ಚಿತ್ರದುರ್ಗ : ಮಳೆಗಾಗಿ ಕಾದಿದ್ದ ಕೋಟೆ ನಾಡಿನ ಜನತೆಗೆ ಮಳೆರಾಯ ಕೃಪೆ ತೋರಿದ್ದಾನೆ. ಬುಧವಾರ ಸ್ವಲ್ಪ ಮಳೆ ಬಂದಿತ್ತು. ಆದರೆ ಇಂದು ಗಂಟೆ ಸುಮಾರಿಗೆ ಮಳೆ ಆರಂಭವಾಗಿದ್ದು, ಗಾಳಿ, ಗುಡುಗು ಸಮೇತವಾಗಿ ಜೋರಾಗಿ ಮಳೆ ಸುರಿಯುತ್ತಿದೆ.
ರಣಬಿಸಿಲಿಗೆ ತತ್ತರಿಸಿದ್ದ ಜನತೆಗೆ ಮಳೆ ತಂಪೆರದಿದೆ. ಕಳೆದ ಒಂದು ವಾರದಿಂದ ಹವಾಮಾನ ಇಲಾಖೆ ರಾಜ್ಯದಲ್ಲಿ ವಾಡಿಕೆಗಿಂತ ಹೆಚ್ಚಿನ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿತ್ತು. ಇದೀಗ ಚಿತ್ರದುರ್ಗ ಸೇರಿದಂತೆ ಹಲವೆಡೆ ಉತ್ತಮ ಮಳೆಯಾಗುತ್ತಿದ್ದು ಜನರಲ್ಲಿ ತುಸು ನೆಮ್ಮದಿ ಮೂಡಿಸಿದೆ.