ಚಿತ್ರದುರ್ಗ, ಮೇ. 12 : ಇತ್ತಿಚೀಗಷ್ಟೆ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ಚಿತ್ರದುರ್ಗ ಜಿಲ್ಲೆ 21ನೇ ಸ್ಥಾನ ಪಡೆದುಕೊಂಡಿದೆ. ಇತ್ತ ವಿದ್ಯಾರ್ಥಿನಿಯೊಬ್ಬಳು ಪರೀಕ್ಷೆಯಲ್ಲಿ ಫೇಲ್ ಆಗಿದ್ದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ಹೊಸದುರ್ಗದ ಕೊಬ್ಬರಿಪೇಟೆಯಲ್ಲಿ ಈ ಘಟನೆ ನಡೆದಿದೆ. ಧನುಶ್ರೀ (16) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿಯಾಗಿದ್ದಾರೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಧನುಶ್ರೀ ನೇಣಿಗೆ ಶರಣಾಗಿದ್ದಾಳೆ. ನಾಲ್ಕು ವಿಷಯಗಳಲ್ಲಿ ವಿಧ್ಯಾರ್ಥಿನಿ ಫೇಲ್ ಆಗಿದ್ದರು. ಮಗಳು ಫೇಲ್ ಆದರೂ ಪೋಷಕರು ಆತ್ಮಸ್ಥೈರ್ಯ ತುಂಬಿದ್ದರು. ಆದರೂ ಮನನೊಂದ ವಿಧ್ಯಾರ್ಥಿನಿ ನೇಣಿಗೆ ಶರಣಾಗಿದ್ದಾಳೆ. ಘಟನಾ ಸ್ಥಳಕ್ಕೆ ಹೊಸದುರ್ಗ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.