Breaking
Wed. Dec 25th, 2024

ಹೈದರಾಬಾದ್ ಬಿಜೆಪಿ ಅಭ್ಯರ್ಥಿ ಮಾಧವಿ ಲತಾ  ವಿರುದ್ಧ ಪ್ರಕರಣ ದಾಖಲು…!

ಹೈದರಾಬಾದ್: ಮುಸ್ಲಿಂ ಮಹಿಳೆಯರಿಗೆ ಬುರ್ಖಾ ತೆಗೆದು ವೋಟರ್ ಐಡಿ ತೋರಿಸುವಂತೆ ಒತ್ತಡ ಹೇರಿದ್ದಕ್ಕಾಗಿ ಹೈದರಾಬಾದ್ ಬಿಜೆಪಿ ಅಭ್ಯರ್ಥಿ ಮಾಧವಿ ಲತಾ  ವಿರುದ್ಧ ಪ್ರಕರಣ ದಾಖಲಾಗಿದೆ.

ಹೈದರಾಬಾದ್ ಲೋಕಸಭಾ ಕ್ಷೇತ್ರದಿಂದ   ಸ್ಥಳೀಯ ಮಾಧವಿ ಲತಾ ಅವರು ಸೋಮವಾರ ಮತದಾನ ಕೇಂದ್ರದಲ್ಲಿ ಮುಸ್ಲಿಂ ಮಹಿಳೆಯರ ಬಳಿ ಹೋಗಿ ಬುರ್ಖಾ ತೆಗೆಯುವಂತೆ ಹೇಳುತ್ತಿರುವ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಭಾರೀ ವಿವಾದ ಸೃಷ್ಟಿಸಿದೆ.

ವೈರಲ್ ಆದ ವೀಡಿಯೋದಲ್ಲಿ, ಮಾಧವಿ ಲತಾ ಅವರು ಬುರ್ಖಾ ಧರಿಸಿದ ಮುಸ್ಲಿಂ ಮಹಿಳೆಯರನ್ನು ಪರಿಶೀಲನೆಗಾಗಿ ತಮ್ಮ ಬುರ್ಖಾ ತೆಗೆಯುವಂತೆ ಹೇಳುವುದನ್ನು ತೋರಿಸಲಾಗಿದೆ. ನೀವು ಎಷ್ಟು ವರ್ಷಗಳ ಹಿಂದೆ ಇದನ್ನು  ವೋಟರ್ ಐಡಿ ಮಾಡಿದ್ದೀರಿ ಎಂದು ಇದೇ ವೇಳೆ ಮುಸ್ಲಿಂ ಮಹಿಳೆಯರನ್ನು ಪ್ರಶ್ನಿಸಿದ್ದಾರೆ. ಜೊತೆಗೆ ಹೆಚ್ಚಿನ ಪರಿಶೀಲನೆಗಾಗಿ ಆಧಾರ್ ಕಾರ್ಡ್  ಕೂಡ ಕೊಡುವಂತೆ ಮನವಿ ಮಾಡಲಾಗಿದೆ. 

ಈ ದೃಶ್ಯ ವೈರಲ್ ಆಗುತ್ತಿದ್ದಂತೆಯೇ ಪ್ರತಿಕ್ರಿಯಿಸಿದ ಮಾಧವಿ ಲತಾ, ತಮ್ಮ ಕ್ರಮವನ್ನು ಸಮರ್ಥಿಸಿಕೊಂಡಿದ್ದಾರೆ. ನಾನು ಒಬ್ಬಳು ಅಭ್ಯರ್ಥಿ, ಕಾನೂನಿನ ಪ್ರಕಾರ ಮುಖಕ್ಕೆ ಮಾಸ್ಕ್ ಇಲ್ಲದೆ ಗುರುತಿನ ಚೀಟಿಗಳನ್ನು ಪರಿಶೀಲಿಸುವ ಹಕ್ಕು ಇದೆ. ಮುಸ್ಲಿಂ ಮಹಿಳೆಯರ ಬಳಿ ತಮ್ಮ ಬುರ್ಖಾವನ್ನು ತೆಗೆಯುವಂತೆ ಕೇಳುವುದು ದೊಡ್ಡ ವಿಷಯವಲ್ಲ, ಏಕೆಂದರೆ ನಾನು ಪರುಷ, ತಾನೂ ಮಹಿಳೆಯಾಗಿದ್ದೇನೆ ಎಂದು ಅವರು ಹೇಳಿದರು. 

ದಯವಿಟ್ಟು ನಾನು ಐಡಿ ಕಾರ್ಡ್‌ಗಳನ್ನು ನೋಡಿ ಮತ್ತು ಪರಿಶೀಲಿಸಬಹುದೇ ಎಂದು ತುಂಬಾ ವಿನಮ್ರತೆಯಿಂದ ಅವರಲ್ಲಿ ವಿನಂತಿಸಲಾಗಿದೆ. ಆದರೆ ಯಾರಿಗಾದರೂ ದೊಡ್ಡ ಸಮಸ್ಯೆಯಾಗಬೇಕು ಎಂದು ಕೇಳಬೇಕು, ಅವರಿಗೆ ಭಯವಿದೆ ಎಂದು ಅರ್ಥ ಅಂತಾ ಮಾಧವಿ ಲತಾ. ಇತ್ತ ವೀಡಿಯೋ ವೈರಲ್ ಆಗುತ್ತಾ ವಿವಾದವಾಗುತ್ತಿದ್ದಂತೆ ಮಾಯೇಧವಿ ಲತಾ ವಿರುದ್ಧ ಮಲಕಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಹಿಂದೆ ರಾಮನವಮಿ ಮೆರವಣಿಗೆಯ ಸಂದರ್ಭದಲ್ಲಿ ದೇವಸ್ಥಾನದ ಬಾಣ ಬಿಡುವ ಕ್ರಿಯೆಯನ್ನು ಅನುಕರಿಸುವ ವೀಡಿಯೋ ಕೂಡ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಈ ಬೆನ್ನಲ್ಲೇ ಮಾಧವಿ ಲತಾ ಅವರು ಮತ್ತೊಂದು ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ. ಒಟ್ಟಿನಲ್ಲಿ ಇದೀಗ ಮಾಧವಿ ಲತಾ ವಿರುದ್ಧ ಧಾರ್ಮಿಕ ಭಾವನೆಗಳನ್ನು ಕೆರಳಿಸುವ ಉದ್ದೇಶಪೂರ್ವಕ ಕೃತ್ಯಗಳನ್ನು ತಿಳಿಸುವ 295A ಸೇರಿದಂತೆ ಐಪಿಸಿಯ ವಿವಿಧ ವಿಭಾಗಗಳ ಅಡಿಯಲ್ಲಿ ದೂರು ದಾಖಲಿಸಲಾಗಿದೆ. 

ಮಾಧವಿ ಲತಾ ಅವರು ಹೈದರಾಬಾದ್‌ನ ಹಾಲಿ ಸಂಸದ ಮತ್ತು ಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಮತ್ತು ಹಿರಿಯ ಬಿಆರ್‌ಎಸ್ ನಾಯಕ ಗದ್ದಂ ಶ್ರೀನಿವಾಸ್ ಯಾದವ್ ವಿರುದ್ಧ ಕಣಕ್ಕಿಳಿದಿದ್ದಾರೆ.

Related Post

Leave a Reply

Your email address will not be published. Required fields are marked *