Breaking
Tue. Dec 24th, 2024

ಸಹೋದರನನ್ನು ಮದುವೆಯಾಗಿದ್ದಕ್ಕೆ ಇಡೀ ಕುಟುಂಬವೇ ಬಲಿ…!

ಕೊಪ್ಪಳ : ಒಂದೇ ಮನೆಯಲ್ಲಿ ಮಗಳು, ತಾಯಿ ಮತ್ತು ಮಗ ಶವವಾಗಿ ಇದ್ದಿದ್ದರು. ಶವ ನೋಡಿದವರು ಆತ್ಮಹತ್ಯೆ ಎಂದು ಹೇಳಿದ್ದಾರೆ. ಮೇಲ್ನೋಟಕ್ಕೆ ಮೂವರ ಸಾವು ಕೂಡ ಆತ್ಮಹತ್ಯೆ ರೀತಿಯೇ ಇತ್ತು. ಆದರೆ ತನಿಖೆ ನಡೆಸಿದಾಗ ಮೂವರದ್ದು ಆತ್ಮಹತ್ಯೆಯಲ್ಲ ಎಂದು ದೃಢಪಟ್ಟಿದೆ.
ಕೊಪ್ಪಳ ತಾಲೂಕಿನ ಹೊಸಲಿಂಗಾಪುರ ಗ್ರಾಮದಲ್ಲಿರುವ ಆಶ್ರಯ ಬಡಾವಣೆಯಲ್ಲಿರುವ ಮನೆಯಲ್ಲಿ ಮಂಗಳವಾರ ಮೂವರು ಶವವಾಗಿ ಇದ್ದಾರೆ. ರಾಜೇಶ್ವರಿ (50), ರಾಜೇಶ್ವರಿ ಪುತ್ರಿ ವಸಂತ(28) ವಸಂತ ಮಗಳ ಸಾಯಿ ಧರ್ಮತೇಜ್(5) ಅವರ ಶವ ಬಾಡಿಗೆ ಮನೆಯಲ್ಲಿತ್ತು. 

ಸೋಮವಾರ ಸಮೀಪದ ನಿವಾಸಿಗಳ ಜೊತೆ ಮಾತನಾಡಿದ್ದ ಮೂವರು ಸಂಜೆ ನಂತರ ಯಾರಿಗೂ ಕಣಿಸಿರಲಿಲ್ಲ. ಮಂಗಳವಾರ ಮುಂಜಾನೆ ಮನೆ ಬಾಗಿಲು ತೆರೆದು ನೋಡಿದಾಗ, ಅಡುಗೆ ಮನೆಯಲ್ಲಿ ವಸಂತಾಳ ಶವ ಸಿಕ್ಕರೆ, ಮನೆಯ ಬೆಡ್ ರೂಮ್ ನಲ್ಲಿ ರಾಜೇಶ್ವರಿ ಮತ್ತು ರಾಜೇಶ್ವರಿ ಮೊಮ್ಮಗ ಸಾಯಿಧರ್ಮತೇಜ್ ಶವ ಸಿಕ್ಕಿತ್ತು. 
ಮೂವರ ಶವದ ಮೇಲೆ ಯಾವುದೇ ಗಾಯದ ಗುರುತುಗಳಿಲ್ಲ. ಹೀಗಾಗಿ ಮೇಲ್ನೋಟಕ್ಕೆ ಕೌಟುಂಬಿಕ ಕಲಹದಿಂದ ನೊಂದು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿತ್ತು. ಈ ಬಗ್ಗೆ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣ ದಾಖಲಾಗಿದ್ದು ತನಿಖೆ ಆರಂಭಿಸಿದ್ದರು. ಸ್ಥಳಕ್ಕೆ ಕೊಪ್ಪಳ ಎಸ್ಪಿ ಯಶೋಧಾ ವಂಟಗೋಡಿಗೂ ಆಗಮಿಸಿ ಪರಿಶೀಲನೆ ನಡೆಸಿದ್ದರು. ಮೂವರ ಶವಗಳನ್ನು ನೋಡಿದಾಗ ಆರಂಭದಲ್ಲಿಯೇ ಆತ್ಮಹತ್ಯೆಯ ಶಂಕೆಯನ್ನೇ ಹೊಂದಿದ್ದರು. ಆದರೆ ಆತ್ಮಹತ್ಯೆ ಮಾಡಿಕೊಂಡಿದ್ದು ಯಾಕೆ? ಆತ್ಮಹತ್ಯೆ ಮಾಡಿಕೊಂಡರ ಬಗ್ಗೆ ತನಿಖೆ ಆರಂಭಿಸಿದಾಗ ಪೊಲೀಸರಿಗೆ ಆತ್ಮಹತ್ಯೆ ಮಾಡಿಕೊಂಡ ಕಾರಣ ಯಾವುದೂ ಇರಲಿಲ್ಲ ಅನ್ನೋದು.
ತನಿಖೆಯಲ್ಲಿ ಮೂವರು ಕೂಡ ಆತ್ಮಹತ್ಯೆ ಮಾಡಿಕೊಂಡಿಲ್ಲ. ಬದಲಾಗಿ ಮೂವರನ್ನು ಉಸಿರುಗಟ್ಟಿಸಿ ಕೊಲೆ ಮಾಡಲಾಗಿದೆ ಎಂದು ದೃಢಪಟ್ಟಿತ್ತು. ಹಾಗದ್ರೆ ಕೊಲೆ ಮಾಡಿದವರು ಯಾರು ಅಂತ ಪತ್ತೆ ಹಚ್ಚಿದಾಗ ವಸಂತಾಳನ್ನು ಎರಡನೇ ಮದುವೆಯಾಗಿದ್ದ ಆಸೀಫ್ ಪತ್ತೆಗೆ ಬೆಚ್ಚಿಬಿದ್ದಿದ್ದಾರೆ.
ಕೊಲೆ ಮಾಡಿದ್ದು ಯಾಕೆ ? ಎರಡನೇ ಮದುವೆಯಾಗಿದ್ದ ಆರೀಫ್ನ ಸಹೋದರ ಹೊಸಪೇಟೆ ನಿವಾಸಿ ಆಸೀಫ್ (28) ಮೂವನನ್ನು ಕೊಲೆ ಮಾಡಿದ್ದಾನೆ. ಕೊಲೆ ವಸಂತಾಳಿಗೆ ಮೊದಲು ಆಂಧ್ರಪ್ರದೇಶದ ನಂದ್ಯಾಲ ಮೂಲದ ವ್ಯಕ್ತಿ ಜೊತೆ ಮದುವೆಯಾಗಿತ್ತು. ದಂಪತಿಗೆ ಪುತ್ರ ಸಾಯಿ ಧರ್ಮತೇಜ್ ಜನಿಸಿದ್ದರು. ಆದರೆ ಕೌಟುಂಬಿಕ ಕಲಹದಿಂದ ವಸಂತಾ, ಮೊದಲ ಪತಿಯನ್ನು ಬಿಟ್ಟು ಬಂದು, ಹೊಸಲಿಂಗಾಪುರ ಗ್ರಾಮದಲ್ಲಿ ತಾಯಿ ಮತ್ತು ಮಗನ ಜೊತೆ ಬಾಡಿಗೆ ಮನೆ ಮಾಡಿಕೊಂಡು ಜೀವನ ನಡೆಸುತ್ತಿದ್ದಳು. ಹೊಸಲಿಂಗಾಪುರ ಗ್ರಾಮದ ಹೊರವಲಯದಲ್ಲಿರುವ ಗೊಂಬೆ ಫ್ಯಾಕ್ಟರಿಯಲ್ಲಿ ಕೆಲಸ ನಡೆಯುತ್ತಿದೆ. ಈ ಸಮಯದಲ್ಲಿ ತನ್ನದೇ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿರುವ ಆರೀಫ್ ಜೊತೆ ಪ್ರೇಮ ಬೆಳೆದಿತ್ತು. ಹೀಗಾಗಿ ಆರೀಫ್ ಮತ್ತು ವಸಂತ 6 ತಿಂಗಳ ಹಿಂದೆ ಮದುವೆಯಾಗಿದ್ದರು. ಮದುವೆಯಾದ ನಂತರ ಆರೀಫ್ ಆಗ ವಸಂತ ಇದ್ದ ಬಾಡಿಗೆ ಮನೆಗೆ ಬಂದು ಹೋಗುತ್ತಿದ್ದ.
ಆರೀಫ್‌ಗೆ ಕೂಡ ಮೊದಲ ಪತ್ನಿಯಿದ್ದು, ದಂಪತಿಗೆ ಮಕ್ಕಳು ಕೂಡ ಇದ್ದಾರೆ. ಯಾವಾಗ ಆರೀಫ್‌ ವಸಂತಾಳನ್ನು ಮದುವೆಯಾದನೋ ಆಗ ಆಸೀಫ್‌ ಸಿಟ್ಟಾಗಿದ್ದ. ಆರೀಫ್ ಮದುವೆಯಾಗುವ ಮೊದಲು ಆಸೀಫ್ ವಸಂತಾಳನ್ನು ಪ್ರೀತಿಸುತ್ತಿದ್ದ. ಇಬ್ಬರು ಕೂಡ ಮದುವೆಯಾಗಲು ನಿರ್ಧರಿಸಿದ್ದರಂತೆ. ಆದರೆ ಬದಲಾದ ಸಮಯದಲ್ಲಿ ವಸಂತಾ, ಆಸೀಫ್‌ ಬಿಟ್ಟು ಆತನ ಸಹೋದರ ಆರೀಫ್‌ನ ಪ್ರೀತಿಯ ಬಲೆಯಲ್ಲಿ ಬಿದ್ದಿದ್ದಳು.
ಆರೀಫ್ ಮತ್ತು ವಸಂತಾ ಮದುವೆಯಾದ ನಂತರ ಆಸೀಫ್ ಸಿಟ್ಟು ಮತ್ತಷ್ಟು ಹೆಚ್ಚಾಗಿತ್ತು. ಇದೇ ಸಿಟ್ಟಿನಲ್ಲಿ ಸೋಮವಾರ ಸಂಜೆ ಐದರಿಂದ ಆರು ಗಂಟೆ ಸಮಯದಲ್ಲಿ ವಸಂತಾಳ ಮನೆಗೆ ಬಂದಿದ್ದ. ಮೊದಲು ರಾಜೇಶ್ವರಿಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿದ್ದ. ನಂತರ ಸಾಯಿ ಧರ್ಮತೇಜ್ ನನ್ನನ್ನು ಕೊಲೆ ಮಾಡಿದ್ದಾನೆ. ನಂತರ ಕೆಲಸ ಮುಗಿಸಿ ಮನೆಗೆ ಬಂದಿದ್ದ ವಸಂತಾಳನ್ನು ಕೂಡ ಕೊಲೆ ಮಾಡಿದ್ದ. ಮೂವರನ್ನು ಉಸಿರುಗಟ್ಟಿಸಿ ಕೊಲೆ ಮಾಡಿದ್ದಾನೆ.
ಸದ್ಯ ಮೂವರ ಸಾವಿನ ಬಗ್ಗೆ ತನಿಖೆ ನಡೆಸಿದ ಪೊಲೀಸರು 24 ಗಂಟೆಯೊಳಗೆ ಆರೋಪಿಯನ್ನು ಬಂಧಿಸುವ ಮೂಲಕ ಕಂಬಿ ಹಿಂದೆ ಕಳುಹಿಸಿದ್ದಾರೆ. ಭಗ್ನ ಪ್ರೇಮಿಯ ಹುಚ್ಚಾಟಕ್ಕೆ ಬಾಳಿ ಬದುಕಬೇಕಿದ್ದ ಮೂವರು ಬಾರದ ಲೋಕಕ್ಕೆ ಹೋಗಿದ್ದು ಮಾತ್ರ ದುರಂತವೇ ಸರಿ.

Related Post

Leave a Reply

Your email address will not be published. Required fields are marked *