Breaking
Fri. Dec 27th, 2024
ಬೆಂಗಳೂರು : ಅಮಾನತು ಶಿಕ್ಷ ಣಕ್ಕೆ ಶಿಫಾರಸು ಮಾಡಿದ್ದು, ಬಾಣಸವಾಡಿ ಠಾಣೆಯ ಇನ್ಸ್‌ಪೆಕ್ಟರ್ ಮತ್ತು ಎಸ್‌ಸಿಪಿ ಅವರಿಗೆ ಪೊಲೀಸ್ ಪೇದೆ ಇರಿದು ಕೊಲೆ ಮಾಡೋದಾಗಿ ಜೀವ ಬೆದರಿಕೆ ಹಾಕಿದ್ದಾರೆ. ರೇಣುಕಾ ನಾಯಕ್ ಜೀವ ಬೆದರಿಕೆ ಹಾಕಿದ ಪೊಲೀಸ್ ಪೇದೆ.
ಕೆಲವು ದಿನಗಳ ಹಿಂದೆ ಬೆಂಗಳೂರಿನ ಬಾಣಸವಾಡಿ ವ್ಯಾಪ್ತಿಯ ರೌಡಿಶೀಟರ್ ಕಾರ್ತಿಕೇಯನ್ ಹತ್ಯೆಯಾಗಿತ್ತು. ಈ ಕೃತ್ಯದಲ್ಲಿ ಕರ್ತವ್ಯಲೋಪ ಎಸಗಿರುವ ಆರೋಪದ ಮೇಲೆ ಪೊಲೀಸ್ ಪೇದೆಗಳಾದ ಸಂತೋಷ್, ಪುಟ್ಟಸ್ವಾಮಿ, ವಿನೋದ್ ಅವರನ್ನು ಪೂರ್ವವಿಭಾಗದ ಡಿಸಿಪಿ ಕುಲದೀಪ್ ಕುಮಾರ್ ಆರ್. ಜೈನ್ ಅಮಾನತುಗೊಳಿಸಿದ್ದರು.
ಪೊಲೀಸ್ ಪೇದೆ ರೇಣುಕಾ ನಾಯಕ್ ಅವರನ್ನೂ ಅಮಾನತು ಮಾಡುವಂತೆ ಶಿಫಾರಸು ಮಾಡಲಾಗಿದೆ. ತನ್ನ ಹೆಸರನ್ನು ಅಮಾನತು ಶಿಕ್ಷೆಗೆ ಶಿಫಾರಸು ಮಾಡಿದ ಕಾರಣಕ್ಕೆ ಬಾಣಸವಾಡಿ ಉಪ ವಿಭಾಗದ ಎಸ್ಸಿಪಿ ಹಾಗೂ ಇನ್ಸ್ಪೆಕ್ಟರ್ ಅವರಿಗೆ ಪೇದೆ ರೇಣುಕಾ ನಾಯಕ್ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ.
ಇದರಿಂದ ಆತಂಕಗೊಂಡ ಎಸ್ಸಿಪಿ ಅವರು, ಕೊನೆ ಕ್ಷಣದಲ್ಲಿ ತಮ್ಮ ಶಿಫಾರಸು ಹಿಂಪಡೆದರು. ಒಂದು ತಿಂಗಳು ರಜೆ ಕೊಟ್ಟು ಕಳಿಸಿದ್ದಾರೆ. ಈ ಪ್ರಕರಣದ ತನಿಖೆಯನ್ನು ಸಿಸಿಬಿಗೆ ವರ್ಗಾಯಿಸಿ ನಗರ ಪೊಲೀಸ್ ಆಯುಕ್ತ ಬಿ. ದಯಾನಂದ್ ಆದೇಶ ಹೊರಡಿಸಿದ್ದಾರೆ.

Related Post

Leave a Reply

Your email address will not be published. Required fields are marked *