ಹಾವೇರಿ : ದೇವರ ದರ್ಶನಕ್ಕೆಂದು ತಿರುಪತಿಗೆ ಹೋಗುತ್ತಿದ್ದ ಏಕಾಏಕಿ ನಸುಕಿನಜಾವ ಪಲ್ಟಿಯಾಗಿ ನಾಲ್ವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದು , 6 ಮಂದಿ ಸಂಭವಿಸಿದ ಘಟನೆ ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ಹಲಗೇರಿ ಬೈಪಾಸ್ ಬಳಿ ನಡೆದಿದೆ.
ದೇವರ ದರ್ಶನಕ್ಕೆಂದು ತಿರುಪತಿಗೆ ತೆರಳುತ್ತಿದ್ದ ನಗರದ ಸಮಗಂಡಿ ಮತ್ತು ಬಾರ್ಕಿ ಎಂಬ ಎರಡು ಕುಟುಂಬಗಳು ಹೋಗುತ್ತಿದ್ದ ವೇಳೆ ರಾಣೆಬೆನ್ನೂರಿನ ರಾಷ್ಟ್ರೀಯ ಹೆದ್ದಾರಿ-4ರ (NH-4) ಹಲಗೇರಿ ಬ್ರಿಡ್ಜ್‌ಬಳಿ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ್ದೇ ಅಪಘಾತಕ್ಕೆ ಕಾರಣ ಎಂದು ಹೇಳಲಾಗಿದೆ. ಮೃತರನ್ನ ಸುರೇಶ ಜಾಡಿ (54), ಐಶ್ವರ್ಯ ಬಾರ್ಕಿ (22), ಚೇತನಾ (7), ಪವಿತ್ರಾ ಸಮಗಂಡಿ (28) ಎಂದು ಗುರುತಿಸಲಾಗಿದೆ. ಮೃತರು ಹಾವೇರಿನಗರದ ನಿವಾಸಿಗಳಾಗಿದ್ದಾರೆ.
ಬಡವರನ್ನ ಚನ್ನವೀರಪ್ಪ ಜಾಡಿ, ಸಾವಿತ್ರಾ ಜಾಡಿ, ವಿಕಾಸ ಹೊನ್ನಪ್ಪ ಬಾರ್ಕಿ, ಹೊನ್ನಪ್ಪ ಬಾರ್ಕಿ, ಪ್ರಭುರಾಜ ಸಮಗಂಡಿ, ಗೀತಾ ಬಾರ್ಕಿ ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನ ಸದ್ಯ ದಾವಣಗೆರೆ ಮತ್ತು ತಾಲ್ಲೂಕು ಆಸ್ಪತ್ರೆಗೆ (ಆಸ್ಪತ್ರೆ) ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಸ್ಥಳಕ್ಕೆ ಹಿರಿಯ ಅಧಿಕಾರಿಗಳು ಮತ್ತು ರಾಣೆಬೆನ್ನೂರು ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ. ರಾಣೆಬೆನ್ನೂರು ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.