ನವದೆಹಲಿ : ಇಂದು ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರ 33 ನೇ ಪುಣ್ಯತಿಥಿ. ಈ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷ ಸೋನಿಯಾ ಮತ್ತು ಸಂಸದ ರಾಹುಲ್ ಗಾಂಧಿ `ವೀರ ಭೂಮಿ`ಯಲ್ಲಿ ರಾಜೀವ್ ಗಾಂಧಿ ಸಮಾಧಿಗೆ ಪುಷ್ಪ ನಮನ ಸಲ್ಲಿಸಿದರು.
ಈ ಸಂದರ್ಭದಲ್ಲಿ ಸಚಿನ್ ಪೈಲಟ್, ಪಿ ಚಿದಂಬರಂ, ಕೆಸಿ ವೇಣುಗೋಪಾಲ್ ಸೇರಿದಂತೆ ಇತರ ಹಿರಿಯ ಕಾಂಗ್ರೆಸ್ ನಾಯಕರು. ಪ್ರಿಯಾಂಕಾ ಗಾಂಧಿ ಪತಿ ರಾಬರ್ಟ್ ವಾದ್ರಾ ಕೂಡ ಇವರಿಗೆ ಸಾಥ್.
ಇತ್ತ ಪ್ರಧಾನಿ ನರೇಂದ್ರ ಅವರು ಮೋದಿ ಕೂಡ ರಾಜೀವ್ ಗಾಂಧಿಯವರಿಗೆ ಶ್ರದ್ಧಾಂಜಲಿ ಸಲ್ಲಿಸಿದರು. ನಮ್ಮ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರಿಗೆ ನನ್ನ ನಮನಗಳು ಎಂದು ಮೋದಿ ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.
ರಾಜೀವ್ ಗಾಂಧಿ ಹತ್ಯೆ: 1991 ರಂದು ಮೇ 21 ರಂದು ತಮಿಳುನಾಡಿನ ಶ್ರೀಪೆರಂಬದೂರಿನಲ್ಲಿ ನಡೆದ ಆತ್ಮಾಹುತಿ ಬಾಂಬ್ ದಾಳಿಯ ಮೂಲಕ ರಾಜೀವ್ ಗಾಂಧಿಯವರನ್ನು ಹತ್ಯೆ ಮಾಡಲಾಯಿತು. ಗಾಂಧಿ ಮತ್ತು ಹಂತಕರ ಜೊತೆಗೆ ಕನಿಷ್ಠ 14 ಮಂದಿ ಇದ್ದಾರೆ. ಆ ಬಳಿಕದಿಂದ ವಿಪಿ ಸಿಂಗ್ ಸರ್ಕಾರವು ಪ್ರತಿ ವರ್ಷ ಮೇ 21 ರಂದು ಭಯೋತ್ಪಾದನಾ ವಿರೋಧಿ ದಿನವನ್ನಾಗಿ ಆಚರಿಸುವಂತೆ ಘೋಷಣೆ ಮಾಡಿದೆ. ಈ ದಿನದಂದು ಎಲ್ಲಾ ಸರ್ಕಾರಿ ಕಚೇರಿಗಳು ಮತ್ತು ಇತರ ಸಾರ್ವಜನಿಕ ಸಂಸ್ಥೆಗಳಿಂದ ಭಯಪಡಲು ತೊಡೆದುಹಾಕಲು ಪ್ರತಿಜ್ಞೆ ಮಾಡಲಾಗಿದೆ.