ಲಕ್ನೋ : ಅಯೋಧ್ಯೆಯ ರಾಮಮಂದಿರವನ್ನು ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ ಆರೋಪದ ಮೇಲೆ ಉತ್ತರಪ್ರದೇಶದ ಕುಶಿನಗರ ಜಿಲ್ಲೆಯ ಬಲುವಾ ಟಾಕಿಯಾ ಗ್ರಾಮದ 14 ವರ್ಷದ ಬಾಲಕ ಹಾಗೂ ಆತನ ಅಜ್ಜಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬಾಲಕ ಮಂಗಳವಾರ ರಾತ್ರಿ ಪೊಲೀಸ್ ಕಂಟ್ರೋಲ್ ರೂಮ್‍ನ ತುರ್ತು ಸಹಾಯವಾಣಿ 112ಕ್ಕೆ ಕರೆಮಾಡಿ, ಮಂದಿರವನ್ನು ಬಾಂಬ್‍ನಿಂದ ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ್ದಾನೆ. ಬಳಿಕ ಪೊಲೀಸರು ಸೈಬರ್ ಸೆಲ್ ಸಹಾಯದಿಂದ ಆರೋಪಿಗಳಿದ್ದ ಸ್ಥಳವನ್ನು ಪತ್ತೆಹಚ್ಚಿದ್ದಾರೆ. ಇದೀಗ ಆರೋಪಿ ಬಾಲಕ ಹಾಗೂ ಆತನ ಅಜ್ಜಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಬಾಲಕ ಬುದ್ಧಿಮಾಂದ್ಯತೆಯಿಂದ ಬಳಲುತ್ತಿದ್ದು, ಚಿಕಿತ್ಸೆ ಪಡೆಯುತ್ತಿದ್ದಾನೆ ಎಂದು ಕುಶಿನಗರ ಪೊಲೀಸ್ ವರಿಷ್ಠಾಧಿಕಾರಿ ಧವಲ್ ಜೈಸ್ವಾಲ್ ತಿಳಿಸಿದ್ದಾರೆ.