ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯಲ್ಲಿ ಫೈರ್ ಮ್ಯಾನ್ ಮತ್ತು ಅಗ್ನಿಶಾಮಕ ಚಾಲಕ ಹುದ್ದೆಗಳು ಖಾಲಿ ಇದ್ದು ನೇಮಕಾತಿಗಾಗಿ ಅರ್ಜಿಯನ್ನು ಆಹ್ವಾನ ಮಾಡಲಾಗಿದೆ, ಆಸಕ್ತಿ ಇರುವ ಅರ್ಹ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದು ಪ್ರತಿನಿತ್ಯ ಇದೇ ತರಹದ ಉಚಿತ ಉದ್ಯೋಗ ವಾರ್ತೆಗಳನ್ನು ಪಡೆಯಲು ನಮ್ಮ ಆವಿಷ್ಕಾರ್ ನ್ಯೂಸ್ ಚಾನಲ್ ಅನ್ನು ಕ್ಲಿಕ್ ಮಾಡಿ. https://chat.whatsapp.com/BviJRb8lIgW7qFBGIYtawq
ಹುದ್ದೆಗಳಿಗೆ ಸಂಬಂಧಿಸಿದ ಅಧಿಕೃತ ಅಧಿಸೂಚನೆಯೂ ಈಗಾಗಲೇ ಬಿಡುಗಡೆಯಾಗಿದೆ, ಅಧಿಸೂಚನೆಯ ಪ್ರಕಾರ ಶೈಕ್ಷಣಿಕ ಅರ್ಹತೆ, ವೇತನ ಶ್ರೇಣಿ, ಅರ್ಜಿ ಶುಲ್ಕ, ಅರ್ಜಿ ಸಲ್ಲಿಸುವಿಕೆಗೆ ಸಂಬಂಧಿಸಿದ ಪ್ರಮುಖ ದಿನಾಂಕಗಳು, ಆಯ್ಕೆಯ ವಿಧಾನ, ವಯೋಮಾನ ಪ್ರಕ್ರಿಯೆ ಹಾಗೂ ಹುದ್ದೆಗಳಿಗೆ ಸಂಬಂಧಿಸಿದ ಸಂಪೂರ್ಣ ಮಾಹಿತಿಯನ್ನು ವಿವರಿಸಲಾಗುತ್ತದೆ.
ಖಾಲಿ ಇರುವ ಹುದ್ದೆಗಳು: ಅಧಿಸೂಚನೆಯ ಪ್ರಕಾರ ಒಟ್ಟು 975 ಹುದ್ದೆಗಳು ಖಾಲಿ ಇವೆ, ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆಗಳಿಗೆ ಸಂಬಂಧಿಸಿದ ವಿವರಗಳು : ಅಗ್ನಿಶಾಮಕ 731, ಅಗ್ನಿಶಾಮಕ ಇಂಜಿನ್ ಚಾಲಕ 153, ಅಗ್ನಿಶಾಮಕ ಠಾಣಾಧಿಕಾರಿ 64, ಚಾಲಕ ತಂತ್ರಜ್ಞಾನ 27
ಶೈಕ್ಷಣಿಕ ಅರ್ಹತೆ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅದು ಸೂಚನೆಯ ಪ್ರಕಾರ ಮಾನ್ಯತೆ ಪಡೆದ ಸಂಸ್ಥೆಯಿಂದ ಅಥವಾ ವಿಶ್ವವಿದ್ಯಾಲಯದಿಂದ SSLC, PUC ವಿಭಾಗದಲ್ಲಿ ರಸಾಯನ ಶಾಸ್ತ್ರದೊಂದಿಗೆ ವಿಜ್ಞಾನ ವಿಷಯದಲ್ಲಿ ಪದವಿಯನ್ನು ಪಡೆದಿರಬೇಕು.
ವಯೋಮಾನ ಪ್ರಕ್ರಿಯೆ: ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಹಾಗೂ ಗರಿಷ್ಠವಾಗಿ 28 ವರ್ಷ ವಯೋಮಿತಿಯನ್ನು ಮೀರಬಾರದು.
ವಯಸ್ಸಿನ ಸಡಿಲಿಕೆ ; OBC, 2A, 2B, 3A ಮತ್ತು 3B ಅಭ್ಯರ್ಥಿಗಳಿಗೆ 03 ವರ್ಷ,
SC,ST ಅಭ್ಯರ್ಥಿಗಳಿಗೆ 05 ವರ್ಷ,
PWD ಅಭ್ಯರ್ಥಿಗಳಿಗೆ 10 ವರ್ಷಗಳ ಕಾಲ ವಯಸ್ಸಿನ ಸಡಿಲಿಕೆಯನ್ನು ಮಾಡಲಾಗಿದೆ.
ಅರ್ಜಿ ಶುಲ್ಕ: ಅಧಿಸೂಚನೆಯ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ತಮ್ಮ ಪ್ರವರ್ಗದ ಆಧಾರದ ಮೇಲೆ ಅರ್ಜಿ ಶುಲ್ಕವನ್ನು ಪಾವತಿಸಬೇಕು,
OBC, 2A, 2B, 3A ಮತ್ತು 3B ಅಭ್ಯರ್ಥಿಗಳು ರೂ.250,
SC,ST ಅಭ್ಯರ್ಥಿಗಳು ರೂ.100 ಅರ್ಜಿ ಶುಲ್ಕವನ್ನು ಪಾವತಿಸಬೇಕು.
ಆಯ್ಕೆಯು ವಿಧಾನ: ಈ ಹುದ್ದೆಗಳಿಗೆ ಅರ್ಜಿ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಮೊದಲು ಲಿಖಿತ ಪರೀಕ್ಷೆ, ನಂತರ ದೈಹಿಕ ಸಾಮರ್ಥ್ಯ ಪರೀಕ್ಷೆ ಹಾಗೂ ದಾಖಲಾತಿಗಳ ಪರಿಶೀಲನೆ ಮಾಡುವ ಮುಖಾಂತರ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ವೇತನ ಶ್ರೇಣಿ: ಅಧಿಸೂಚನೆಯ ಪ್ರಕಾರ ಈ ಹುದ್ದೆಗಳಿಗೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಮಾಸಿಕವಾಗಿ ರೂ.33,450 ರಿಂದ 62,600 ರ ವರೆಗೆ ವೇತನವನ್ನು ನೀಡಲಾಗುತ್ತದೆ.
ಹೆಚ್ಚಿನ ಮಾಹಿತಿಗಾಗಿ ಈ ವೆಬ್ ಸೈಟನ್ನು ಸಂಪರ್ಕಿಸಬಹುದು ksfes.karnataka.gov.in