ಕಲಬುರಗಿ : ಅತ್ತಿಗೆಯಿಂದ ದೂರ ಇರುವುದಕ್ಕೆ ಹೇಳಿದಕ್ಕೆ ಮೈದುನನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಕಲಬುರಗಿ ಜಿಲ್ಲೆಯ ಆಳಂದ ತಾಲ್ಲೂಕಿನ ಮುನ್ನೊಳ್ಳಿ ಗ್ರಾಮದಲ್ಲಿ ನಡೆದಿದೆ.
ಹೀರಾಲಾಲ್ ಲದಾಫ್ (35) ಕೊಲೆಯಾದವ. ಕೊಲೆಯಾದ ಹೀರಾಲಾಲ್ ಅತ್ತಿಗೆ ಜೊತೆ ರವಿ ಎಂಬಾತ ಅಕ್ರಮ ಸಂಬಂಧ ಹೊಂದಿದ್ದನು. ಈ ವಿಚಾರವನ್ನು ಹೀರಾಲಾಲ್ ತನ್ನ ಅಣ್ಣ ಬಾಬು ಲದಾಫ್ಗೆ ತಿಳಿಸಿದ್ದನು. ಇತ್ತ ಅನೈತಿಕ ಸಂಬಂಧ ತಿಳಿದ ಕೂಡಲೇ ರವಿಯಿಂದ ದೂರ ಇರುವಂತೆ ಬಾಬು ತನ್ನ ಪತ್ನಿಗೆ ಹೇಳಿದ್ದರು. ಆದರೆ ಆಕೆ ತನ್ನ ಪ್ರಿಯಕರನ ಜೊತೆ ಸೇರಿ ಪತಿ ಬಾಬು ಲದಾಫ್ ಮೇಲೆಯೇ ಹಲ್ಲೆ ಮಾಡಿದ್ದಾಳೆ.
ಮೊನ್ನೆ ಕುಡಿದ ನಶೆಯಲ್ಲಿ ಗಲಾಟೆ ಮಾಡಿಕೊಂಡ ಬಳಿಕ ಕಲ್ಲಿನಿಂದ ಜಜ್ಜಿ ಹಲ್ಲೆ ಮಾಡಿದ್ರು. ಭಾನುವಾರ ಸಂಜೆ ಚಿಕಿತ್ಸೆ ಫಲಕಾರಿಯಾಗದೆ ಹೀರಾಲಾಲ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಈ ಸಂಬಂಧ ನರೋಣಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.