ಹಿರಿಯೂರು, ಮೇ. 19 : ಪ್ರತ್ಯೇಕ ಘಟನೆಯಲ್ಲಿ ನಿಲ್ಲಿಸಿದ್ದ ಎರಡು ಲಾರಿಗಳಲ್ಲಿ ಆಕಸ್ಮಿಕ ಬೆಂಕಿ ಸಂಭವಿಸಿದ್ದು, ಎರಡು ಲಾರಿಯ ಮುಂಭಾಗದಲ್ಲಿ ಸಂಪೂರ್ಣ ಸುಟ್ಟು ಹೋದ ಘಟನೆ ನಡೆದಿದೆ.
ನಗರದ ರಾಷ್ಟ್ರೀಯ ಹೆದ್ದಾರಿ ನಾಲ್ಕರ ಬೆಂಗಳೂರು ರಸ್ತೆಯ ಸ್ವಾಮಿಯಪ್ಪ ಹೋಟೆಲ್ ಬಳಿ ರಸ್ತೆಯ ಪಕ್ಕದಲ್ಲಿ ತಮಿಳುನಾಡು ನಂಬರಿನ ಲಾರಿಯ ಮುಂಭಾಗದಲ್ಲಿ ಬೆಂಕಿ ಕಾಣಿಸಿಕೊಂಡು, ಹೊತ್ತಿ ಉರಿದಿದೆ.
ಇದಲ್ಲದೆ ತಾಲೂಕಿನ ಕೆಆರ್ ಹಳ್ಳಿ ಗೇಟ್ ಬಳಿಯ ಡಾಬಾ ಹೋಟೆಲ್ ಬಳಿ ನಿಲ್ಲಿಸಿದ್ದ ಲಾರಿ ಟ್ರಕ್ ನಲ್ಲಿ ಬೆಂಕಿ ಕಾಣಿಸಿಕೊಂಡು ಮುಂಭಾಗದಲ್ಲಿ ಸುಟ್ಟು ಕರಕಲಾಗಿದೆ. ವಿಷಯ ತಿಳಿದ ತಕ್ಷಣ ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಭೇಟಿ ನೀಡಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಘಟನೆ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ.