ಸ್ಯಾಂಡಲ್ವುಡ್ ತುಪ್ಪದ ಬೆಡಗಿ ರಾಗಿಣಿ ದ್ವಿವೇದಿ (ಕನ್ನಡದ ಜೊತೆ ಪರಭಾಷಾ ಸಿನಿಮಾದಲ್ಲಿ ಬ್ಯೂಸಿಯಾಗಿದ್ದಾರೆ. ಇದೀಗ ‘ಬಿಗ್ ಬಾಸ್’ ಖ್ಯಾತಿಯ ಕಿಶನ್ ಬಿಳಗಲಿ ಜೊತೆ ರಾಗಿಣಿ ರೈನ್ ಡ್ಯಾನ್ಸ್ ಮಾಡಿದ್ದಾರೆ.
ಸರ್ಫರೋಶ್’ ಸಿನಿಮಾದ ಹಾಡಿಗೆ ರಾಗಿಣಿ ಮತ್ತು ಕಿಶನ್ ಮಸ್ತ್ ಆಗಿ ಡ್ಯಾನ್ಸ್ ಮಾಡಿದ್ದಾರೆ. ‘ಜೋ ಹಲ್ ದಿಲ್ ಕಾ’ ಎಂಬ ಹಾಡಿಗೆ ರೊಮ್ಯಾಂಟಿಕ್ ಆಗಿ ಹೆಜ್ಜೆ ಹಾಕಿದ್ದಾರೆ. ರಾಗಿಣಿ ರೆಡ್ ಕಲರ್ ಡ್ರೆಸ್ ಸಖತ್ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ. ಕಿಶನ್ ಕಪ್ಪು ಬಣ್ಣದ ಉಡುಗೆ ಧರಿಸಿದ್ದಾರೆ.
ರಾಗಿಣಿ ಮತ್ತು ಕಿಶನ್ ರೈನ್ ಡ್ಯಾನ್ಸ್‌ಗೆ ಬಗೆ ಬಗೆಯ ಕಾಮೆಂಟ್‌ಗಳು ಹರಿದು ಬರುತ್ತಿವೆ. ಬಾಲಿವುಡ್ ಕಲಾವಿದರನ್ನು ಮೀರಿಸುವಂತಿದೆ ಎಂದೆಲ್ಲಾ ಕಾಮೆಂಟ್ ಮಾಡಿದ್ದಾರೆ. ಮೋಹನ್ ಲಾಲ್ ಜೊತೆ ‘ವೃಷಭ’ ಸಿನಿಮಾ ಸೇರಿದಂತೆ ಹಲವು ಚಿತ್ರಗಳು ರಾಗಿಣಿ ಕೈಯಲ್ಲಿವೆ. ಈ ಸಿನಿಮಾ ಬಹುಭಾಷೆಗಳಲ್ಲಿ ರಿಲೀಸ್ ಆಗಲಿದೆ..