Breaking
Wed. Dec 25th, 2024
ಬೆಂಗಳೂರು : ರಾಜ್ಯದಲ್ಲಿ ಭಾರಿ ಸುದ್ದಿಗೆ ಗ್ರಾಸವಾಗಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಸೆಕ್ಸ್ ಹಗರಣದ ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಯಕ ದೇವರಾಜೇಗೌಡ ಆರೋಪದ ಬೆನ್ನಲ್ಲೇ ”ಪೆನ್ ಡ್ರೈವ್ ಗ್ಯಾಂಗ್” ಎಂದು 4 ಸಚಿವರ ಹೆಸರುಗಳನ್ನು ಜೆಡಿಎಸ್ ಬಹಿರಂಗಗೊಳಿಸಿದೆ.
ಬಿಜೆಪಿ ನಾಯಕ ದೇವರಾಜೇಗೌಡ ಆರೋಪದ ಬೆನ್ನಲ್ಲೇ ಜೆಡಿಎಸ್ ಟ್ವೀಟ್ ಮಾಡಿದ್ದು, ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದು ನಾಲ್ವರು ಅಧಿಕಾರಿಗಳ ಹೆಸರುಗಳನ್ನು ಬಹಿರಂಗಪಡಿಸಿದ್ದಾರೆ. ಟ್ವೀಟ್ ನಲ್ಲಿ, ‘1.ಡಿಸಿಎಂ ಡಿ.ಕೆ.ಶಿವಕುಮಾರ್ , 2.ಕೃಷಿ ಸಚಿವ ಚೆಲುವರಾಯಸ್ವಾಮಿ, 3.ಕಂದಾಯ ಸಚಿವ ಕೃಷ್ಣಭೈರೇಗೌಡ, 4. ಐಟಿ ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಪ್ಲಸ್ ಇನ್ನೂ ಒಬ್ಬ ಹಾಗೂ ಮಾಜಿ ಸಂಸದ ಎಲ್.ಆರ್.ಶಿವರಾಮೇಗೌಡ.
ಇವರೆಲ್ಲರೂ ಹೂಡಿರುವ ಸಂಚು ಏನ್ ಗೊತ್ತಾ? : ಪ್ರಧಾನಿ ನರೇಂದ್ರ ಮೋದಿ ಅವರು ಹಾಗೂ ಮಾಜಿ ಮುಖ್ಯಮಂತ್ರಿಗಳಾದ ಕುಮಾರಸ್ವಾಮಿ ಅವರಿಗೆ ಕೆಟ್ಟ ಹೆಸರು ತರುವುದು. ಈ ಸಂಚು ಸಾಕಾರಗೊಳಿಸಲು ಸಿಡಿ ಮಾಡಿದ ಶಿವಕುಮಾರ್ ಸಾಹೇಬರು ವಕೀಲರಾದ ದೇವರಾಜೇಗೌಡರಿಗೆ ಆಫರ್ ಮೊತ್ತ ಬರೋಬ್ಬರಿ 100 ಕೋಟಿ ಎಂದು ಟ್ವೀಟ್ ನಲ್ಲಿ ಬರೆದುಕೊಂಡಿದ್ದಾರೆ.
100 ಕೋಟಿ ಆಫರ್ ಕೊಟ್ಟಿದ್ದ ಡಿಕೆ ಶಿವಕುಮಾರ್ : ಪೆನ್‌ಡ್ರೈವ್ ಪ್ರಕರಣದ ಬಗ್ಗೆ ವಕೀಲ ದೇವರಾಜೇಗೌಡ (ದೇವರಾಜೇಗೌಡ) ಹೊಸ ಬಾಂಬ್ ಸಿಡಿಸಿದ್ದಾರೆ. ಪೆನ್‌ಡ್ರೈವ್‌ ರೆಡಿ ಮಾಡಿದೆ ಡಿ.ಕೆ.ಶಿವಕುಮಾರ್. ಹ್ಯಾಂಡಲ್ ಮಾಡಲು ನಾಲ್ವರು ಸಚಿವರ ಸಮಿತಿ ರಚಿಸಿದ್ದರು. ಪೆಂಡ್ರೈವ್ ಹಂಚಿಕೆ ಮಾಡಿದ್ದು ಕುಮಾರಸ್ವಾಮಿ ಎಂದು ಹೇಳಲು ನನಗೆ 100 ಕೋಟಿ ಆಫರ್ ನೀಡಿದ್ದರು ಎಂದು ಗಂಭೀರ ಆರೋಪ ಮಾಡಿದ್ದಾರೆ.
ದೇವರಾಜೇಗೌಡ ಹೇಳಿದ್ದೇನು? : ಕಾರ್ತಿಕ್ ಕರೆಸಿಕೊಂಡು ಸಂಪೂರ್ಣ ಮಾಹಿತಿ ಪಡೆದು ಪೆನ್‌ಡ್ರೈವ್ ರೆಡಿ ಮಾಡಿದ್ದಾರೆ ಡಿ.ಕೆ.ಶಿವಕುಮಾರ್. ನಾಲ್ಕು ಜನ ಮಂತ್ರಿಗಳ ಸಮಿತಿ ಮಾಡಿದರು. ಚೆಲುವರಾಯಸ್ವಾಮಿ, ಕೃಷ್ಣಭೈರೇಗೌಡ, ಪ್ರೀಯಾಂಕ ಖರ್ಗೆ ಮತ್ತು ಇತರ ಸಚಿವರು. ನಾಲ್ಕು ಮಂತ್ರಿಗಳ ತಂಡ ರಚನೆ ಮಾಡಿ ಇದನ್ನು ಹ್ಯಾಂಡಲ್ ಮಾಡಲು ಬಿಟ್ಟಿದ್ದರು.ಅಲ್ಲದೇ ಡಿಕೆ ಶಿವಕುಮಾರ್ 100 ಕೋಟಿ ರೂ. ಆಫರ್ ಕೊಟ್ಟಿದ್ದಾರೆ. ಸ್ಥಳಕ್ಕೆ ಡಿಕೆ ಶಿವಕುಮಾರ್ ಅವರು ನನ್ನನ್ನು ಕರೆಸಿ ಮಾತನಾಡುತ್ತಿದ್ದರು.
ಪೆನ್‌ಡ್ರೈವ್‌ ಅನ್ನು ಕುಮಾರಸ್ವಾಮಿ ಹಂಚಿದ್ರು ಎಂದು ಹೇಳು ನಿನಗೆ ಸಮಸ್ಯೆ ಆಗಲ್ಲ ಸೆಕ್ಯೂರ್ ಮಾಡುತ್ತೇನೆ ಎಂದು ಹೇಳಿದ್ದರು. ಇದಕ್ಕೆ ದೊಡ್ಡಮಟ್ಟದ 100 ಕೋಟಿ ಹಣದ ಆಫರ್ ಕೊಟ್ಟರು. ಈ ಮೇಲಿನ ಐದು ಕೋಟಿ ರೂಪಾಯಿ ಅಡ್ವಾನ್ಸ್ ದುಡ್ಡನ್ನ ಬೌರಿಂಗ್ ಕ್ಲಬ್‌ನ 110 ರೂಂಗೆ ಕಳುಹಿಸಿದ್ದರು ಎಂದು ದೇವರಾಜೇ ಗೌಡ ಆರೋಪಿಸಿದ್ದಾರೆ.
ಅದೇ ಚನ್ನರಾಯಪಟ್ಟಣ ಮಾಜಿ ವಿಧಾನಪರಿಷತ್ ಸದಸ್ಯ ಗೋಪಾಲಸ್ವಾಮಿ ಅವರಿಗೆ ಐದು ಕೋಟಿ ನಗದು ಕೊಟ್ಟು ಸಂಧಾನಕ್ಕೆ ಕಳುಹಿಸಿದ್ದರು. ಆದರೆ, ಇದಕ್ಕೆ ನಾನು ಒಪ್ಪದೇ ಇದ್ದಾಗ ದೊಡ್ಡ ಹಗರಣ ಆಗದಿದ್ದರೆ ಮೋದಿಗೆ, ಕುಮಾರಸ್ವಾಮಿಗೆ ಹೆಸರು ತರಲು ಸಂಚು ಮಾಡಿದ್ರು.

Related Post

Leave a Reply

Your email address will not be published. Required fields are marked *