Breaking
Tue. Dec 24th, 2024

ಶಕ್ತಿ ಯೋಜನೆಯಿಂದ ಜಿಎಸ್ಟಿ ಸಂಗ್ರಹ ಮತ್ತು ಮಹಿಳೆಯರ ಪಾಲುದಾರಿಕೆ ಶೇ 25.1ನಿಂದ 30.2ಗೆ ಹೆಚ್ಚಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ…..!

ಬೆಂಗಳೂರು, ಮೇ 29: ರಾಜ್ಯ ಕಾಂಗ್ರೆಸ್ ಸರ್ಕಾರ ಘೋಷಣೆ ಮಾಡಿರುವ ಐದು ಗ್ಯಾರಂಟಿಗಳಲ್ಲಿ ಉಚಿತ ಬಸ್ ಪ್ರಯಾಣದ ಶಕ್ತಿ ಯೋಜನೆ ಕೂಡ ಒಂದು. ಮೊದಮೊದಲು ಈ ಯೋಜನೆ ಜಾರಿಯಾದಾಗ ಹೆಚ್ಚಿನ ಸಂಖ್ಯೆಯ ಮಳೆಯರೇ ಆ ಸ್ಥಳ.
ಕೆಲವೊಮ್ಮೆ ಸೀಟು ಸಿಗದಿದ್ದಾಗ ಮಹಿಳೆಯ ಮಧ್ಯೆ ದೊಡ್ಡ ದೊಡ್ಡ ಜಗಳಗಳೇ ಆಗಿವೆ. ಈ ಉಚಿತ ಬಸ್ ಯೋಜನೆ ಬಗ್ಗೆ ಬಿಜೆಪಿ ಸಕಾಷ್ಟು ಟೀಕೆ ಮಾಡಿತ್ತು. ಪ್ರಸ್ತುತ ಈಗ ಇದೆ ಶಕ್ತಿ ಯೋಜನೆಯಿಂದ ಜಿಎಸ್ಟಿ ಸಂಗ್ರಹ ಮತ್ತು ಮಹಿಳೆಯರ ಪಾಲುದಾರಿಕೆ ಶೇ 25.1 ರಿಂದ 30.2 ಗೆ ಪ್ರಾರಂಭವಾಯಿತು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಪ್ರಾರಂಭಿಸಿದರು.
ಈ ಕುರಿತಾಗಿ ಟ್ವೀಟ್ ಮಾಡಿರುವ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಶಕ್ತಿ ಉಚಿತ ಯೋಜನೆ ಎಂದು ಮೂಗು ಮುರಿಯುವವರ ಗಮನಕ್ಕೆ! ಶಕ್ತಿ ಯೋಜನೆಯಿಂದ ಜಿಎಸ್ಟಿ ಸಂಗ್ರಹ ಹೆಚ್ಚಿದೆ, ಉದ್ಯೋಗ ಕ್ಷೇತ್ರದಲ್ಲಿ ಶೇ 25.1 ರಿಂದ 30.2ರಷ್ಟು ಮಹಿಳೆಯ ಪಾಲುದಾರಿಕೆ ಹೊಂದಿದೆ. ಇದು ಬಿಟ್ಟಿ ಭಾಗ್ಯವಲ್ಲ ಸಮಾಜದಲ್ಲಿ ಸರ್ಕಾರ ಹೂಡಿರುವ ಬಂಡವಾಳ ಎಂದು ಮಾಹಿತಿ ಹಂಚಿಕೊಂಡಿದ್ದಾರೆ. ಆ ಮೂಲಕ ಶಕ್ತಿ ಉಚಿತ ಯೋಜನೆ ಎಂದು ಮೂಗು ಮುರಿಯುವ ಬಿಜೆಪಿಗೆ ಟಾಂಗ್ ಹೇಳಿದೆ.
ಕರ್ನಾಟಕ ಕಾಂಗ್ರೆಸ್ ನಮ್ಮ ನಾಗರಿಕರ ಕಲ್ಯಾಣವನ್ನು ಬದ್ಧವಾಗಿದೆ. ಅದರಲ್ಲೂ ವಿಶೇಷವಾಗಿ ತಮ್ಮ ಕುಟುಂಬಗಳನ್ನು ಕಾಳಜಿ ವಹಿಸುವ ಆರ್ಥಿಕ ಸಬಲೀಕರಣಕ್ಕೆ ಅರ್ಹರಾಗಿರುವ ಕಠಿಣ ಪರಿಶ್ರಮಿ ಮಹಿಳೆಯರಿಗೆ. ಶಕ್ತಿ ಯೋಜನೆ; ಸಬಲೀಕರಣಗೊಂಡ ಮಹಿಳೆಯರ ಪಯಣ ಎಂದು ಬರೆದುಕೊಂಡಿದ್ದಾರೆ.
 ಶಕ್ತಿ ಯೋಜನೆ ಜಾರಿ ಬಳಿಕ ಸದ್ಬಳಕೆ ಮಾಡಿಕೊಳ್ಳುತ್ತಿದ್ದ ಮಹಿಳೆಯರು ಉಚಿತ ಸವಾರಿಯನ್ನು ಮತ್ತಷ್ಟು ಜೋರು ಮಾಡಿದ್ದರು. ಯೋಜನೆ ಆರಂಭವಾದ 18ನೇ ದಿನಕ್ಕೆ ಒಟ್ಟು 8 ಕೋಟಿಗೂ ಹೆಚ್ಚು ಮಹಿಳೆಯರು ಉಚಿತವಾಗಿ ಬಸ್‌ನಲ್ಲಿ ಸಂಚಾರ ಮಾಡಲಾಗಿತ್ತು. 2024ರ ಏಪ್ರಿಲ್ ಅಂತ್ಯದವರೆಗೆ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನಾಲ್ಕು ನಿಗಮಗಳ ಬಸ್‌ನಲ್ಲಿ ಬರೋಬ್ಬರಿ 200 ಕೋಟಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಿದ್ದಾರೆ.
ಗುಂಪು ಗುಂಪಾಗಿ ಸಾಕಷ್ಟು ಹೆಚ್ಚಾಗಿ ಮಹಿಳೆಯರು ದೇವಸ್ಥಾನಗಳಿಗೆ ಭೇಟಿ ನೀಡಿದ್ದರು. ದೇವಸ್ಥಾನದ ಹುಂಡಿಗಳು ತುಂಬಿದ್ದವು. ಅಷ್ಟೇ ಅಲ್ಲದೆ ಧಾರ್ಮಿಕ ದತ್ತಿ ಇಲಾಖೆಗೂ ಸಾಕಷ್ಟು ಹಣ ಹರಿದುಬಂದಿದೆ.

Related Post

Leave a Reply

Your email address will not be published. Required fields are marked *