Breaking
Wed. Dec 25th, 2024
ಆರೋಪಿ ಕಿರುಕುಳ ನೀಡಿದ್ದಕ್ಕೆ ಮುರುಘಾ ಮಠದ ಶಿವಮೂರ್ತಿ ಶರಣರ ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸಿದ್ದ ಸಂತ್ರಸ್ತರಿಗೆ ಮಾನಸಿಕ ಹಾಗೂ ದೈಹಿಕ ಕಿರುಕುಳ ನೀಡಿದ ಆರೋಪಿ ಚಿಕ್ಕಪ್ಪನ ವಿರುದ್ಧ ಎಫ್ ಐಆರ್ ದಾಖಲಾಗಿದೆ.
ಬಾಲನ್ಯಾಯ ಕಾಯ್ದೆಯಡಿ ಎಫ್‌ಐಆರ್ ದಾಖಲಿಸುವಂತೆ ಮಕ್ಕಳ ಕಲ್ಯಾಣ ಸಮಿತಿ ಶಿಫಾರಸು ಮಾಡಿದೆ ಎಂದು ವರದಿಯಾಗಿದೆ.
ಚಿಕ್ಕಪ್ಪನ ಮನೆಯಲ್ಲಿ ಆಶ್ರಯ ಪಡೆದಿದ್ದ ಸಂತ್ರಸ್ತ ಬಾಲಕಿ 22ರಂದು ನಾಪತ್ತೆಯಾಗಿದ್ದಳು. ಈ ಬಗ್ಗೆ ಚಿಕ್ಕಪ್ಪ ಮೇ 24ರಂದು ಚಿತ್ರದುರ್ಗದ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ನಾಪತ್ತೆಯಾಗಿ ಪೋಕ್ಸೋ ಪ್ರಕರಣದ ಸಂತ್ರಸ್ತ ಬಾಲಕಿ ಮೈಸೂರಿನ ಒಡನಾಡಿ ಸಂಸ್ಥೆಯಲ್ಲಿ ಆಕೆ. ಈ ಬಗ್ಗೆ ಮೈಸೂರಿನ ಒಡನಾಡಿ ಸಂಸ್ಥೆಯು ಕೂಡ ಪೊಲೀಸ್ ಠಾಣೆಗೆ ಮಾಹಿತಿ ನೀಡಿತ್ತು. ಮುರುಘಾಶ್ರೀ ಬೆಂಬಲಿಗರಿಂದ ಸಂತ್ರಸ್ತೆ ಚಿಕ್ಕಪ್ಪನ ಮೂಲಕ ಬಾಲಕಿಗೆ ಒತ್ತಡ ಹಾಕುತ್ತಿದ್ದರಿಂದ ಆಕೆ ಮನೆಬಿಟ್ಟು ಬಂದಿದ್ದಾಳೆ ಎಂದು ತಿಳಿದುಬಂದಿತ್ತು.
ಮೈಸೂರಿನ ಒಡನಾಡಿ ಸೇವಾ ಸಂಸ್ಥೆಯ ನೆರವಿನೊಂದಿಗೆ ರಕ್ಷಣಾ ಮಕ್ಕಳ ಅಧಿಕಾರಿ ಎದುರು ಹಾಜರಾದ ಸಂತ್ರಸ್ತ ಬಾಲಕಿಯನ್ನು ಆಪ್ತ ಸಮಾಲೋಚನೆಗೆ ಒಳಪಡಿಸಲಾಯಿತು. ಮಕ್ಕಳ ಕಲ್ಯಾಣ ಸಮಿತಿಯು ಸಂತ್ರಸ್ತೆಯ ಅಳಲು ಆಲಿಸಿ, ಬಾಲನ್ಯಾಯ ಕಾಯ್ದೆಯ ಕಲಂ 75ರ ಅಡಿಯಲ್ಲಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಚಿಕ್ಕಪ್ಪನವರ ವಿರುದ್ಧ ದೂರು ದಾಖಲಿಸುವಂತೆ ಮಕ್ಕಳ ರಕ್ಷಣಾಧಿಕಾರಿಗಳಿಗೆ ಆದೇಶಿಸಲಾಗಿದೆ.
ತಂದೆಯ ಅನಾರೋಗ್ಯದ ಕಾರಣಕ್ಕೆ ಚಿಕ್ಕಪ್ಪನ ಆಶ್ರಯದಲ್ಲಿದ್ದ ಬಾಲಕಿ ಮೇ 22 ರಂದು ಮನೆ ತೊರೆದಿದ್ದಳು. ಪುತ್ರಿ ಕಾಣೆಯಾಗಿರುವ ಬಗ್ಗೆ ಮೇ 24ರಂದು ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಮೈಸೂರಿನ ಒಡನಾಡಿ ಸೇವಾ ಸಂಸ್ಥೆಗೆ ಮರಳಿದ್ದ ಬಾಲಕಿ, ಸಂಸ್ಥೆಯ ನಿರ್ದೇಶಕಿ ಸ್ಪ್ಯಾನ್ಲಿ ಅವರೊಂದಿಗೆ ಮಂಗಳವಾರ ಚಿತ್ರದುರ್ಗಕ್ಕೆ ಬಂದಿದ್ದರು. ಪೊಕ್ಕೊ ಪ್ರಕರಣದ ಸಾಕ್ಷ್ಯ ನುಡಿಯುವ ವೇಳೆ ಸಂತ್ರಸ್ತೆಯ ಮೇಲೆ ಪ್ರಭಾವ ಬೀರುವ ಪ್ರಯತ್ನ ನಡೆದಿದೆ ಎಂಬ ಆರೋಪ ಕೇಳಿಬಂದಿದೆ.
ಮನೆ ತೊರೆದ ಬಾಲಕಿ ಒಡನಾಡಿ ಸೇವಾ ಸಂಸ್ಥೆಗೆ ಬಂದಿದ್ದಳು. ಮಕ್ಕಳ ಕಲ್ಯಾಣ ಸಮಿತಿ ಎದುರು ಹಾಜರುಪಡಿಸಿ ಚಿಕ್ಕಪ್ಪನ ಕಿರುಕುಳದ ಬಗ್ಗೆ ವಿವರಿಸಲಾಗಿದೆ. ಪೋಕ್ಸೋ ಪ್ರಕರಣದ ದಿಕ್ಕು ತಪ್ಪಿಸುವ ಪ್ರಯತ್ನ ವ್ಯವಸ್ಥಿತವಾಗಿ ನಡೆದಿದೆ. ಪ್ರಕರಣದಿಂದ ಹಿಂದೆ ಸರಿಯುವಂತೆ ಬೆದರಿಸಲಾಗಿದೆ. ಹಣ, ಚಿನ್ನಾಭರಣದ ಆಮಿಷ ಒಡ್ಡಲಾಗಿದೆ. ಈ ಕುರಿತು ಸೂಕ್ತ ತನಿಖೆಯಾಗಬೇಕು” ಎಂದು ಒಡನಾಡಿ ಸೇವಾ ಸಂಸ್ಥೆಯ ನಿರ್ದೇಶಕ ಸ್ಪ್ಯಾನ್ಲಿ ಒತ್ತಾಯಿಸಿದ್ದಾರೆ.

Related Post

Leave a Reply

Your email address will not be published. Required fields are marked *