ಹಾಸನ : ಪೆನ್‌ಡ್ರೈವ್ ವೈರಲ್ ಪ್ರಕರಣದ ತನಿಖೆ ಚುರುಕುಗೊಂಡಿದ್ದು, ಹಾಸನದ 18 ಕಡೆ ದಾಳಿಯಲ್ಲಿ ಮಹತ್ವದ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ.
ಈ ಪೈಕಿ 7 ಪೆನ್ ಡ್ರೈವ್, 6 ಹಾರ್ಡ್ ಡಿಸ್ಕ್, ನಾಲ್ಕು ಲ್ಯಾಪ್ ಟಾಪ್, ಮೂರು ಡೆಸ್ಕ್ ಟಾಪ್‌ಗಳನ್ನು ಎಸ್‌ಐಟಿ ಅಧಿಕಾರಿಗಳು ವಶಪಡಿಸಿಕೊಂಡು ಸಿಕ್ಕ ಸಿಸಿ ಕ್ಯಾಮರಾಗಳ ದೃಶ್ಯ ಪರಿಶೀಲನೆ ನಡೆಸಿದ್ದಾರೆ.. ಹಾರ್ಡ್ ಡಿಸ್ಕ್‌ನಲ್ಲಿನ ವೀಡಿಯೋ ಪರಿಶೀಲನೆ ನಡೆಸುತ್ತಿದ್ದಾರೆ.
ಪೆನ್‌ಡ್ರೈವ್ ವೀಡಿಯೋ ಲ್ಯಾಪ್ ಟಾಪ್ ಹಾಗೂ ಡೆಸ್ಕ್ ಟಾಪ್‌ಗೆ ಕಾಪಿ ಮಾಡಿ ನಂತರ ಬೇರೆಯವರಿಗೆ ಹಂಚಿರುವ ಆರೋಪ ಇದೆ ಎನ್ನಲಾಗಿದ್ದು, ಹಾರ್ಡ್‌ಡಿಸ್ಕ್‌ನ ಮೂರು ತಿಂಗಳ ವೀಡಿಯೋ ಪರಿಶೀಲನೆ ನಡೆಸುತ್ತಿದ್ದಾರೆ.
ವಿಡಿಯೋ ಹಂಚಿಕೆಯ ಆರೋಪ ಎದುರಿಸು ತ್ತಿರುವ ಮನೆ, ಕಛೇರಿಗೆ ಬಂದು ಹೋಗಿರುವ ಬಗ್ಗೆ ಎಸ್‌ಐಟಿ ಮಾಹಿತಿ ಕಲೆ ಹಾಕುತ್ತಿದೆ. ವೀಡಿಯೋ ಪರಿಶೀಲನೆ ಬಳಿಕ ಎಲೆಕ್ಟ್ರಾನಿಕ್ ಉಪಕರಣಗಳನ್ನು ವಶಕ್ಕೆ ಪಡೆದ ಎಸ್ ಐ ಟಿ ಅಧಿಕಾರಿಗಳು ಎಫ್‌ಎಸ್‌ಎಲ್‌ಗೆ ಕಳುಹಿಸಲಿದ್ದಾರೆ.
ಹಾರ್ಡ್‌ಸ್ಕ್ ಹಾಗೂ ಪೆನ್‌ಡ್ರೈವ್‌ನಲ್ಲಿ ಡಿಲೀಟ್ ಆಗಿರಬಹುದಾದ ಮಾಹಿತಿಗಳ ಬಗ್ಗೆಯೂ ಪರಿಶೀಲನೆ ನಡೆಯುತ್ತಿದ್ದು, ಮಾಹಿತಿ ಪಕ್ಕಾ ಆದ ಬಳಿಕ ಮತ್ತಷ್ಟು ಕಡೆ ದಾಳಿ ಸಾಧ್ಯತೆ ಇದೆ ಎನ್ನಲಾಗುತ್ತಿದೆ.