ಶಿವಮೊಗ್ಗ : ಮನೆ ಮುಂದೆ ನಿಲ್ಲಿಸಿದ ಬೈಕ್ ಕಾಣೆಯಾಗಿದೆ ಎಂದು ಕುಂಸಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.
ಈ ದೂರಿನ ಅನ್ವಯ ತನಿಖೆ ನಡೆಸಿದಾಗ ಶಿವಮೊಗ್ಗದ ಅಲ್ಲಾಭಕ್ಷ ಅಲಿಯಾಸ್ ಪೊಟ್ಯಾಟೋ(19) ಹಾಗೂ ಕಾನೂನು ಸಂಘರ್ಷಕ್ಕೆ ಒಳಗಾದ ಓರ್ವನನ್ನು ವಿಚಾರಣೆಗೆ ಒಳಪಡಿಸಿದಾಗ ಬೈಕ್ ಕದ್ದಿರುವ ಕುರಿತು ಒಪ್ಪಿಕೊಂಡಿದ್ದಾರೆ.
ಇವರಿಂದ 90 ಸಾವಿರ ರೂ. ಮೌಲ್ಯದ ಎರಡು ಬೈಕ್ಗಳನ್ನು ವಶಕ್ಕೆ ಪಡೆದು ಕೊಳ್ಳಲಾಗಿದೆ. ಈ ಕುರಿತು ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.