ಹುಬ್ಬಳ್ಳಿ : ಹುಬ್ಬಳ್ಳಿ – ಧಾರವಾಡ ಮಹಾನಗರದಲ್ಲಿ ಕಳೆದ ತಿಂಗಳಿನಿಂದ ನಡೆಯುತ್ತಿರುವ ಅಪರಾಧ ನಾಟಕ ಬಿಜೆಪಿ, ಸಾರ್ವಜನಿಕರು ಕಾನೂನು ಸುವ್ಯವಸ್ಥೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನೇಹಾ ಹಿರೇಮಠ ಕೊಲೆ ನಡೆದಾಗಲಂತೂ ಬೀದಿಗಿಳಿದು ಪ್ರತಿಭಟಿಸಿದ್ದರು.
ಆದರೆ, ಬುಧವಾರ ವೀರಾಪುರ ಓಣಿಯಲ್ಲಿ ಅಂಜಲಿ ಎಂಬ ಯುವತಿ ಕೊಲೆಯಾದ ಬಳಿಕ ಆಡಳಿತಾರೂಢ ಕಾಂಗ್ರೆಸ್ ಪಕ್ಷದ ಮುಖಂಡರು ಬೇಸರ ವ್ಯಕ್ತಪಡಿಸಿದ್ದು ಕಾನೂನು ಸುವ್ಯವಸ್ಥೆ ಕುಸಿದಿದೆ.ಹಿರಿಯ ಪೊಲೀಸ್ ಅಧಿಕಾರಿಗಳು ತಮ್ಮ ಕರ್ತವ್ಯ ನಿರ್ವಹಣೆ ವಿಫಲವಾಗಿದೆ ಎಂದು ದನಿ ಎತ್ತಿರುವುದು ಮಹತ್ವ ಪಡೆದುಕೊಂಡಿದೆ.
ಹೀಗೆ ದನಿ ಎತ್ತಿರುವವರು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಯುವ ಕಾಂಗ್ರೆಸ್ ಮುಖಂಡ ರಜತ್ ಉಳ್ಳಾಗಡ್ಡಿಮಠ ಅವರು.
ಗೃಹ ಸಚಿವ ಡಾ.ಜಿ ಪರಮೇಶ್ವರ ಅವರಿಗೆ ಪತ್ರ ಬರೆದಿರುವ ಅವರು, ಹುಬ್ಬಳ್ಳಿ- ಧಾರವಾಡ ಪೊಲೀಸ್ ಕಮಿಷನರೇಟ್ ಕುರಿತು ಈ ರಚನೆ ಕುರಿತು ಅಸಮರ್ಥವಾಗಿ ಕಾರ್ಯ ನಿರ್ವಹಿಸುತ್ತಿರುವ ಅಧಿಕಾರಿಗಳು ಬದಲಾವಣೆ ಮಾಡಬೇಕು ಎಂದು ಮನವಿ ಮಾಡಿದರು.
ಅಪರಾಧ ಸಂಖ್ಯೆ ಹೆಚ್ಚುತ್ತಿದೆ, ಅವಳಿನಗರದ ಪೊಲೀಸ್ ವೈಫಲ್ಯ ಸರ್ಕಾರಕ್ಕೆ ಕೆಟ್ಟ ಹೆಸರು ಬರುತ್ತಿದೆ. ಹೀಗಾಗಿ, ಪೊಲೀಸ್ ಇಲಾಖೆಯ ಉನ್ನತಾಧಿಕಾರಿಗಳನ್ನು ಹುಬ್ಬಳ್ಳಿ-ಧಾರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ವರ್ಗಾವಣೆ ಮಾಡಿ ಕಾನೂನು ಸುವ್ಯವಸ್ಥೆ ಕಾಪಾಡಬೇಕು ಎಂದು ಮನವಿ ಮಾಡಲಾಗಿದೆ.
ವಿದ್ಯಾರ್ಥಿನಿ ನೇಹಾ ಹಿರೇಮಠ ಸಾವಿನ ನಂತರ ವಿದ್ಯಾಭ್ಯಾಸ, ಉದ್ಯೋಗಗಳಿಗೆ ಹೆಣ್ಣು ಮಕ್ಕಳನ್ನು ಕಳಿಸಲು ಪಾಲಕರು ಹಾಗೂ ಕುಟುಂಬಸ್ಥರು ಹಿಂಜರಿಯುವ ಸನ್ನಿವೇಶ ನಿರ್ಮಾಣವಾಗಿದೆ. ಪದೇ ಪದೇ ಹುಬ್ಬಳ್ಳಿಯಲ್ಲಿ ನಡೆಯುತ್ತಿರುವ ಯುವತಿಯರ ಕೊಲೆ ಪ್ರಕರಣಗಳಿಂದ ಮಹಿಳೆಯರು ಮತ್ತು ಮಕ್ಕಳು ಭಯಭೀತರಾಗಿ ಜೀವನ ನಡೆಸುವ ಸಂದರ್ಭ ನಿರ್ಮಾಣವಾಗಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.
ಮುಖ್ಯವಾಗಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ,ರೌಡಿಗಳನ್ನು ಮಟ್ಟ ಹಾಕುವಲ್ಲಿ, ಪುಂಡ ಪೋಕರಿಗಳನ್ನು ನಿಯಂತ್ರಣ ಮಾಡುವ ಅಧಿಕಾರಿಗಳು ವಿಫಲರಾಗಿದ್ದಾರೆ. ಶೀಘ್ರವೇ ಅವಳಿನಗರಕ್ಕೆ ಖಡಕ್ ಅಧಿಕಾರಿಗಳನ್ನು ನೇಮಕ ಮಾಡಿ ಕಾನೂನು ಸುವವ್ಯಸ್ಥೆ ಕಾಪಾಡಬೇಕು ಎಂದು ಗೃಹ ಸಚಿವರಿಗೆ ಮನವಿ ಮಾಡಲಾಗಿದೆ.