ಚಿತ್ರದುರ್ಗ : ಜಿಲ್ಲೆಯಲ್ಲಿ ಶೈಕ್ಷಣಿಕ ಚಟುವಟಿಕೆಯಲ್ಲಿ ಸಕ್ರಿಯವಾಗಿರುವ ಹಲವು ಶಿಕ್ಷಣ ಸಂಸ್ಥೆಗಳು ದಾಖಲಾತಿಗಾಗಿ ಮಾನವೀಯತೆಯನ್ನು ಮರೆತು ಸರ್ಕಾರ ನಿಗಧಿಪಡಿಸಿದಕ್ಕಿಂತ ಹೆಚ್ಚಿನ ಶುಲ್ಕ ವಸೂಲಿ ಮಾಡುತ್ತಿರುವ ಬಗ್ಗೆ ಸಾರ್ವಜನಿಕರಿಂದ ಸಾಕಷ್ಟು ದೂರುಗಳು ಬರುತ್ತಿವೆ, ಅಂತಹ ಶಿಕ್ಷಣ ಸಂಸ್ಥೆಗಳ ವಿರುದ್ಧ ನಿರ್ಧಾಕ್ಷಿಣ್ಯ ಕ್ರಮ ಕೈಗೊಳ್ಳುವುದು ಅನಿವಾರ್ಯ ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅವರು ಹೇಳಿದರು.
ಅವರು ಇಂದು ತಮ್ಮ ಕಚೇರಿ ಸಭಾಂಗಣದಲ್ಲಿ ಶೈಕ್ಷಣಿಕ ಪ್ರಗತಿ, ಕಲಿಕೆಯಲ್ಲಿ ಗುಣ ಸುಧಾರಣೆ ಮತ್ತು ಮಾದರಿ ಫಲಿತಾಂಶಗಳ ಕುರಿತು ಶಾಲಾ ಮುಖ್ಯೋಪಾಧ್ಯಾಯರು ಹಾಗೂ ಶಾಲಾ ಆಡಳಿತ ಮಂಡಳಿಯ ಪದಾಧಿಕಾರಿಗಳಿಗೆ ಏರ್ಪಡಿಸಲಾಗಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.
ಶಾಲಾ ದಾಖಲಾತಿಯ ಆರಂಭ, ಅಗತ್ಯ ದಾಖಲೆಗಳು, ದಾಸ್ಲಾತಿಯ ಮುಕ್ತಾಯ ಶುಲ್ಕ, ಸರ್ಕಾರದ ನಂತರ, ಸಾರ್ವಜನಿಕ ನಿಬಂಧನೆಗಳ ಕುರಿತು ಜನಸಾಮಾನ್ಯರಿಗೆ ಹಾಗೂ ಪೋಷಕರಿಗೆ ತಿಳಿಯುವಂತೆ ಶಾಲೆಯ ಪ್ರಕಟಣಾ ಫಲಕವನ್ನು ಬಿತ್ತರಿಸುವಂತೆ ಸೂಚಿಸಿದರು.