Breaking
Tue. Dec 24th, 2024

ಜೂನ್ 3 ರಂದು ಪದವೀಧರ ಕ್ಷೇತ್ರದ ಚುನಾವಣೆ ನಡೆಯಲಿದ್ದು, ಅದಕ್ಕೆಂದೆ ಶಿಕ್ಷಕರಿಗೆ ಸಾರ್ವತ್ರಿಕ ರಜೆ ಘೋಷಣೆ…!

ಲೋಕಸಭಾ ಚುನಾವಣೆಯ ಬೆನ್ನಲ್ಲೇ ಪದವೀಧರ ಕ್ಷೇತ್ರದ ಚುನಾವಣೆಗೆ ಸಿದ್ಧತೆ ನಡೆದಿದೆ. ಜೂನ್ 3 ರಂದು ಅಭ್ಯರ್ಥಿಗಳ ಚುನಾವಣೆ, ಅದಕ್ಕಾಗಿ ಶಿಕ್ಷಕರಿಗೆ ಸಾರ್ವತ್ರಿಕ ರಜೆ ಘೋಷಿಸಲಾಗಿದೆ. ಅರ್ಹ ಮತದಾರರಿಗೆ ಅರ್ಜಿ ಸಲ್ಲಿಸುವಂತೆ ಈ ರಜೆಯನ್ನು ಪ್ರಕಟಿಸಲಾಗಿದೆ.
ಯಾವೆಲ್ಲಾ ಜಿಲ್ಲೆ ಚುನಾವಣೆ ಎಂಬ ಮಾಹಿತಿ ಇಲ್ಲಿದೆ. ಕರ್ನಾಟಕ ಈಶಾನ್ಯ ಪದವೀಧರ ಕ್ಷೇತ್ರ. ಬೀದರ್, ಗುಲ್ಬರ್ಗ, ರಾಯಚೂರು, ಕೊಪ್ಪಳ, ಬಳ್ಳಾರಿ (ದಾವಣಗೆರೆ ಜಿಲ್ಲೆ ಹರಪನಹಳ್ಳಿ ತಾಲೂಕು ಒಳಗೊಂಡಂತೆ)
 ಕರ್ನಾಟಕ ನೈಋತ್ಯ ಪದವೀಧರ ಕ್ಷೇತ್ರ. ಶಿವಮೊಗ್ಗ (ದಾವಣಗೆರೆ ಜಿಲ್ಲೆ ಚನ್ನಗಿರಿ ಮತ್ತು ಹೊನ್ನಾಳಿ ತಾಲೂಕು ಸೇರಿದಂತೆ), ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು ಹಾಗೂ ಕೊಡಗು.
 ಬೆಂಗಳೂರು ಪದವೀಧರ ಕ್ಷೇತ್ರ. ಬೆಂಗಳೂರು ನಗರ ಹಾಗೂ ಬೆಂಗಳೂರು ಗ್ರಾಮಾಂತರ.
ಆಗ್ನೇಯ ಶಿಕ್ಷಕರ ಕ್ಷೇತ್ರ. ಚಿತ್ರದುರ್ಗ, ದಾವಣಗೆರೆ (ಚನ್ನಗಿರಿ, ಹೊನ್ನಾಳಿ ಮತ್ತು ಹರಪನಹಳ್ಳಿ ತಾಲೂಕುಗಳನ್ನು), ತುಮಕೂರು, ಕೋಲಾರ.
 ಕರ್ನಾಟಕ ನೈಋತ್ಯ ಶಿಕ್ಷಕರ ಕ್ಷೇತ್ರ. ಶಿವಮೊಗ್ಗ (ದಾವಣಗೆರೆ ಜಿಲ್ಲೆ ಚನ್ನಗಿರಿ ಮತ್ತು ಹೊನ್ನಾಳಿ ತಾಲೂಕು ಸೇರಿದಂತೆ), ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು ಮತ್ತು ಕೊಡಗು.
ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರ. ಮೈಸೂರು, ಚಾಮರಾಜನಗರ, ಮಂಡ್ಯ ಹಾಗೂ ಹಾಸನದಲ್ಲಿ ಚುನಾವಣೆ.
ಹಿನ್ನಲೆಯಲ್ಲಿ ವಿಧಾನ ಪರಿಷತ್ ಮತ ಕ್ಷೇತ್ರ ಸರ್ಕಾರಿ ಹಾಗೂ ಖಾಸಗಿ ಶಾಲಾ ಕಾಲೇಜುಗಳು, ಅನುದಾನಿತ ಹಾಗೂ ಅನುದಾನ ರಹಿತ ವಿದ್ಯಾ ಸಂಸ್ಥೆಗಳು, ಈ ಎಲ್ಲಾ ಶೈಕ್ಷಣಿಕ ಸಂಸ್ಥೆಗಳು, ರಾಜ್ಯ ಹಾಗೂ ಕೇಂದ್ರ ಸರ್ಕಾರದ ಕಛೇರಿಗಳು, ರಾಷ್ಟ್ರೀಕೃತ ಹಾಗೂ ಇತರ ಬ್ಯಾಂಕುಗಳು, ಕೇಂದ್ರ ಹಾಗೂ ರಾಜ್ಯ ಸರ್ಕಾರದ ಕಾರ್ಖಾನೆಗಳು, ಉಳಿದ ಕೈಗಾರಿಕೆ ಸಂಸ್ಥೆಗಳು ಹಾಗೂ ಸಹಕಾರ ರಂಗದ ಸಂಘ ಸಂಸ್ಥೆಗಳು ಎಲ್ಲಾ ವ್ಯವಹಾರಿಕ ಸಂಸ್ಥೆಗಳು, ಔದ್ಯಮಿಕ ಸಂಸ್ಥೆಗಳು ಮತ್ತು ಇತರ ಸಂಸ್ಥೆಗಳಲ್ಲಿ ಖಾಯಂ ಆಗಿ ಅಥವಾ ದಿನಗೂಲಿ ಕೆಲಸ ನಿರ್ವಹಿಸುವ ಪದವೀಧರರು ಹಾಗೂ ಶಿಕ್ಷಕರ ಮತದಾನಕ್ಕೆ ಅನುಕೂಲವಾಗುವಂತೆ ವಿಶೇಷ ಸಾಂದರ್ಭಿಕ ರಜೆ ಮಂಜೂರು ಮಾಡಲಾಗಿದೆ.

Related Post

Leave a Reply

Your email address will not be published. Required fields are marked *