Breaking
Wed. Dec 25th, 2024

ಬೆಂಗಳೂರಿನ  ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲೇ  ತುರ್ತು ಭೂಸ್ಪರ್ಶ…!

ಬೆಂಗಳೂರು, ಮೇ 19: ಕೊಚ್ಚಿಗೆ ತೆರಳುತ್ತಿದ್ದ ಏರ್ ಇಂಡಿಯಾ  ವಿಮಾನದಲ್ಲಿ ಹೊಗೆ ಕಾಣಿಸಿಕೊಂಡಿದ್ದರಿಂದ ಬೆಂಗಳೂರಿನ  ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲೇ  ತುರ್ತು ಭೂಸ್ಪರ್ಶವಾಗಿದೆ. AI 1132 ಏರ್ ಇಂಡಿಯಾ ವಿಮಾನ ರಾತ್ರಿ 11.20ಕ್ಕೆ ಬೆಂಗಳೂರಿನಿಂದ ಕೇರಳದ ಕೊಚ್ಚಿಗೆ ತೆರಳಲು ಟೇಕ್ ಆಫ್ ಆಗಿತ್ತು.
ಆದರೆ ವಿಮಾನದಲ್ಲಿ ಏಕಾಏಕಿ ಹೊಗೆ ಕಾಣಿಸಿಕೊಂಡಿದೆ. ಕೂಡಲೆ ಪೈಲಟ್ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲೇ ಎಮರ್ಜೆನ್ಸಿ ಲ್ಯಾಂಡ್ ಮಾಡಿದರು. ಇದರಿಂದ ಭಾರಿ ಅನಾಹುತ ತಪ್ಪಿದೆ. ವಿಮಾನ ಭೂ ಸ್ಪರ್ಶವಾಗುತ್ತಿದ್ದಂತೆ ಅಗ್ನಿಶಾಮಕ ಸಿಬ್ಬಂದಿ ಕೂಡಲೆ ಬೆಂಕಿಯನ್ನು ನಂದಿಸಿದ್ದಾರೆ. ವಿಮಾನದಲ್ಲಿದ್ದ ಸಿಬ್ಬಂದಿ ಸೇರಿ 170 ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ. ಯಾವುದೆ ಪ್ರಾಣಾಪಾಯ ಸಂಭವಿಸಿಲ್ಲ.

Related Post

Leave a Reply

Your email address will not be published. Required fields are marked *