ಚಿತ್ರದುರ್ಗ, ಮೇ. 26 : ಶಿಕ್ಷಕರ ಸಮಸ್ಯೆಗಳನ್ನು ಮುಂದಿಟ್ಟುಕೊಂಡು ಹೋರಾಟ ಮಾಡಬೇಕಾಗಿದ್ದಲ್ಲಿ ಈ ಬಾರಿಯ ವಿಧಾನಪರಿಷತ್ ಚುನಾವಣೆಯಲ್ಲಿ ಆಗ್ನೇಯ ಶಿಕ್ಷಕರ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಡಿ.ಟಿ.ಶ್ರೀನಿವಾಸ್‍ರವರಿಗೆ ಪ್ರಥಮ ಪ್ರಾಶಸ್ತ್ಯದ ಮತ ನೀಡಿ ಗೆಲ್ಲಿಸುವಂತೆ ವಿಧಾನಪರಿಷತ್ ಸದಸ್ಯ ಪುಟ್ಟಣ್ಣಯ್ಯ ಶಿಕ್ಷಕರುಗಳಲ್ಲಿ ಮನವಿ ಮಾಡಿದರು.
ಖಾಸಗಿ ಹೋಟೆಲ್‌ನಲ್ಲಿ ಭಾನುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮೂರು ಬಾರಿ ನಾನು ಬೆಂಗಳೂರು ಕ್ಷೇತ್ರದಿಂದ ಆಯ್ಕೆಯಾದ ವಿದ್ಯಾರ್ಥಿ ದೆಸೆಯಿಂದಲೂ ಹೋರಾಟ ಮಾಡುತ್ತಿದ್ದೇನೆ. ಏಳನೆ ವೇತನ ಆಯೋಗವನ್ನು ಜಾರಿಗೊಳಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಒಪ್ಪಿಕೊಂಡಿದ್ದಾರೆ. ಬಿಜೆಪಿ. ಜೆಡಿಎಸ್. ಸರ್ಕಾರ ಅಧಿಕಾರದಲ್ಲಿದ್ದಾಗ ಒ.ಪಿ.ಎಸ್.ತೆಗೆದು ಎನ್.ಪಿ.ಎಸ್. ಜಾರಿಗೆ ತಂದಿತು. ಸರ್ಕಾರ ಉಳಿಯಬೇಕಾದರೆ ಚಳುವಳಿಗಾರರ ಜೊತೆ ಸಂದಾನಕ್ಕೆ ಸಿದ್ದರಾಗಿರಬೇಕು. ಶಿಕ್ಷಕರಿಗೆ ಬಡ್ತಿ, ವೇತನ ಸಮಸ್ಯೆ ಇದೆ. 2015 ರ ನಂತರ ಖಾಲಿ ಹುದ್ದೆಗಳನ್ನು ಭರ್ತಿ ಮಾಡಿಲ್ಲ. ಕನ್ನಡ ಮಾಧ್ಯಮ ಶಾಲೆಗಳಿಗೆ ಅನುದಾನ ಕೊಡಿಸುವ ಪ್ರಯತ್ನ ನಿರಂತರವಾಗಿ ನಡೆಯುತ್ತಿದೆ.
ಪ್ರತಿ ಕುಟುಂಬಕ್ಕೆ 25 ಲಕ್ಷ ರೂ.ಆರೋಗ್ಯ ವಿಮೆ ಕೊಡುವುದು ನಮ್ಮ ಮುಂದಿರುವ ಬೇಡಿಕೆ. ಅತಿಥಿ ಉಪನ್ಯಾಸಕರುಗಳ ವೇತನ ಹೆಚ್ಚಿಸಲಾಗಿದೆ. ಕಾಂಗ್ರೆಸ್ ಅಭ್ಯರ್ಥಿ ಡಿ.ಟಿ.ಶ್ರೀನಿವಾಸ್‌ರವರು 1971 ರಿಂದಲೂ ಶಿಕ್ಷಣ ಸಂಸ್ಥೆ ನಡೆಸುತ್ತಿದ್ದರು, ಸಾವಿರಾರು ಶಿಕ್ಷಕರಿಗೆ ಕೆಲಸ ಕೊಟ್ಟಿದ್ದಾರೆ. ಮುಂದಿನ ತಿಂಗಳು ನಡೆಯಲಿರುವ ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಮೊದಲ ಪ್ರಾಶಸ್ತ್ಯದ ಮತ ನೀಡಿ ಜಯಶಾಲಿಯಾಗಿ ನಿಮ್ಮ ಸೇವೆಗೆ ಅವಕಾಶ ಕಲ್ಪಿಸಿಕೊಡಿ ಎಂದು ಶಿಕ್ಷಕರಿಗೆ ಪುಟ್ಟಣ್ಣಯ್ಯ ವಿನಂತಿಸಿದರು.
ಮಾಜಿ ಸಚಿವ ಹೆಚ್.ಆಂಜನೇಯ ಮಾತನಾಡಿ ವಿಧಾನಪರಿಷತ್‌ನಲ್ಲಿ ಕಾಂಗ್ರೆಸ್ ಸ್ಥಾನಗಳ ಸಂಖ್ಯೆ ಕಡಿಮೆಯಿದೆ. ಆಗ್ನೇಯ ಶಿಕ್ಷಕರ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಆಯ್ಕೆಯಾಗಿರುವ ಡಿ.ಟಿ.ಶ್ರೀನಿವಾಸ್‌ರವರನ್ನು ಬಹುಮತಗಳಿಂದ ಗೆಲ್ಲಿಸಿ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇವರುಗಳು ಶಿಕ್ಷಕರ ಪರವಾಗಿದ್ದಾರೆ. ಶಿಕ್ಷಕರ ಸಮಸ್ಯೆಗಳನ್ನು ಬಗೆಹರಿಸಿ ಸರ್ವತೋಮುಖ ಅಭಿವೃದ್ಧಿ ಬೆಳವಣಿಗೆಗೆ ಕಾಂಗ್ರೆಸ್ ಪಕ್ಷ ಬದ್ದವಾಗಿದೆ. ಪುಟ್ಟಣ್ಣಯ್ಯ ಮೊದಲಿನಿಂದಲೂ ಹೋರಾಟ ಮಾಡಿಕೊಂಡು ಬರುತ್ತಿದ್ದಾರೆ.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ.ತಾಜ್‌ಪೀರ್, ಕಾರ್ಯಾಧ್ಯಕ್ಷ ಕೆ.ಎಂ.ಹಾಲಸ್ವಾಮಿ, ಪ್ರಧಾನ ಕಾರ್ಯದರ್ಶಿಗಳಾದ ಡಿ.ಎನ್.ಮೈಲಾರಪ್ಪ, ಕೆ.ಪಿ.ಸಂಪತ್ ಕುಮಾರ್, ಉಪಾಧ್ಯಕ್ಷ ಡಿ.ಟಿ.ವೆಂಕಟೇಶ್, ಕಾಂಗ್ರೆಸ್ ಪದವೀಧರ ವಿಭಾಗದ ಅಧ್ಯಕ್ಷ ಮುದಸಿರ್‌ನವಾಜ್, ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಯು.ಲಕ್ಷ್ಮಿಕಾಂತ್ , ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಆರ್.ನರಸಿಂಹರಾಜ, ಹನುಮಂತಪ್ಪ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.