Breaking
Tue. Dec 24th, 2024

ಬಿಗ್ ಬಾಸ್ ಕನ್ನಡ 7’ರ ಸ್ಪರ್ಧಿ ದೀಪಿಕಾ ದಾಸ್ ಟರ್ಕಿಗೆ…!

ಬಿಗ್ ಬಾಸ್ ಕನ್ನಡ 7’ರ ಸ್ಪರ್ಧಿ ದೀಪಿಕಾ ದಾಸ್ ಟರ್ಕಿಗೆ ಹಾರಿದ್ದಾರೆ. ಪತಿ ದೀಪಕ್ ಜೊತೆ ವೆಕೇಷನ್‌ನಲ್ಲಿ ನಟಿ ಬ್ಯೂಸಿಯಾಗಿದ್ದಾರೆ. ಇದೀಗ ಟರ್ಕಿಯಲ್ಲಿ ತೆಗೆದ ಸುಂದರ ಫೋಟೋಗಳನ್ನು ನಟಿ ಹಂಚಿಕೊಂಡಿದ್ದಾರೆ.

ದೀಪಿಕಾ ದಾಸ್ ಇದೀಗ ಟರ್ಕಿಯ ಫೇರಿ ಚಿಮ್ನೀಸ್ ವ್ಯಾಲಿಯಲ್ಲಿ ವೆಕೇಷನ್ ಮಾಡುತ್ತಿದ್ದಾರೆ. ಮಾಡ್ರರ್ನ್ ಡ್ರೆಸ್ ಧರಿಸಿ ಕಣ್ಣಿಗೆ ಕೂಲಿಂಗ್‌ ಗ್ಲ್ಯಾಸ್ ಹಾಕಿಕೊಂಡು ಮಸ್ತ್ ಆಗಿ ಕ್ಯಾಮೆರಾಗೆ ನಟಿ ಪೋಸ್ ನೀಡಿದ್ದಾರೆ.

ಪತಿಯ ಜೊತೆಗಿನ ರೊಮ್ಯಾಂಟಿಕ್ ಫೋಟೋಗಳನ್ನು ಕೂಡ ನಟಿ ಶೇರ್ ಮಾಡಿದ್ದಾರೆ. ಅಂದಹಾಗೆ, ದೀಪಿಕಾ ದಾಸ್‌ಗೆ ಗೋವಾದಲ್ಲೇ ಮದುವೆಯಾಗುವ ಕನಸು ಇತ್ತಂತೆ. ಹೀಗಾಗಿ ಕೇವಲ ಕುಟುಂಬಸ್ಥರ ಸಮ್ಮುಖದಲ್ಲಿ ನಟಿ ದೀಪಿಕಾ ದಾಸ್ ಉದ್ಯಮಿ ದೀಪಕ್ ಎಂಬುವವರ ಜೊತೆ ಮಾರ್ಚ್ 1 ರಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು.

ಇತ್ತೀಚೆಗೆ ನಡೆದ ಸುದ್ದಿಗೋಷ್ಠಿಯಲ್ಲಿ ನಟಿ ಮಾತನಾಡಿ, ದೀಪಕ್ ಅವರ ಮೇಲೆ ನಿಮಗೆ ಲವ್ ಆಗಿದ್ದು ಹೇಗೆ ಎಂಬ ಪ್ರಶ್ನೆಗೆ ನಟಿ ದೀಪಿಕಾ ದಾಸ್ ಮನಬಿಚ್ಚಿ ಮಾತನಾಡಿದ್ದರು. ದೀಪಕ್ ಮತ್ತು ನಾನು ನಾಲ್ಕು ವರ್ಷಗಳಿಂದ ಸ್ನೇಹಿತರು. 4 ವರ್ಷಗಳ ಹಿಂದೆ ಕಾರ್ಯಕ್ರಮವನ್ನು ಭೇಟಿಯಾದೆವು. ಕಳೆದ ಒಂದು ವರ್ಷದಿಂದ ರಿಲೇಷನ್‌ಶಿಪ್‌ನಲ್ಲಿ ಇದ್ವಿ. ಕುಟುಂಬಸ್ಥರು ಕೂಡ ನಮ್ಮ ಪ್ರೀತಿಗೆ ಓಕೆ ಹೇಳಿದರು. 

ದೀಪಕ್ ಅವರಿಗೆ ಚಿತ್ರರಂಗಕ್ಕೂ ನಂಟಿಲ್ಲ. ಅವರು ಉದ್ಯಮಿ. ಮುಂದಿನ ದಿನಗಳಲ್ಲಿ ಪ್ರೊಡಕ್ಷನ್ ಹೌಸ್ ಮಾಡುವ ಮೂಲಕ ಚಿತ್ರರಂಗಕ್ಕೆ ಕರೆತರುವ ಯೋಜನೆ ಇದೆ. ಅವರು ಜಾಸ್ತಿ ಮಾತಾಡೋದಿಲ್ಲ. ನಾನೇ ಕಮ್ಮಿ ಮಾತಾಡುತ್ತೇನೆ ಅಂದುಕೊಂಡಿದ್ದೆ, ಆದರೆ ನನಗಿಂತ ಕಮ್ಮಿ ಮಾತಾಡುವ ಹುಡುಗ ನನಗೆ ಸಿಕ್ಕಿದ್ದಾನೆ. ನಾನು ಮದುವೆಯಾಗುವ ಹುಡುಗ ಹೀಗೆ ಇರಬೇಕು, ಹಾಗೆಯೇ ಇರಬೇಕು ಎಂದು ಅಂದುಕೊಂಡಿರಲಿಲ್ಲ.

ಆದರೆ ನಾನು ಪ್ರೀತಿ ಅಂತಾ ಹುಡುಕಿಕೊಂಡು ಹೋಗಿಲ್ಲ. ನನ್ನ ಮದುವೆಯಾಗುವ ಹುಡುಗ ಮನಸ್ಸು ಚೆನ್ನಾಗಿರುತ್ತದೆ. ನನ್ನನ್ನು ಚೆನ್ನಾಗಿ ನೋಡಿಕೊಳ್ಳುವವನಾಗಿರುತ್ತದೆ. ನನಗೆ ಟೈಮ್ ಕೊಡುವವನ ಜೊತೆಗೆ ದೇಶ ಸುತ್ತುವವನಾದರೂ ಅಂತಾ ಈ ಹಿಂದೆ ಹೇಳಿದ್ದೆ. ನಾನು ಅಂದುಕೊಂಡ ಹಾಗೇ ನನಗೆ ನನ್ನ ಸಂಗಾತಿ ಸಿಕ್ಕಿದ್ದಾರೆ ಅಂತ ಮಾತನಾಡಿದ್ದರು.

Related Post

Leave a Reply

Your email address will not be published. Required fields are marked *