ಮಾಜಿ ಸಚಿವ ಹೆಚ್‌ಡಿ ರೇವಣ್ಣಗೆ  ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾಮೀನು ಮಂಜೂರು…!

ಬೆಂಗಳೂರು: ಮ್ಯಾರಥಾನ್‌ ವಿಚಾರಣೆಯ ಬಳಿಕ ಸಂತ್ರಸ್ತೆಯ ಅಪಹರಣ ಪ್ರಕರಣದಲ್ಲಿ  ಮಾಜಿ ಸಚಿವ ಹೆಚ್‌ಡಿ ರೇವಣ್ಣಗೆ  ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

ಶಾಸಕರು- ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆಯ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ್‌ ಗಜಾನನ ಭಟ್ ಅವರಿದ್ದ ಪೀಠ 5 ಲಕ್ಷ ಬಾಂಡ್‌, ಇಬ್ಬರು ಶ್ಯೂರಿಟಿ, ಸಾಕ್ಷಿಗಳ ಮೇಲೆ ಪ್ರಭಾವ ಬೀರಬಾರದು, ಎಸ್‌ಐಟಿ ತನಿಖೆ ನಡೆಸಬೇಕು ಎಂದು ಷರತ್ತು ವಿಧಿಸಿ ಜಾಮೀನು ಮಂಜೂರು ಮಾಡಿದರು. 

ಇಂದು ಬೆಳಗ್ಗೆ ಸಂಜೆಯವರೆಗೆ ಕೋರ್ಟ್‌ ಸುಧೀರ್ಘ ವಿಚಾರಣೆ ನಡೆಸಿತು. ವಿಶೇಷ ತನಿಖಾ ತಂಡ (SIT) ಪರ ವಕೀಲರು ರೇವಣ್ಣ ಪ್ರಭಾವಿ ಸಾಕ್ಷ್ಯ ನಾಶ ಮಾಡುವ ಆತಂಕವಿದೆ ಯಾವುದೇ ಕಾರಣಕ್ಕೂ ಜಾಮೀನುೂರು ಮಾಡಬಾರದು ಎಂದು ವಾದಿಸಿದರು.

ಮರಣದಂಡನೆ ಮತ್ತು ಜೀವಾವಧಿ ಶಿಕ್ಷೆ ವಿಧಿಸುವ ಅಪರಾಧ ಇದ್ದರೆ ಜಾಮೀನು ತಿರಸ್ಕರಿಸಬಹುದು. ಆದರೆ ನನ್ನ ಕಕ್ಷಿದಾರ ರೇವಣ್ಣ ಪ್ರಕರಣದಲ್ಲಿ ಯಾವುದೇ ಸತ್ಯ ಮತ್ತು ಸಾಂದರ್ಭಿಕ ಸಾಕ್ಷಿಗಳಿಲ್ಲ. ರೇವಣ್ಣ ಮನೆಯಲ್ಲಿ ಮಹಿಳೆ 10 ವರ್ಷ ಕೆಲಸ ಮಾಡುತ್ತಿದ್ದಾರೆ. ಹೀಗಾಗಿ ಯಾವುದೇ ಅಪಹರಣ ಮಾಡಿಲ್ಲ. ಜಾಮೀನು ನೀಡಬಹುದು ಎಂದು ವಕೀಲ ನಾಗೇಶ್ ವಾದಿಸಿದರು.

ಎರಡು ಕಡೆಯ ವಾದ ಆಲಿಸಿದ ನ್ಯಾಯಾಧೀಶರು ಸಂಜೆ 4 ಗಂಟೆಗೆ ವಿಚಾರಣೆ ಪೂರ್ಣಗೊಳಿಸಿ ಸಂಜೆ 6:30ಕ್ಕೆ ಆದೇಶ ಪ್ರಕಟಿಸಿದರು.

ಮೇ 8 ರಂದು ಬೆಂಗಳೂರಿನ 17ನೇ ನ್ಯಾಯಾಲಯ 7 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಆದೇಶ ನೀಡಿತ್ತು. ಈ ಆದೇಶದ ಅನ್ವಯ ರೇವಣ್ಣ ಪರಪ್ಪನ ಅಗ್ರಹಾರಕ್ಕೆ ವಿಚಾರಣಾಧೀನ ಕೈದಿಯಾಗಿ ಹೋಗಿದ್ದರು. ಮಂಗಳವಾರ ಸಂಜೆ ರೇವಣ್ಣ ಜೈಲಿನಿಂದ ಬಿಡುಗಡೆಯಾಗಲಿದ್ದಾರೆ.

Related Post

Leave a Reply

Your email address will not be published. Required fields are marked *