ಬೆಳಗಾವಿ : ದೂದ್‌ಗಂಗಾ ನದಿಯಲ್ಲಿ ಬಟ್ಟೆ ತೊಳೆಯಲು ಹೋಗಿ ನಾಲ್ವರು ನೀರುಪಾಲಾಗಿರುವ ಘಟನೆ ಮಹಾರಾಷ್ಟ್ರದ ಕೊಲ್ಹಾಪುರ ಜಿಲ್ಲೆ ಕಾಗಲ ತಾಲೂಕಿನ ಬಸ್ತವಾಡೆ ಗ್ರಾಮದಲ್ಲಿ ಶನಿವಾರ ನಡೆದಿದೆ.
ಇಂದು ಬೆಳಗ್ಗೆ ನದಿಯಲ್ಲಿ ಬಟ್ಟೆ ತೊಳೆಯಲು ಹೋಗಿದ್ದಾರೆ. ಈ ವೇಳೆ ಇಬ್ಬರು ಕಾಲು ಜಾರಿ ನದಿಯಲ್ಲಿ ಬಿದ್ದಿದ್ದಾರೆ. ಇವರನ್ನು ಕಾಪಾಡಲು ಹೋಗಿದ್ದಾರೆ. ಈ ವೇಳೆ ನಾಲ್ವರೂ ನೀರಲ್ಲಿ ಮುಳುಗಿ ಮೃತಪಟ್ಟಿದ್ದಾರೆ.
ಮೃತರು ಕಾಗಲ ತಾಲೂಕಿನ ಅನ್ನುರ ಗ್ರಾಮದ ಜಾತ್ರೆಗೆ ಬಂದಿದ್ದರು ಎನ್ನಲಾಗಿದ್ದು, ಇಬ್ಬರು ಬೆಳಗಾವಿ ಜಿಲ್ಲೆಯ ಅಥಣಿ ನಿವಾಸಿಗಳಾಗಿದ್ದು, ಇಬ್ಬರು ಮಹಾರಾಷ್ಟ್ರದ ಮುರ್ಗುಡ್ ಗ್ರಾಮದವಾರಿದ್ದಾರೆ. ಮೃತರನ್ನು ಬೆಳಗಾವಿಯ ಅಥಣಿಯ ರೇಷ್ಮಾ ದಿಲೀಪ್(34) ಮತ್ತು ಯಶ್ ದಿಲೀಪ್(17) ಹಾಗೂ ಮಹಾರಾಷ್ಟ್ರದ ಮುರ್ಗುಡ್ ಗ್ರಾಮದ ಜಿತೇಂದ್ರ ವಿಲಾಸ್ ಲೋಕ್ರೆ(36) ರುಕ್ದಿ ಗ್ರಾಮದ ಸವಿತಾ ಅಮರ್ ಕಾಂಬಳೆ(27) ಎಂದು ಗುರುತಿಸಲಾಗಿದೆ.
ಜಿತೇಂದ್ರ ವಿಲಾಸ್ ಲೋಕ್ರೆ, ಸವಿತಾ ಅಮರ್ ಕಾಂಬಳೆ, ರೇಷ್ಮಾ ದಿಲೀಪ್ ಮೃತದೇಹಗಳು ಪತ್ತೆಯಾಗಿದ್ದು, ಯಶ್ ದಿಲೀಪ್ ಮೃತದೇಹಕ್ಕಾಗಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ. ಈ ಸಂಬಂಧ ಕಾಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.