ಹೊಸದುರ್ಗ, ಮೇ. 20 : ಕೃಷಿ ಮಾರುಕಟ್ಟೆಯಲ್ಲಿಯೇ ಡಿ ಗ್ರೂಪ್ ನೌಕರ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಇದನ್ನು ಕಂಡು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಆಡಳಿತ ಕಚೇರಿ ಸಿಬ್ಬಂದಿ ಶಾಕ್ ಆಗಿದ್ದಾರೆ. 55 ವರ್ಷದ ಜಗದೀಶ್ ಆತ್ಮಹತ್ಯೆಗೆ ಶರಣಾದ ವ್ಯಕ್ತಿ ಎಂದು ತಿಳಿದು ಬಂದಿದೆ.
ಸ್ಥಳಕ್ಕೆ ಪೊಲೀಸರು ಬಂದು ಪರಿಶೀಲನೆ ನಡೆಸಿದ್ದಾರೆ. ಮೃತ ದೇಹವನ್ನು ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ. ಜಗದೀಶ್ ಎಪಿಎಂಸಿ ಇಲಾಖೆಯ ಕಾರು ಚಾಲಕನಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಆದರೆ ಇಂದು ಇದ್ದಕ್ಕಿದ್ದ ಹಾಗೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಜಗದೀಶ್ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಯಾವುದೇ ಡೆತ್ ನೋಟ್ ಆಗಲಿ ಸಿಕ್ಕಿಲ್ಲ. ಪೊಲೀಸರು ದೂರು ದಾಖಲಿಸಿಕೊಂಡು, ತನಿಖೆ ಕೈಗೊಂಡಿದ್ದಾರೆ. ತನಿಖೆಯ ಬಳಿಕವಷ್ಟೆ ಮೃತನ ಸಾವಿಗೆ ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ. ಸ್ಥಳಕ್ಕೆ ಹೊಸದುರ್ಗ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನ ನಡೆಸಿದ್ದಾರೆ.