Breaking
Wed. Dec 25th, 2024

ಭಾರತೀಯ ಶಿಕ್ಷಣವನ್ನ ಪಡೆಯಬೇಕು ಎಂಬ ಉದ್ದೇಶದಿಂದ ‘ರಾಷ್ಟ್ರೀಯ ಶಿಕ್ಷಣ ನೀತಿ-2020’ ಅನ್ನು ಭಾರತ ಸರ್ಕಾರ ಜಾರಿಗೆ ತಂದಿದ್ದು ಅದನ್ನು ಅನುಷ್ಠಾನಗೊಳಿಸುವಲ್ಲಿ ಕರ್ನಾಟಕ ರಾಜ್ಯ ಮೊದಲ ರಾಜ್ಯ ಎಂಬ ಹೆಗ್ಗಳಿಕೆ….!

ಚಿತ್ರದುರ್ಗ ಮೇ. 13 : ಭಾರತ ದೇಶದ ಭಾರತೀಯ ಶಿಕ್ಷಣ ನೀತಿಜಾರಿಗೆ ಬರಬೇಕು ಮುಂದಿನ ದಿನಗಳಲ್ಲಿ ಹತ್ತಾರು ವರ್ಷಗಳ ನಂತರ ದೇಶದ ಕೌಶಲ್ಯಯುತ ಯುವಶಕ್ತಿ ಹೊರಗೆ ಬರಬೇಕು, ಬ್ರಿಟಿಷ್ ಶಿಕ್ಷಣ ನೀತಿಯಿಂದ ಮುಕ್ತ ಭಾರತೀಯ ಶಿಕ್ಷಣವನ್ನು ಪಡೆಯಬೇಕು ಎಂಬ ಉದ್ದೇಶದಿಂದ ‘ರಾಷ್ಟ್ರೀಯ ಶಿಕ್ಷಣ ನೀತಿ-2020’ ಅನ್ನು ಭಾರತ ಸರ್ಕಾರ ಜಾರಿಗೆ ತಂದಿದ್ದು ಅದನ್ನು ಅನುಷ್ಠಾನಕ್ಕೆ ತಂದಿದ್ದು ಕರ್ನಾಟಕ ರಾಜ್ಯ ಮೊದಲ ರಾಜ್ಯ ಎಂಬ ಹೆಗ್ಗಳಿಕೆಗೆ ಪಾತ್ರವಾಯಿತು. 

ಆದರೆ ಇಂದಿನ ರಾಜ್ಯ ಸರ್ಕಾರ ತನ್ನಚುನಾವಣಾ ಪ್ರಾಣಾಳಿಕೆಯಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿಯನ್ನ ಹಿಂಪಡೆಯುತ್ತೇವೆ ಎಂದು ಹೇಳಿದ ಕಾರಣಕ್ಕೋಸ್ಕರ ಒಂದು ಶಿಕ್ಷಣ ನೀತಿಯನ್ನ ಬದಲಾವಣೆ ಮಾಡಲು ಹೊರಟಿರುವ ಸರ್ಕಾರದ ನಡೆಯನ್ನು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ತೀವ್ರವಾಗಿ ಖಂಡಿಸುತ್ತದೆ. 

ಜಿಲ್ಲಾಧಿಕಾರಿಗಳು ಮುಖಾಂತರ ಮುಖ್ಯಮಂತ್ರಿಗಳು ಮತ್ತು ಉನ್ನತ ಶಿಕ್ಷಣ ಸಚಿವರಿಗೆ ಮನವಿ ಸಲ್ಲಿಸಿದ ಎಬಿವಿಪಿ ಪದಾಧಿಕಾರಿಗಳು ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ ಒಂದೇ ರೀತಿಯ ಶಿಕ್ಷಣ ಪದ್ಧತಿ ಇರಬೇಕು, ಭಾರತೀಯ ಯೋಗ ಮತ್ತು ಇತರ ಕೌಶಲ್ಯಗಳನ್ನು ನೀಡುವ ಉದ್ದೇಶ ರಾಷ್ಟ್ರೀಯ ಶಿಕ್ಷಣ ನೀತಿಯ ಉದ್ದೇಶವಾಗಿದೆ, ಮುಂದಿನ 20-25 ವರ್ಷಗಳಲ್ಲಿ ಬದಲಾವಣೆಯನ್ನು ಮುಂದಿಟ್ಟುಕೊಂಡು ಈ ನೀತಿಯ ಹಲವಾರು ಶಿಕ್ಷಣ ತಜ್ಞರು ತಯಾರಿಸಿದ್ದಾರೆ , ಆದರೆರಾಜ್ಯ ಸರ್ಕಾರದ ರಾಷ್ಟ್ರೀಯತೆಯನ್ನ ತುಂಡು ಮಾಡಿ ಪ್ರತ್ಯೇಕತೆಯ ಹೆಜ್ಜೆಯನ್ನಿಟ್ಟು ಕರ್ನಾಟಕವನ್ನು ಹಿಮ್ಮುಖ ಚಲನೆಗೆ ಕೊಂಡೊಯ್ಯುತ್ತದೆ, ಭಾರತೀಯ ಜೀವನ ವಿರೋಧಿ ನೀತಿಯನ್ನು, ಭಾರತೀಯ ಜೀವನಶೈಲಿಯನ್ನು ವಿರೋಧಿಸುವ ನೀತಿಯನ್ನು, ಇಂಗ್ಲಿಷ್ ಪದ್ಧತಿ ಪದ್ಧತಿಯ ಶಿಕ್ಷಣವನ್ನು ಒಪ್ಪಿಕೊಳ್ಳುವ ನೀತಿಯನ್ನು, ಲಿಬರಲ್ ಎಜುಕೇಶನ್ ನಿಂದ ಹಿನ್ನಡೆಗೆ ನೀತಿಯನ್ನು ಅನುಸರಿಸಲು, ಯುಜಿಸಿ ನಿಯಮಾವಳಿಗಳನ್ನು ಕಡೆಗಣಿಸುವ ನೀತಿಯನ್ನ, ರಾಜ್ಯ ಸರ್ಕಾರವು ರಾಜ್ಯದ ಸರ್ಕಾರವನ್ನು ತೆಗೆದುಕೊಳ್ಳುತ್ತದೆ. ವಿದ್ಯಾರ್ಥಿ ಸಮುದಾಯಕ್ಕೆ ಅನ್ಯಾಯವಾಗಿದೆ, ಯುಪಿಎಸ್ ಮತ್ತು ಇತರ ಸ್ಪರ್ಧಾತ್ಮಕ ಕೋರ್ಸ್‌ಗಳಿಗೆ ಹೋಗುವ ಕರ್ನಾಟಕ ರಾಜ್ಯದ ಶಿಕ್ಷಣ ಪದ್ಧತಿಯನ್ನು ಬದಲಾಯಿಸುವುದರಿಂದ ಅನ್ಯಾಯವಾಗುತ್ತದೆ 

ಕೇವಲ ರಾಜಕೀಯ ಕಾರಣಕ್ಕೋಸ್ಕರ ಒಂದು ಉತ್ತಮ ಪ್ರಯೋಗಶೀಲ ಶಿಕ್ಷಣದಲ್ಲಿ ಬದಲಾವಣೆ ಮಾಡಿ ವಿದ್ಯಾರ್ಥಿಗಳು ಜೀವನದಲ್ಲಿ ಆಟವಾಡಲು ಹೊರಟಿರುವ ಸರ್ಕಾರದ ನಡೆ ನಿಜವಾಗಿ ಮುಂದಿನ ದಿನಗಳಲ್ಲಿ ಬಹು ದೊಡ್ಡ ಮಾರಕ ಬೆಳೆ, ಎನ್‌ಐಪಿ ಜಾರಿ ಮಾಡಿದ ಕಾರಣಕ್ಕಾಗಿ ನೂರಾರು ಕೋಟಿ ರೂಪಾಯಿ ಅನುದಾನವನ್ನು ರಾಜ್ಯ ವಿಶ್ವವಿದ್ಯಾಲಯಗಳಿಗೆ ಕೇಂದ್ರ ಸರ್ಕಾರ ನೀಡಿದೆ, ಒಂದು ವೇಳೆ ಎನ್.ಐ.ಪಿ.ಯನ್ನು ರದ್ದುಪಡಿಸಲಾಗಿದೆ. ವಿಶ್ವವಿದ್ಯಾಲಯದ ಅನುದಾನವನ್ನು ಕರ್ನಾಟಕ ರಾಜ್ಯ ಸರ್ಕಾರ ಕಳೆದುಕೊಂಡಿತು. ಕರ್ನಾಟಕ ರಾಜ್ಯದ ಮುಖ್ಯಮಂತ್ರಿಗಳ ಉನ್ನತ ಶಿಕ್ಷಣ ಸಚಿವರು ಈ ಎಲ್ಲ ವಿಷಯವನ್ನು ಗಮನದಲ್ಲಿಟ್ಟುಕೊಂಡು ತರಾಟೂರಿಯಲ್ಲಿ ಮಧ್ಯಂತರ ಪದ್ಧತಿಯ ಪ್ರಕಾರ ಹಿಂದಿನ ಶಿಕ್ಷಣವನ್ನು ಜಾರಿಗೆ ತರುತ್ತೇವೆ ಎಂಬ ಆದೇಶವನ್ನು ನೀಡಿರುವುದು ಎಬಿವಿಪಿ ಖಂಡಿಸುತ್ತದೆ ಕೂಡಲೇ ರಾಜ್ಯ ಸರ್ಕಾರ ಈ ನಿರ್ಧಾರದಿಂದ ಹಿಂದೆ ಸರಿದು ಎನ್.ಐ.ಪಿ.ಯಲ್ಲಿ ಆಗಿರುವ ಲೋಪದೋಷಗಳನ್ನು ಸರಿಮಾಡಿ ರಾಜ್ಯದಲ್ಲಿ ಸಮರ್ಪಕವಾದ ಎನ್.ಐ.ಪಿ. ಕರ್ನಾಟಕ ರಾಜ್ಯವಾನ್ನಗಿ ಪದ್ಧತಿ ತೆಗೆದುಕೊಳ್ಳುವ ಮಹತ್ತರ ಜವಾಬ್ದಾರಿಯನ್ನು ಮಾಡಬೇಕೆಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತು ತೋರಿಸುತ್ತದೆ. ಒಂದು ವೇಳೆ ರಾಷ್ಟ್ರೀಯ ಶಿಕ್ಷಣ ನೀತಿಯನ್ನೂ ರದ್ದುಪಡಿಸಿದರೆ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆ ಎಂಬ ಎಚ್ಚರಿಕೆಯನ್ನು ಈ ಮೂಲಕ ರಾಜ್ಯ ಸರ್ಕಾರಕ್ಕೆ ನೀಡುತ್ತೇವೆ.

ಈ ಸಂದರ್ಭದಲ್ಲಿ ರಾಜ್ಯ ಕಾರ್ಯಕಾರಿಣಿ ಸದಸ್ಯರು, ಕನಕರಾಜ್ ಕೋಡಿಹಳ್ಳಿ, ನಗರ ಕಾರ್ಯದರ್ಶಿ ಗೋಪಿ, ವಿದ್ಯಾರ್ಥಿ ಪ್ರಮುಖ ಚಂದನ, ಚಿತ್ರಸ್ವಾಮಿ, ದರ್ಶನ್, ಮಧು, ಕಾರ ್ಯಕರ್ತರಾದ ಯುವರಾಜ್ ಈ ಸಂದರ್ಭದಲ್ಲಿ ಮನೋಜ್ಞ.

Related Post

Leave a Reply

Your email address will not be published. Required fields are marked *