Breaking
Thu. Dec 26th, 2024

ಕರ್ನಾಟಕ ರಾಜ್ಯ ಸರ್ಕಾರ ಎಚ್ಚೆತ್ತಿದ್ದು, ಬೆಂಗಳೂರಿನ ಮಾಲ್ ಮತ್ತು ಗೇಮಿಂಗ್ ಝೋನ್ಗಳಲ್ಲಿ ಕಟ್ಟೆಚ್ಚರ…!

ಬೆಂಗಳೂರು, ಮೇ 26: ಗುಜರಾತ್‌ನಲ್ಲಿ ನಿನ್ನೆ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ ಸಾವಿನ ಸಂಖ್ಯೆ 33ಕ್ಕೇರಿದೆ. ರಾಜ್ಕೋಟ್ನ ಟಿ.ಆರ್.ಪಿ ಗೇಮಿಂಗ್ ಝೋನ್ನಲ್ಲಿ ಏಕಾಏಕಿ ಬೆಂಕಿ ಹೊತ್ತಿಕೊಂಡು 9 ಮಕ್ಕಳು ಮತ್ತು ಮಹಿಳೆಯರು ಸೇರಿದಂತೆ 33 ಜನ ಸಜೀವ ದಹನವಾಗಿದ್ದಾರೆ. ಸದ್ಯ ಈ ಘಟನೆ ಬೆನ್ನಲ್ಲೇ ಕರ್ನಾಟಕ ರಾಜ್ಯ ಸರ್ಕಾರ ಎಚ್ಚೆತ್ತಿದ್ದು, ಬೆಂಗಳೂರಿನ ಮಾಲ್ ಮತ್ತು ಗೇಮಿಂಗ್ ಝೋನ್‌ಗಳಲ್ಲಿ ಕಟ್ಟೆಚ್ಚರ ವಹಿಸುವಂತೆ ಬಿಬಿಎಂಪಿ ಮುಖ್ಯ ಆಯುಕ್ತರಿಗೆ ಡಿಸಿಎಂ ಡಿಕೆ ಶಿವಕುಮಾರ್ ಖಡಕ್ ಸೂಚನೆ ನೀಡಿದೆ.

ಈ ಕುರಿತಾಗಿ ಪತ್ರ ಬರೆದಿರುವ ಡಿಕೆ ಶಿವಕುಮಾರ್, ಬೆಂಗಳೂರಿನಾದ್ಯಂತ ಶಾಪಿಂಗ್ ಮಾಲ್‌ಗಳು, ಗೇಮಿಂಗ್ ಮತ್ತು ಸಾಹಸ ವಲಯಗಳಂತಹ ಹೆಚ್ಚಾಗಿ ಜನದಟ್ಟಣೆ ಇರುವ ಮನರಂಜನಾ ಸ್ಥಳಗಳಲ್ಲಿ ಅಹಿತಕರ ಬೆಂಕಿ ಅನಾಹುತಗಳನ್ನು ತಡೆಗಟ್ಟಲು ಸೂಕ್ತವಾದ ಸುರಕ್ಷತಾ ಕ್ರಮಗಳು ಮತ್ತು ಮುನ್ನೆಚ್ಚರಿಕೆಗಳ ಅನುಸರಣೆ ಅತ್ಯಂತ ಮಹತ್ವದ್ದಾಗಿದೆ.
ಅಗ್ನಿ ಅವಘಡಗಳನ್ನು ತಪ್ಪಿಸುವುದಕ್ಕಾಗಿ ನಿಯಮಿತ ತಪಾಸಣೆಗಳನ್ನು ಕಡ್ಡಾಯವಾಗಿ ಮಾಡುವುದರೊಂದಿಗೆ, ನಗರದಾದ್ಯಂತ ಮನರಂಜನಾ ಸ್ಥಳಗಳಲ್ಲಿ ಸುರಕ್ಷಿತ ಕ್ರಮಗಳನ್ನು ತ್ವರಿತವಾಗಿ ಅಳವಡಿಸಲು ಸೂಚನೆ ನೀಡಲಾಗಿದೆ.
ಗುಜರಾತ್‌ನ ರಾಜ್ ಕೋಟ್‌ನ ಮನರಂಜನಾ ಕೇಂದ್ರದಲ್ಲಿ ಶನಿವಾರ ಸಂಜೆ ಸಂಭವಿಸಿದ ಅಗ್ನಿ ಅವಘಡ ಸಂಭವಿಸಿದೆ ಎಂದು ವರದಿಯಾಗಿದೆ, ಇದು ಅತ್ಯಂತ ಕಳವಳಕಾರಿ ದುರ್ಘಟನೆಯಾಗಿದೆ.
ಈ ದುರಂತವು ಎಲ್ಲರಿಗೂ ಎಚ್ಚರಿಕೆಯ ಗಂಟೆಯ ಸಂಯೋಜನೆ, ಬೆಂಗಳೂರಿನ ಹಲವು ಪ್ರತಿಷ್ಠಿತ ಮಾಲ್‌ಗಳಲ್ಲಿ ಮತ್ತು ಇತರ ಸ್ಥಳಗಳಲ್ಲಿ ಗೇಮ್ ಝನ್ ಮತ್ತು ಸಾಹಸ ಕ್ರೀಡೆಗಳನ್ನು ನಡೆಸಲು ಅನುಮತಿ ನೀಡಲಾಗುತ್ತಿದೆ, ಇಂತಹ ಮನರಂಜನ ಕೇಂದ್ರಗಳು / ಗೇಮ್ ಜೋನ್‌ಗಳಲ್ಲಿ ಅಗತ್ಯ ಮುಂಜಾಗ್ರತಾ ಕ್ರಮವಹಿಸಬೇಕಾಗಿದೆ.
ಮಜನರಂಜನಾ ಕೇಂದ್ರ, ಗೇಮಿಂಗ್ ರೋಝನ್‌ಗಳಿರುವ ಪ್ರದೇಶದಲ್ಲಿ ಅಗ್ನಿದುರಂತ ಸೇರಿದಂತೆ ಯಾವುದಾದರೂ ಅನಾಹುತ ಸಂಭವಿಸಿದ ರೀತಿಯಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗಿದೆ, ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ ಮತ್ತು ಆದೇಶದ ರಕ್ಷಣಾ ನಿಯಮ ಮತ್ತು ನಿಬರ್ಂಧಗಳನ್ನು ನಿರ್ವಹಿಸುತ್ತಿದ್ದಾರೆ ಎಂದು ಪರಿಶೀಲಿಸಲು ತಿಳಿಸುತ್ತದೆ, ದುರ್ಘಟನೆಗಳು ಸಂಭವಿಸದಂತೆ ಕ್ರಮವಹಿಸಲು ಸೂಚಿಸಲಾಗಿದೆ.

Related Post

Leave a Reply

Your email address will not be published. Required fields are marked *