ಧಾರವಾಡ : ಮೇ.14: ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆಯು ಇಂದು (ಮೇ.14) ಬೆಳಿಗ್ಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶ್ರೀ ಮಹರ್ಷಿ ಭಗೀರಥ ಜಯಂತಿಯನ್ನು ಆಚರಿಸಲಾಯಿತು.
ಅಪರ ಜಿಲ್ಲಾಧಿಕಾರಿ ಗೀತಾ ಸಿ. ಡಿ ಅವರು ಶ್ರೀ ಮಹರ್ಷಿ ಭಗೀರಥ ಅವರ ಭಾವಚಿತ್ರಕ್ಕೆ ಪೂಜೆಗೆ ಪುಷ್ಪಾರ್ಚನೆ ಸಲ್ಲಿಸಿ, ನಮಿಸಿದರು.
ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಜಯಂತಿ ಕಾರ್ಯಕ್ರಮವನ್ನು ಸರಳವಾಗಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ, ಸಮಾಜದ ಮುಖಂಡರಾದ ಸತೀಶ ಮುರಗೋಡ, ಹನುಮಂತ ಲಾತೂರ, ಲಕ್ಷ್ಮಣ ಉಪ್ಪಾರ, ಕಲ್ಲಪ್ಪ ಉಪ್ಪಾರ ಹಾಗೂ ಹಿರಿಯ ನಾಗರಿಕರು, ಸಾರ್ವಜನಿಕರು ಇತರರು ಇದ್ದರು.