ಮೈಸೂರು, ಮೇ 23: ಮೈಸೂರು ತಾಲೂಕಿನ ಕೆ.ಸಾಲುಂಡಿ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ಸಾವು, 35ಕ್ಕೂ ಹೆಚ್ಚು ಜನ ಅಸ್ವಸ್ಥ ಪ್ರಕರಣಕ್ಕೆ ಸಂಬಂಧಿಸಿದಂತೆ ಪಟ್ಟಣ ಪಂಚಾಯಿತಿಯ ಹಿರಿಯ ಅಧಿಕಾರಿಗಳು ಅಮಾನತುಗೊಳಿಸಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಕೆ.ಸಾಲುಂಡಿ ಗ್ರಾಮಕ್ಕೆ ಭೇಟಿ ನೀಡುವ ಮುನ್ನ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪ್ರಕರಣ ಸಂಬಂಧ ಡಿಸಿ ವರದಿ ಸಲ್ಲಿಸಿ ಅಧಿಕಾರಿಗಳ ವಿರುದ್ಧ ಕ್ರಮಕೈಗೊಂಡಿದ್ದೇವೆ ಎಂದು ಹೇಳಿದ್ದಾರೆ.
ಕುಡಿಯುವ ನೀರಿನ ಟ್ಯಾಂಕರ್‌ಗೆ ಖರೀದಿಸಲು ಸೂಚಿಸಲಾಗಿದೆ. ಕೆ.ಸಾಲುಂಡಿ ಗ್ರಾಮಕ್ಕೆ ಕಲುಷಿತ ನೀರು ಸರಬರಾಜು ಆಗಿದೆ. ಕುಡಿಯುವ ನೀರನ್ನು ಯಾರೂ ಪರೀಕ್ಷೆ ಮಾಡಿಲ್ಲ, ಹೀಗಾಗಿ ಘಟನೆ ನಡೆದಿದೆ. ಸದ್ಯ ಹೆಚ್ಎಎಲ್ ವಿಮಾನ ನಿಲ್ದಾಣದ ಮೂಲಕ ಬೆಂಗಳೂರಿನಿಂದ ಮೈಸೂರಿಗೆ ತೆರಳಿರುವ ಸಿಎಂ ಸಿದ್ದರಾಮಯ್ಯ ಕಲುಷಿತ ನೀರು ಸೇವಿಸಿ ಸಾವು, 35ಕ್ಕೂ ಹೆಚ್ಚು ಜನ ಅಸ್ವಸ್ಥ ಕೇಸ್ ಗೆ ಮೈಸೂರು ತಾಲೂಕಿನ ಕೆ.ಸಾಲುಂಡಿ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ.
ಒಂದೇ ಕುಟುಂಬದ ನಾಲ್ವರು ಸಾವು ಕೇಸ್: ಸ್ಥಳಕ್ಕೆ ಸಿಎಂ ಭೇಟಿ ಮೈಸೂರಿನ ಯರಗನಹಳ್ಳಿಯಲ್ಲಿ ಅನಿಲ ಸೋರಿಕೆಯಿಂದ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ ಘಟನೆ ಹಿನ್ನೆಲೆ ಘಟನಾ ಸ್ಥಳಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿದ್ದಾರೆ. ಮೃತರ ಕುಟುಂಬ ಸದಸ್ಯರನ್ನು ಭೇಟಿ ಮಾಡಿ ಸಾಂತ್ವನ ಹೇಳಿದ್ದಾರೆ.
ಬಳಿಕ ದುರಂತ ಘಟನೆ ಕುರಿತು ಮಾಹಿತಿ ನೀಡಿದ್ದಾರೆ. ಸ್ಥಳೀಯ ಶಾಸಕ ತನ್ವೀರ್ ಸೇಠ್ ಸೇರಿದಂತೆ ಕಾಂಗ್ರೆಸ್ ನಾಯಕರು ಸಾಥ್ ನೀಡಿದ್ದಾರೆ. ಸಿಎಂ ಭೇಟಿಗೆ ಯರಗನಹಳ್ಳಿಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿದೆ.