Breaking
Wed. Dec 25th, 2024

ನೆಹರುರವರ ಪುಣ್ಯತಿಥಿ ಅಂಗವಾಗಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ….!

ಚಿತ್ರದುರ್ಗ, ಮೇ.27 : ದೇಶದ ಮೊದಲ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರುರವರು ಕೃಷಿ, ಶಿಕ್ಷಣ, ಕೈಗಾರಿಕೆಗೆ ಒತ್ತು ಕೊಟ್ಟಿದ್ದರು. ಕುಟುಂಬ ರಾಜಕಾರಣ ಎಂದಿಗೂ ಮಾಡಲಿಲ್ಲ. ಅವರ ನಿಧನದ ನಂತರ ಮಗಳು ಇಂದಿರಾಗಾಂಧಿ ದೇಶದ ಪ್ರಧಾನಿಯಾಗಬೇಕಾಯಿತೆಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ.ತಾಜ್‌ಪೀರ್ ಹೇಳಿದರು.
ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸೋಮವಾರ ನೆಹರುರವರ ಪುಣ್ಯತಿಥಿ ಅಂಗವಾಗಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ. ಮಹಾತ್ಮಗಾಂಧಿ, ಮ್ಲಾನಾ ಅಬುಕಲಾಂ, ಸರ್ದಾರ್ ವಲ್ಲಭಭಾಯಿ ಪಟೇಲ್, ಡಾ.ಬಾಬುಜಗಜೀವನರಾಂ ಇವರುಗಳ ಜೊತೆ ದೇಶದ ಸ್ವಾತಂತ್ರಕ್ಕಾಗಿ ಹೋರಾಡಿದ ನೆಹರುರವರು ಎ.ಐ.ಸಿ.ಸಿ. ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ.
ದೇಶದ ಸಂಕಷ್ಟದಲ್ಲಿದ್ದ ಪರಿಸ್ಥಿತಿಯಲ್ಲಿ ಪಂಚವಾರ್ಷಿಕ ಯೋಜನೆ ಜಾರಿಗೆ ತರಲು ಅನೇಕ ಡ್ಯಾಂಗಳನ್ನು ಕಟ್ಟಿಸಿ ಸ್ಟೀಲ್ ಪ್ಲಾಂಟ್, ಕೈಗಾರಿಕೆ ಆರಂಭಿಸಿದರು. ಮೂರು ಅವಧಿಗೆ ದೇಶದ ಪ್ರಧಾನಿಯಾಗಿದ್ದ ನೆಹರುರವರಲ್ಲಿ ದೂರ ದೃಷ್ಟಿಯಿತ್ತು. ನೆಹರುರವರು ಕುಟಂಬ ರಾಜಕಾರಣ ಮಾಡಿದರೆಂದು ಕೋಮುವಾದಿ ಬಿಜೆಪಿಯವರು ಅಪಪ್ರಚಾರ ಮಾಡುತ್ತಿದ್ದಾರೆ.
ದೇಶ ಹಾಗೂ ಪಕ್ಷವನ್ನು ಮುನ್ನಡೆಸಿಕೊಂಡು ಹೋಗಬೇಕಾದ ಅನಿವಾರ್ಯತೆ ಇದ್ದುದರಿಂದ ಇಂದಿರಾಗಾಂಧಿ ಹತ್ಯೆಯ ನಂತರ ಅವರ ಪುತ್ರ ರಾಜೀವ್‌ಗಾಂಧಿ ದೇಶದ ಪ್ರಧಾನಿಯಾದರು. ಈಗ ಸೋನಿಯಾಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕಗಾಂಧಿ ಇವರುಗಳು ಪಕ್ಷವನ್ನು ಉಳಿಸಲು ಸಾರಥ್ಯ ವಹಿಸಿದ್ದಾರೆಂದು ಹೇಳಿದರು.
ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ಕೆ.ಪಿ.ಸಂಪತ್ ಕುಮಾರ್, ಡಿ.ಎನ್.ಮೈಲಾರಪ್ಪ, ಉಪಾಧ್ಯಕ್ಷ ಎಸ್.ಎನ್.ರವಿಕುಮಾರ್, ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷ ಎನ್.ಡಿ.ಕುಮಾರ್, ಚಿದಾನಂದಮೂರ್ತಿ ಪುಣ್ಯಸ್ಮರಣೆಯಲ್ಲಿ ಭಾಗವಹಿಸಿದ್ದರು.

Related Post

Leave a Reply

Your email address will not be published. Required fields are marked *