Breaking
Tue. Dec 24th, 2024

ಉದ್ಯೋಗ ಖಾತ್ರಿ ಯೋಜನೆ (ನರೇಗಾ) ಕಾರ್ಯಕ್ರಮದಲ್ಲಿ ಅತ್ಯುತ್ತಮ ಸಾಧನೆ ಮಾಡಿದ ಚಿತ್ರದುರ್ಗ ಜಿಲ್ಲೆಗೆ ಪ್ರಥಮ ಸ್ಥಾನ….!

ಚಿತ್ರದುರ್ಗ. ಮೇ.29 : 2023-24ನೇ ಸಾಲಿನಲ್ಲಿ ಕೃಷಿ ಇಲಾಖೆ ವಿವಿಧ ಯೋಜನೆ, ಕಾರ್ಯಕ್ರಮಗಳ ಸಮಗ್ರ ಅನುಷ್ಠಾನದಲ್ಲಿ ಅತ್ಯುತ್ತಮ ಸಾಧನೆ ಮಾಡಿದ ಚಿತ್ರದುರ್ಗ ಜಿಲ್ಲೆಗೆ ದ್ವಿತೀಯ ಸ್ಥಾನ ಹಾಗೂ ಕೃಷಿ ಇಲಾಖೆ ಪರೀಕ್ಷಾ ಪ್ರಯೋಗಾಲಯಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿದ ಚಿತ್ರದುರ್ಗ ಜಿಲ್ಲೆಯ ಪರೀಕ್ಷಾಾಲಯಕ್ಕೆ ಪ್ರಥಮ ಸ್ಥಾನ ಹಾಗೂ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ (ನರೇಗಾ) ಕಾರ್ಯಕ್ರಮದಲ್ಲಿ ಅತ್ಯುತ್ತಮ ಸಾಧನೆ ಮಾಡಿದ ಚಿತ್ರದುರ್ಗ ಜಿಲ್ಲೆಗೆ ಪ್ರಥಮ ಸ್ಥಾನ ಲಭಿಸಿದ್ದು, ಈಚೆಗೆ ಬೆಂಗಳೂರಿನಲ್ಲಿ ನಡೆಯುತ್ತಿರುವ ಪ್ರಸಕ್ತ ಸಾಲಿನ ರಾಜ್ಯಮಟ್ಟದ ಮುಂಗಾರು ಹಂಗಾಮಿನ ಕಾರ್ಯಾಗಾರದಲ್ಲಿ ಪ್ರಶಂಸನಾ ಪತ್ರ ನೀಡಿ ಪುರಸ್ಕರಿಸಲಾಗಿದೆ.
ಜಿಲ್ಲೆಗೆ ಕೃಷಿ ಇಲಾಖಾ ಕಾರ್ಯಕ್ರಮಗಳ ಅನುಷ್ಠಾನದಲ್ಲಿ ವಿವಿಧ ಯೋಜನೆಗಳನ್ನು ಕಾಲಾನುಕಾಲಕ್ಕೆ ರೈತರಿಗೆ ತಲುಪಿಸಿ ತಾಂತ್ರಿಕ ಮಾಹಿತಿ ಒದಗಿಸಿ, ಬರಗಾಲದ ಪರಿಸ್ಥಿತಿಯಲ್ಲಿ ಇಳುವರಿ ಪಡೆದು, ಜೀವನ ನಿರ್ವಹಣೆಗೆ ಸುಲಲಿತವಾಗಿ ಭರವಸೆ ನೀಡಿದ ಕಾರ್ಯಕ್ರಮಗಳ ಯಶಸ್ವಿ ಅನುಷ್ಠಾನಕ್ಕೆ ಎರಡನೇ ಅತ್ಯುತ್ತಮ ಜಿಲ್ಲೆ ಪ್ರಶಸ್ತಿ ಪಡೆದಿದೆ.
ನಾವು ಸತ್ತರೆ ಮಣ್ಣಿಗೆ, ಮಣ್ಣು ಸತ್ತರೆ ಎಲ್ಲಿಗೆ”, “ಮಣ್ಣಿನ ಆರೋಗ್ಯದ ಬೆಳೆಗಳ ಆರೋಗ್ಯ – ನಮ್ಮ ಆರೋಗ್ಯ” ಈ ಗ್ರಾಮಗಳಲ್ಲಿ ಮಣ್ಣು ಅಭಿಯಾನ ಕಾರ್ಯಕ್ರಮದ ಮಣ್ಣು ಪರೀಕ್ಷೆ, ಮಣ್ಣು ಪರೀಕ್ಷೆಯ ಆಧಾರದ ಮೇಲೆ ರಸಗೊಬ್ಬರಗಳ ಸಮರ್ಥ ಬಳಕೆ ಕುರಿತು ಸಕಾಲದಲ್ಲಿ ಮಾಹಿತಿ ನೀಡಿದ ಮಣ್ಣು ಆರೋಗ್ಯ ಕೇಂದ್ರ ಚಿತ್ರದುರ್ಗವು ರಾಜ್ಯದಲ್ಲಿ ಪ್ರಥಮ ಸ್ಥಾನಕ್ಕೆ ಭಾಜನರಾಗಿರುವುದು ಹೆಮ್ಮೆಯ ವಿಷಯ.
ಮಣ್ಣು ಮತ್ತು ನೀರು ಸಂರಕ್ಷಣೆ ಕುರಿತು ಜಲನಯನ ಇಲಾಖೆ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆ ಬದು ನಿರ್ಮಾಣ, ಕೃಷಿ ಹೊಂಡ, ಅರಣ್ಯ ಹಾಗೂ ತೋಟಗಾರಿಕೆ ಚಟುವಟಿಕೆಗಳ ಮೂಲಕ ಮಣ್ಣು ಮತ್ತು ನೀರು ಸಂರಕ್ಷಣೆ ಮಾಡುವುದರ ಜೊತೆಗೆ ಕೃಷಿ ಕಾರ್ಮಿಕರಿಗೆ ಉದ್ಯೋಗ ಕಲ್ಪಿಸುವ ಮೂಲಕ ಉತ್ತಮ ಪ್ರಗತಿ ಸಾಧಿಸಿ ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದು ಮತ್ತೊಂದು ಗರಿ ಮುಡಿಗೇರಿಸಿಕೊಂಡಿದೆ.
ಭಾಜನರಾದ ಹಿನ್ನಲೆಯಲ್ಲಿ ಕೃಷಿ ಇಲಾಖೆ ಅಧಿಕಾರಿ ಜಿಲ್ಲಾಧಿಕಾರಿ ಜಿ.ವೆಂಕಟೇಶ್, ಜಿಲ್ಲಾ ಪಂಚಾಯಿತಿ ಸಿಐಒ ಎಸ್.ಜೆ.ಸೋಮಶೇಖರ್ ಹಾಗೂ ಉಪವಿಾಧಿಕಾರಿ ಎಂ.ಕಾರ್ತಿಕ್ ಅವರಿಗೆ ಅಭಿನಂದಿಸಿದರು.
ಈ ಸಂದರ್ಭದಲ್ಲಿ ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಮಂಜುನಾಥ್, ಉಪ ಕೃಷಿನಿರ್ದೇಶಕರಾದ ಶಿವಕುಮಾರ್, ಪ್ರಭಾಕರ್ ಸೇರಿದಂತೆ ಕೃಷಿ ಇಲಾಖೆಯ ಸಹಾಯಕ ಕೃಷಿ ನಿರ್ದೇಶಕರು, ಮಣ್ಣು ಆರೋಗ್ಯ ಕೇಂದ್ರದ ಸಹಾಯಕ ಕೃಷಿ ನಿರ್ದೇಶಕರು, ವಿಷಯ ತಜ್ಞರು.

Related Post

Leave a Reply

Your email address will not be published. Required fields are marked *