ನವದೆಹಲಿ : ಆರ್ಟಿಕಲ್ ಮತ್ತು ಆರ್ಟಿಕಲ್ 370 ಸರ್ಕಾರದ ನಿರ್ಧಾರವನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ. ಈ ಮೂಲಕ ಕೇಂದ್ರ ಸರ್ಕಾರ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಮರುಪರಿಶೀಲನಾ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ವಜಾ ಮಾಡಿದೆ.
ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ನೇತೃತ್ವದ ಸಾಂವಿಧಾನಿಕ ಪೀಠವು ತನ್ನ ಚೇಂಬರ್‌ನಲ್ಲಿ ವಿಚಾರಣೆ ನಡೆಸಿದ ಬಳಿಕ ಅರ್ಜಿಯನ್ನು ವಜಾಗೊಳಿಸಿದೆ.
ಮರುಪರಿಶೀಲನಾ ಅರ್ಜಿಗಳನ್ನು ಪರಿಶೀಲಿಸಿದ ಬಳಿಕ ದಾಖಲೆಯಲ್ಲಿ ಯಾವುದೇ ದೋಷಗಳ ಹಿನ್ನೆಲೆ ಸುಪ್ರೀಂ ಕೋರ್ಟ್ ನಿಯಮಗಳು 2013ರ ಆದೇಶ XLVII ನಿಯಮ 1ರ ಅಡಿಯಲ್ಲಿ ಪರಿಶೀಲನೆಗೆ ಅಗತ್ಯವಿಲ್ಲ ಎಂದು ಹೇಳಿ, ಅರ್ಜಿಗಳನ್ನು ವಜಾಗೊಳಿಸಲಾಗಿದೆ.
ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ಅಂತಿಮವಾಗಿ ಈ ಪ್ರದೇಶಕ್ಕೆ ರಾಜ್ಯತ್ವವನ್ನು ಸ್ಥಾಪಿಸಿದ್ದಾರೆ ಎಂದು ಭರವಸೆಯನ್ನು ದಾಖಲಿಸಿದರು ಸುಪ್ರೀಂ ಕೋರ್ಟ್ ಕಳೆದ ಡಿಸೆಂಬರ್‌ನಲ್ಲಿ ಆರ್ಟಿಕಲ್ 370 ಅನ್ನು ರದ್ದುಗೊಳಿಸುವ ಸರ್ಕಾರದ ನಿರ್ಧಾರ ಸರಿಯಾಗಿದೆ ಎಂದು ಆದೇಶ ನೀಡಲಾಯಿತು.ಈ ಆದೇಶವನ್ನು ಪ್ರಶ್ನಿಸಿ ಅವಾಮಿ ಕಾನ್ಫರೆನ್ಸ್ ಮರುಪರಿಶೀಲನಾ ಅರ್ಜಿ ಸಲ್ಲಿಸಿತ್ತು.