Breaking
Mon. Dec 23rd, 2024

ವಾಲ್ಮೀಕಿ ಅಭಿವೃದ್ಧಿ ನಿಗಮದ ಕೋಟ್ಯಂತರ ಹಣ ದುರುಪಯೋಗ ಪ್ರಕರಣದಲ್ಲಿ ಇಬ್ಬರು ಅಧಿಕಾರಿಗಳು ಅಮಾನತು…!

ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದ ಕೋಟ್ಯಂತರ ಹಣ ದುರುಪಯೋಗ ಪ್ರಕರಣದಲ್ಲಿ ಇಬ್ಬರು ಅಧಿಕಾರಿಗಳು ಅಮಾನತುಗೊಂಡಿದ್ದಾರೆ.
ನಿಗಮದ ವ್ಯವಸ್ಥಾಪಕ ನಿರ್ದೇಶಕ ಜೆ.ಜಿ.ಪದ್ಮನಾಭ್ ಮತ್ತು ಲೆಕ್ಕಾಧಿಕಾರಿ ಪರಶುರಾಮ್‌ ಜಿ.ದುರ್ಗಣ್ಣ ಅವರನ್ನು ಅಮಾನತುಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ನಿಗಮದ ಮುಖ್ಯ ಖಾತೆಯಲ್ಲಿ ಮೀಸಲಿಟ್ಟಿದ್ದ 187 ಕೋಟಿ ರೂ. ಮೊತ್ತದಲ್ಲಿ ಹಿರಿಯ ಅಧಿಕಾರಿಗಳ ಗಮನಕ್ಕೆ ತಾರದೇ 88 ಕೋಟಿ ರೂ. ಹಣವನ್ನು ಅನ್ಯ ಖಾತೆಗೆ ವರ್ಗಾಯಿಸಿ ದುರುಪಯೋಗ ಪಡಿಸಿಕೊಳ್ಳಲಾಗಿದೆ. 
ಪ್ರಕರಣಕ್ಕೆ ಸಂಬಂಧಿಸಿದಂತೆ ಡೆತ್‌ನೋಟ್‌ ಬರೆದಿಟ್ಟು ನಿಗಮದ ಅಧೀಕ್ಷಕ ಚಂದ್ರಶೇಖರ್‌ ಎಂಬವರು ಆತ್ಮಹತ್ಯೆ ಮಾಡಿಕೊಂಡಿದ್ದರು. ಡೆತ್‌ನೋಟ್‌ನಲ್ಲಿ ಇಬ್ಬರು ಅಧಿಕಾರಿಗಳು ಬ್ಯಾಂಕ್ ಮತ್ತು ಉದ್ಯೋಗಿಯೊಬ್ಬರ ಹೆಸರನ್ನು ಉಲ್ಲೇಖಿಸಲಾಗಿದೆ. ಅಕ್ರಮ ಹಣ ವರ್ಗಾವಣೆಗೆ ಇವರೇ ಕಾರಣ ಎಂದು ಆರೋಪಿಸಿದ್ದರು.
ಇದೀಗ 88 ಕೋಟಿ ರೂ. ಹಣ ಅಕ್ರಮ ವರ್ಗಾವಣೆಗೆ ಈಬ್ಬರು ಅಧಿಕಾರಗಳ ಅಮಾನತು ಮಾಡಲಾಗಿದೆ. ಇಲಾಖಾ ಸಚಿವರು, ನಿಗಮದ ಅಧ್ಯಕ್ಷರು, ಹಿರಿಯ ಅಧಿಕಾರಿಗಳ ಗಮನಕ್ಕೆ ತರದೇ ಯೂನಿಯನ್ ಆಫ್ ಇಂಡಿಯಾದ ಅಧಿಕೃತ ಖಾತೆಗೆ ಹಣ ವರ್ಗಾವಣೆ ಮಾಡಲು ಮುಂದಾಗಿದೆ. 

Related Post

Leave a Reply

Your email address will not be published. Required fields are marked *