ಚಿತ್ರದುರ್ಗ, ಮೇ. 30 : ಎಸ್.ಎಸ್.ಎಲ್.ಸಿ. ಮತ್ತು ದ್ವಿತೀಯ ಪಿ.ಯು.ಸಿ.ಯಲ್ಲಿ ಅತಿ ಹೆಚ್ಚು ಅಂಕಗಳನ್ನು ಗಳಿಸಿರುವ ವಿದ್ಯಾರ್ಥಿಗಳಿಗೆ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡೆ ಹಾಗೂ ಸಾಂಸ್ಕೃತಿಕ ಸಂಘದ ವತಿಯಿಂದ ಪ್ರತಿಭಾ ಪುರಸ್ಕಾರ ಹಮ್ಮಿಕೊಳ್ಳಲಾಗಿತ್ತು.
ಯುವ ಬರಹಗಾರ ವಿಮರ್ಶಕ ಡಾ.ವೇದಾಂತ್ ಏಳಂಜಿ ಮಾತನಾಡಿ ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್‍ರವರ ವಿಚಾರಗಳನ್ನು ವಿದ್ಯಾರ್ಥಿಗಳು ಪಾಲಿಸಬೇಕು. ಶಿಕ್ಷಣ, ಸಂಘಟನೆ, ಹೋರಾಟದಿಂದ ಮಾತ್ರ ಅಭಿವೃದ್ದಿ ಸಾಧ್ಯ ಎನ್ನುವುದು ಅಂಬೇಡ್ಕರ್‍ರವರ ಮೂಲ ಮಂತ್ರ ಎಂದು ಹೇಳಿದರು.
ಪ್ರಾಧ್ಯಾಪಕ ಮಂಜುನಾಥ್ ಆರ್.ಮಾತನಾಡುತ್ತ ಶೈಕ್ಷಣಿಕ ಹಂತದಲ್ಲಿ ಪೋಷಕರು ಮಕ್ಕಳ ಆಸಕ್ತಿಗನುಗುಣವಾಗಿ ಪ್ರೋತ್ಸಾಹಿಸಬೇಕು. ಸ್ಪರ್ಧಾತ್ಮಕ ಯುಗದಲ್ಲಿ ಒಂದೊಂದು ಅಂಕಗಳಿಗೂ ಪ್ರಾಮುಖ್ಯತೆಯಿರುವುದರಿಂದ ವಿದ್ಯಾರ್ಥಿಗಳು ಶಿಕ್ಷಣದ ಕಡೆ ಹೆಚ್ಚಿನ ಗಮನ ಕೊಡಬೇಕೆಂದರು.
ಪ್ರಾಧ್ಯಾಪಕ ಲಿಂಗೇಶ್ವರ್ ಮಾತನಾಡಿ ಶಿಕ್ಷಣದಿಂದ ಮಾತ್ರ ಸಮಾಜದಲ್ಲಿ ಬದಲಾವಣೆ ತರಲು ಸಾಧ್ಯ ಎಂದು ತಿಳಿಸಿದರು. ಸೃಷ್ಟಿ, ರೇಖ, ರಶ್ಮಿ, ಸಿಂಚನ, ಐಶ್ವರ್ಯ, ವರ್ಷಿತ, ಸಂಜನ ಇವರುಗಳನ್ನು ಸನ್ಮಾನಿಸಿ ಗೌರವಿಸಲಾಯಿತು.
ಗ್ರಾಮ ಪಂಚಾಯಿತಿ ಸದಸ್ಯ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡೆ ಹಾಗೂ ಸಾಂಸ್ಕøತಿಕ ಸಂಘದ ಅಧ್ಯಕ್ಷ ನಾಗರಾಜ್, ಸಂತೋಷ, ಹರೀಶ್, ಪ್ರಭಾಕರ್, ಮಂಜುನಾಥ, ಮಾರಪ್ಪ, ತಿಪ್ಪೇಸ್ವಾಮಿ, ಗ್ರಾಮದ ಮುಖಂಡರುಗಳಾದ ಕರಿಯಪ್ಪ, ಪರಮೇಶ್ವರಪ್ಪ, ಶಂಕರ ಇವರುಗಳು ವೇದಿಕೆಯಲ್ಲಿದ್ದರು.
ಪ್ರಕಾಶ್ ಪ್ರಾರ್ಥಿಸಿದರು. ಪೊಲೀಸ್ ನಿಂಗರಾಜ್ ನಿರೂಪಿಸಿದರು.