Breaking
Mon. Dec 23rd, 2024

ಮ್ಯೂನಿಕ್‌ನಿಂದ ಬೆಂಗಳೂರಿಗೆ ಬರೋಕೆ ಪ್ರಜ್ವಲ್ ರೇವಣ್ಣ ಅವರು ಲುಫ್ತಾನ್ಸಾ ಏರ್‌ಲೈನ್ಸ್ ಬುಕ್…!

ಬೆಂಗಳೂರು : ಸಂಸದ ಪ್ರಜ್ವಲ್ ರೇವಣ್ಣ ಅವರು ಮೇ 31ಕ್ಕೆ ಪ್ರಜ್ವಲ್ ರೇವಣ್ಣ ಭಾರತಕ್ಕೆ ವಾಪಸ್ ಆಗಲಿದ್ದಾರೆ. ಮ್ಯೂನಿಕ್‌ನಿಂದ ಬೆಂಗಳೂರಿಗೆ ಬರೋಕೆ ಪ್ರಜ್ವಲ್ ರೇವಣ್ಣ ಅವರು ಲುಫ್ತಾನ್ಸಾ ಏರ್‌ಲೈನ್ಸ್ ಬುಕ್ ಮಾಡಿದ್ದಾರೆ. ಮೇ 31ರ ಮಧ್ಯರಾತ್ರಿ ಪ್ರಜ್ವಲ್ ರೇವಣ್ಣ ಅವರು ಬೆಂಗಳೂರಿಗೆ ಬರ್ತಿದ್ದಂತೆ ಏರ್‌ಪೋರ್ಟ್‌ನಲ್ಲೇ ಲಾಕ್ ಆಗುವ ಸಾಧ್ಯತೆಗಳಿವೆ. ಎಸ್‌ಐಟಿ ಅಧಿಕಾರಿಗಳು ಏರ್‌ಪೋರ್ಟ್‌ನಲ್ಲಿ ಬಂಧಿಸಲು ಸಜ್ಜಾಗಿದ್ದಾರೆ.
ಪೆನ್‌ಡ್ರೈವ್ ಪ್ರಕರಣಕ್ಕೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದಷ್ಟೇ ಪ್ರಜ್ವಲ್ ರೇವಣ್ಣ ಸೋಮವಾರದ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದೆ. ಬೆಳಗ್ಗೆ 10 ಗಂಟೆಗೆ ಶುಕ್ರವಾರ ಎಸ್‌ಐಟಿ (ಎಸ್‌ಐಟಿ) ಮುಂದೆ ಹಾಜರಾಗಿ ಉತ್ತರ ನೀಡುತ್ತೇನೆ.
ಅಷ್ಟೇ ಅಲ್ಲದೆ ಕುಟುಂಬಸ್ಥರು ಮತ್ತು ರಾಜ್ಯದ ಜನತೆಯಲ್ಲಿ ಪ್ರಜ್ವಲ್ ರೇವಣ್ಣ ಕ್ಷಮೆ ಕೇಳಿದ್ದರು. ವಿದೇಶಕ್ಕೆ ಹೋಗುವ ಬಗ್ಗೆ ಮೊದಲೇ ಪ್ಲಾನ್ ಆಗಿದೆ. ವಿದೇಶಕ್ಕೆ ಹೋಗುವಾಗ ನನ್ನ ಮೇಲೆ ಯಾವುದೇ ಆರೋಪ ಇರಲಿಲ್ಲ. ನಾನು ವಿದೇಶದಲ್ಲಿದ್ದಾಗ ಯೂಟ್ಯೂಬ್ ನ್ಯೂಸ್ ನೋಡಿ ನನ್ನ ಮೇಲೆ ಗಂಭೀರ ಆರೋಪ ಬಂದಿದೆ. ಇದಾದ ನಂತರ ನನ್ನ ಹೆಸರನ್ನು ರಾಜಕೀಯವಾಗಿ ಬಳಸಲಾಗಿದೆ. ಎಸ್ ಐಟಿ ನೋಟಿಸ್ ನೀಡಿದ ವಿಚಾರ ಗೊತ್ತಾಯಿತು. ನಾನು ರಾಜಕೀಯವಾಗಿ ಬೆಳೆಯಬಾರದು ಎಂಬ ಕಾರಣಕ್ಕೆ ನನ್ನ ಮೇಲೆ ಪಿತೂರಿ ಮಾಡಿದ್ದೇನೆ.
ನನ್ನ ಮೇಲೆ ರಾಜಕೀಯ ಪಿತೂರಿ ಮಾಡಿದರು. ಚುನಾವಣೆಯ ಸಮಯದಲ್ಲಿ ರಾಹುಲ್ ಗಾಂಧಿ ಸೇರಿದಂತೆ ಕಾಂಗ್ರೆಸ್ ನಾಯಕರ ಆರೋಪದಿಂದ ನಾನು ಮಾನಸಿಕ ಖಿನ್ನತೆಗೆ ಒಳಗಾಗಿದ್ದೆ. ಈ ಖಿನ್ನತೆಯಿಂದ ಹೊರ ಬರಲು ಕೆಲ ಸಮಯ ಬೇಕಾಗಿತ್ತು. ನನಗೆ ನ್ಯಾಯಾಲಯದ ಮೇಲೆ ನಂಬಿಕೆಯಿದೆ. ಈ ಸುಳ್ಳು ಪ್ರಕರಣದಿಂದ ನಾನು ಹೊರ ಬರುತ್ತೇನೆ. ಬಂದ ಮೇಲೆ ಎಲ್ಲರಿಗೂ ಉತ್ತರ ನೀಡುತ್ತೇನೆ ಎಂದು ಹೇಳಿದ್ದರು.

Related Post

Leave a Reply

Your email address will not be published. Required fields are marked *