ಚಿತ್ರದುರ್ಗ, ಮೇ. 23 : ಪಕ್ಷದ ಅಭಿವೃದ್ದಿ ಏಳಿಗೆಗಾಗಿ ಶ್ರಮಿಸುತ್ತಿರುವ ಸಮಾಜ ಕಲ್ಯಾಣ ಇಲಾಖೆ ಮಾಜಿ ಸಚಿವ ಹೆಚ್.ಆಂಜನೇಯರವರನ್ನು ವಿಧಾನಪರಿಷತ್‍ಗೆ ನಾಮ ನಿರ್ದೇಶನಗೊಳಿಸುವಂತೆ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಆರ್.ಕೃಷ್ಣಮೂರ್ತಿ ಕಾಂಗ್ರೆಸ್ ನಾಯಕರುಗಳನ್ನು ಒತ್ತಾಯಿಸಿದರು.
ಪತ್ರಕರ್ತರ ಭವನದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ರಾಜ್ಯದಲ್ಲಿ ಅಪಾರ ಅಭಿಮಾನಿಗಳನ್ನು ಹೊಂದಿರುವ ಹೆಚ್.ಆಂಜನೇಯರವರು ಹಿಂದುಳಿದವರು, ದಲಿತರು, ಅಲ್ಪಸಂಖ್ಯಾತರ ಪರವಾಗಿ ಹೋರಾಟ ಮಾಡಿಕೊಂಡು ಬರುತ್ತಿದ್ದಾರೆ. ಎ.ಐ.ಸಿ.ಸಿ. ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಯುವ ನಾಯಕ ರಾಹುಲ್‍ಗಾಂಧಿ, ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಸುರ್ಜೆವಾಲ ಇವರುಗಳು ಹೆಚ್.ಆಂಜನೇಯರವರು ಪಕ್ಷಕ್ಕೆ ಸಲ್ಲಿಸುತ್ತಿರುವ ಸೇವೆಯನ್ನು ಪರಿಗಣಿಸಿ ವಿಧಾನಪರಿಷತ್‍ಗೆ ನೇಮಕ ಮಾಡಿಕೊಳ್ಳುವಂತೆ ಮನವಿ ಮಾಡಿದರು.
ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಆರ್.ನರಸಿಂಹರಾಜ ಮಾತನಾಡಿ ಹೆಚ್.ಆಂಜನೇಯರವರು ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು ಶೋಷಿತರ ಪರವಾಗಿ ಹಿಂದಿನಿಂದಲೂ ಹೋರಾಟ ಮಾಡಿಕೊಂಡು ಬರುತ್ತಿರುವುದರ ಜೊತೆಗೆ ರಾಜ್ಯವನ್ನು ಸುತ್ತಿದ್ದಾರೆ. ಅಂತಹ ನಾಯಕನನ್ನು ವಿಧಾನ ಪರಿಷತ್‍ಗೆ ನಾಮ ನಿರ್ದೇಶನ ಮಾಡಿಕೊಳ್ಳಬೇಕೆಂದು ಆಗ್ರಹಿಸಿದರು. ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರುಗಳಾದ ಬಿ.ಪಿ.ಪ್ರಕಾಶ್‍ಮೂರ್ತಿ, ಶಿವಮೂರ್ತಿ ಇವರುಗಳು ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.