್ಯಮಂತ್ರಿಗಳಿಗೆ ಡಾ.ಸತ್ಯನಾರಾಯಣ ಮೈಸೂರು ಮತ್ತು ಡಾ.ಸುನೀಲ್ ಕಾರಂತ್ ನೇತೃತ್ವದ ಕ್ರಿಟಿಕಲ್ ಕೇರ್ ತಂಡ ಚಿಕಿತ್ಸೆ ನೀಡುತ್ತಿದೆ.
ಏಪ್ರಿಲ್ 21ರಂದು ಜ್ವರ, ಕೆಮ್ಮು ಕಾಣಿಸಿಕೊಂಡ ಹಿನ್ನೆಲೆ 91 ವರ್ಷ ವಯಸ್ಸಿನ ಎಸ್‌ಎಂಕೆಯವರನ್ನು ಬೆಂಗಳೂರಿನ ವಿಠಲ್ ಮಲ್ಯ ರಸ್ತೆಯ ವೈದೇಹಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು. ಚಿಕಿತ್ಸೆ ನಂತರ ಅವರು ಡಿಸ್ಟಾರ್ಜ್ ಸಹ ಆಗಿದ್ದರು. ಕೆಲ ದಿನಗಳ ಬಳಿಕ ಮತ್ತೆ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.