Breaking
Wed. Dec 25th, 2024
ಬೆಂಗಳೂರು: ರಾಜ್ಯದಲ್ಲಿ ಭಾನುವಾರ  ಒಂದೇ ದಿನ 51 ಜನ ಅಪಘಾತಕ್ಕೆ  ಬಲಿಯಾಗಿದ್ದು, ಈ ಬಗ್ಗೆ ಸಂಚಾರ ಹಾಗೂ ರಸ್ತೆ ಸುರಕ್ಷತೆ  ವಿಭಾಗದ ಎಡಿಜಿಪಿ ಅಲೋಕ್ ಕುಮಾರ್  ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ.
ಅಪಘಾತದ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ಕಳೆದ 24 ಗಂಟೆಯಲ್ಲಿ ನಡೆದ ಪ್ರತ್ಯೇಕ ಅಪಘಾತಗಳಲ್ಲಿ 51 ಜನ ಸಾವಿಗೀಡಾಗಿದ್ದಾರೆ. ಸಂಚಾರಿ ನಿಯಮಗಳ ಉಲ್ಲಂಘನೆಯೇ ಅಪಘಾತಕ್ಕೆ ಕಾರಣವಾಗಿದ್ದು, ದಯವಿಟ್ಟು ಸಂಚಾರಿ ನಿಯಮ ಪಾಲಿಸಿ ಎಂದು ಅವರು ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ.
ಇತ್ತೀಚಿನ ದಿನಗಳಲ್ಲಿ ನಡೆದ ಅಪಘಾತಗಳಲ್ಲಿ ಭಾನುವಾರ ಅತಿ ಹೆಚ್ಚು ಜನರ ಸಾವಾಗಿದೆ. ಅತಿವೇಗ ಹಾಗೂ ಅಜಾಗರೂಕತೆ ಚಾಲನೆಯಿಂದ ಅಪಘಾತಗಳು ಹೆಚ್ಚಾಗಿವೆ ಎಂದು ಅವರು ಪೋಸ್ಟ್‍ನಲ್ಲಿ ಬರೆದುಕೊಂಡಿದ್ದಾರೆ.
ಚಿಕ್ಕೋಡಿ, ಹಾಸನ, ಕಾರವಾರ, ರಾಮನಗರ ಸೇರಿ ರಾಜ್ಯದ ಹಲವೆಡೆ ಭಾನುವಾರ ಭಿಕರ ಅಪಘಾತಗಳು ನಡೆದಿದ್ದವು. ಬಹುತೇಕ ಅಪಘಾತಗಳಿಗೆ ಸಂಚಾರಿ ನಿಯಮಗಳ ಉಲ್ಲಂಘನೆಯೇ ಪ್ರಮುಖ ಕಾರಣ ಎನ್ನಲಾಗಿತ್ತು.

Related Post

Leave a Reply

Your email address will not be published. Required fields are marked *