ಚಿತ್ರದುರ್ಗ : ನಗರದ ಜಿಲ್ಲಾಸ್ಪತ್ರೆಯಲ್ಲಿ ಫೆಬ್ರುವರಿ 5 ರಿಂದ ಅಂತರಾಷ್ಟ್ರೀಯ ಗುಣಮಟ್ಟದ 15 ಹೊಸ ಡಯಾಲಿಸೀಸ್ ಯಂತ್ರಗಳೊಂದಿಗೆ ಡಯಾಲಿಸೀಸ್ ಕೇಂದ್ರವನ್ನು ಪ್ರಾರಂಭಿಸಲಾಗಿದೆ.
ಎಲ್ಲಾ ನೊಂದಾಯಿತ ರೋಗಿಗಳಿಗೆ ಉಚಿತವಾಗಿ ಹಾಗೂ ಪ್ರತಿಯೊಬ್ಬ ರೋಗಿಗೂ ಪ್ರತ್ಯೇಕಾವಾದ ಡಿಸ್ಪೋಸಿಬಲ್ ಡಯಾಲೈಸರ್ ಬಳಸಲಾಗುತ್ತದೆ. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ರವೀಂದ್ರ.ಎಸ್.ಪಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.