ಸಾಗರ : ಬಸವನಹೊಳೆ ಸಮೀಪದಲ್ಲಿ ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಯುವಕ ಸಾವನ್ನಪ್ಪಿರುವ ಘಟನೆ ನಡೆದಿದೆ. ಆನಂದಪುರ ಮೂಲದ ಫೋಟೋಗ್ರಾಫರ್ ಅರುಣ್ (30) ಸಾವನ್ನಪ್ಪಿರುವ ಮೃತ ಯುವಕನಾಗಿದ್ದಾನೆ.
ಸಾಗರದಿಂದ ಆನಂದಪುರ ಕಡೆ ತೆರಳುತ್ತಿದ್ದ ಅರುಣ್ ರವರ ಬೈಕು ಹಾಗೂ ಆನಂದಪುರ ದಿಂದ ಸಾಗರದ ಕಡೆ ತೆರಳುತ್ತಿದ್ದ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ.
ಗಂಭೀರವಾಗಿ ಗಾಯಗೊಂಡಿದ್ದ ಯುವಕ ನನ್ನು ಶಿವಮೊಗ್ಗ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆ ಕೊನೆ ಉಸಿರೆಳೆದಿದ್ದಾರೆ. ಇನ್ನೊಂದು ಬೈಕ್ ನಲ್ಲಿದ್ದ ಬೈಕ್ ಸವಾರರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.