Breaking
Tue. Dec 24th, 2024

ಕರ್ನಾಟಕ ಲೋಕಸಭಾ ಚುನಾವಣೆಯ 2024ರ ಮತಗಟ್ಟೆ ಸಮೀಕ್ಷೆ…!

ಬೆಂಗಳೂರು, ಮೇ 1: ಲೋಕಸಭೆ ಚುನಾವಣೆಯ  7 ಹಂತದ ಮತದಾನ  ಮುಕ್ತಾಯವಾಗಿದ್ದು ಫಲಿತಾಂಶಕ್ಕೆ ದಿನಗಣನೆ ಆರಂಭವಾಗಿದೆ. ಜೂನ್ 4ರಂದು ಮಂಗಳವಾರ ಮತ ಎಣಿಕೆ ನಡೆಯಲಿದ್ದು, ಫಲಿತಾಂಶ  ಪ್ರಕಟವಾಗಲಿದೆ. ಕರ್ನಾಟಕದಲ್ಲಿ 2 ಹಾಗೂ 3ನೇ ಹಂತಗಳಲ್ಲಿ ಲೋಕಸಭೆ ಚುನಾವಣೆಗಳು ನಡೆದಿದ್ದವು. ರಾಜ್ಯದ ಮೊದಲ ಹಂತದಲ್ಲಿ ಏಪ್ರಿಲ್ 26ರಂದು ಹಾಗೂ ಎರಡನೇ ಹಂತದಲ್ಲಿ ಮೇ 7ರಂದು ತಲಾ 14 ರಂತೆ 28 ಕ್ಷೇತ್ರಗಳಿಗೆ ಮತದಾನ ನಡೆದಿತ್ತು.
ಇದೀಗ ದೇಶದಲ್ಲಿ ಅಂತಿಮ ಹಂತದ ಮತದಾನ ಮುಕ್ತಾಯವಾದ ಬೆನ್ನಲ್ಲೇ ವಿವಿಧ ಮತಗಟ್ಟೆ ಸಮೀಕ್ಷೆಗಳು ಪ್ರಕಟವಾಗಿವೆ. ಪೋಲ್ಸ್ಟ್ರಾಟ್ ನಡೆಸಿದ ಮತಗಟ್ಟೆ ಸಮೀಕ್ಷೆಯೂ ಬಹಿರಂಗವಾಗಿದೆ. ಕರ್ನಾಟಕದಲ್ಲಿ ಕಳೆದ ಬಾರಿಯಷ್ಟು ಸ್ಥಾನಗಳನ್ನು ಉಳಿಸಿಕೊಳ್ಳುವಲ್ಲಿ ಬಿಜೆಪಿ ಯಶಸ್ವಿಯಾಯಿತೇ? ಆಡಳಿತಾರೂಢ ಕಾಂಗ್ರೆಸ್ ಗ್ಯಾರಂಟಿಗಳಿಂದಾಗಿ ಮತದಾರರು ‘ಕೈ’ಯತ್ತ ವಾಲಿದರೇ? ಜೆಡಿಎಸ್ ಜತೆಗಿನ ಮೈತ್ರಿಯಿಂದ ಬಿಜೆಪಿಗೆ ಪ್ರಯೋಜನವಾಯಿತೇ? ಈ ಎಲ್ಲ ಪ್ರಶ್ನೆಗಳಿಗೆ ಪೋಲ್ಸ್ಟ್ರಾಟ್ ನಡೆಸಿದ ಮತಗಟ್ಟೆ ಸಮೀಕ್ಷೆ ನೀಡಿದೆ ಉತ್ತರ.
ಕರ್ನಾಟಕದಲ್ಲಿ ತುಸು ಬಾಡಿದ ಕಮಲ! ಕಳೆದ ಬಾರಿ, ಅಂದರೆ 2019ರ ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಬರೋಬ್ಬರಿ 25 ಸ್ಥಾನಗಳನ್ನು ಗೆದ್ದು ಬೀಗಿದ್ದ ಬಿಜೆಪಿಗೆ ಈ ಬಾರಿ ತುಸು ಹಿನ್ನಡೆಯಾಗಿದೆ. ಮತ್ತೊಂದೆಡೆ ಕಾಂಗ್ರೆಸ್ ತುಸು ಬಲ ವೃದ್ಧಿಸಿಕೊಂಡಿದ್ದರೂ ನಿರೀಕ್ಷಿತ ಸ್ಥಾನ ಗಳಿಸಿಲ್ಲ. ಮತ್ತೊಂದೆಡೆ ಜೆಡಿಎಸ್ ತುಸು ಬಲ ವೃದ್ಧಿಸಿಕೊಂಡಿದೆ ಎಂಬುದು ಪೋಲ್ಸ್ಟ್ರಾಟ್ ಮತಗಟ್ಟೆ ಸಮೀಕ್ಷೆಯಿಂದ ತಿಳಿದುಬಂದಿದೆ.
ಪೋಲ್ಸ್ಟ್ರಾಟ್ ಮತಗಟ್ಟೆ ಸಮೀಕ್ಷೆ ಪ್ರಕಾರ, ಕರ್ನಾಟಕದಲ್ಲಿ ಬಿಜೆಪಿ ಈ ಬಾರಿ 18 ಸ್ಥಾನಗಳನ್ನು ಪಡೆಯಲಿದ್ದು, ಎನ್ಡಿಎ 20 ಸ್ಥಾನಗಳನ್ನು ಪಡೆಯಲಿದೆ. ಅತ್ತ ಕಾಂಗ್ರೆಸ್ ಕೇವಲ 8 ಸ್ಥಾನಗಳಿಗೆ ತೃಪ್ತಿಪಡಬೇಕಾಗಿದೆ. ಕಳೆದ ಬಾರಿ 1 ಸ್ಥಾನವನ್ನಷ್ಟೇ ಗಳಿಸಿದ್ದ ಕಾಂಗ್ರೆಸ್ ಈ ಬಾರಿ ಬಲ ವೃದ್ಧಿಸಿಕೊಂಡಿದೆ. ಜೆಡಿಎಸ್ 2 ಸ್ಥಾನ ಗಳಿಸಲಿದೆ. ಪಕ್ಷೇತರರು ರಾಜ್ಯದಲ್ಲಿ ಒಂದು ಸ್ಥಾನ ಕೂಡ ಗಳಿಸಿಲ್ಲ.
ಈ ಸಮೀಕ್ಷೆಯ ವರದಿ ಪ್ರಕಾರ, ಕರ್ನಾಟಕದಲ್ಲಿ ಆಡಳಿತಾರೂಢ ಕಾಂಗ್ರೆಸ್ ಕಳೆದ ಬಾರಿಗೆ ಹೋಲಿಸಿದರೆ ಈ ಬಾರಿ ಬಲ ವೃದ್ಧಿಸಿಕೊಂಡಿದೆ. ಆದಾಗ್ಯೂ ಅಧಿಕಾರದಲ್ಲಿದ್ದು ‘ಗ್ಯಾರಂಟಿ’ ಯೋಜನೆಗಳ ಜನಪ್ರಿಯತೆಯ ಲಾಭ ಪಡೆದು 15ರಿಂದ 20 ಸ್ಥಾನ ಗೆಲ್ಲಬಹುದು ಎಂಬ ಲೆಕ್ಕಾಚಾರದಲ್ಲಿದ್ದ ಪಕ್ಷದ ನಾಯಕರಿಗೆ ತುಸು ನಿರಾಸೆ ಮೂಡಿಸುವಂತಿದೆ. ಅಂತಿಮವಾಗಿ, ಮತದಾರ ಯಾರ ಕೈಹಿಡಿದಿದ್ದಾನೆ ಎಂಬುದು ಜೂನ್ 4ರಂದು ಅಧಿಕೃತವಾಗಿ ಗೊತ್ತಾಗಲಿದೆ

Related Post

Leave a Reply

Your email address will not be published. Required fields are marked *