ಬೆಂಗಳೂರು : ಕರ್ನಾಟಕ ವಿಧಾನಸಭೆಯಿಂದ ವಿಧಾನ ಪರಿಷತ್ತಿಗೆ ನಡೆಯಲಿರುವ ಚುನಾವಣೆ ಹಿನ್ನೆಲೆಗೆ ಸಿಎಂ ಪುತ್ರ ಯತೀಂದ್ರ ಸಿದ್ದರಾಮಯ್ಯ ಸೇರಿ 8 ಮಂದಿಗೆ ಕಾಂಗ್ರೆಸ್ ಟಿಕೆಟ್ ಘೋಷಣೆ ಮಾಡಿದೆ. ವಿಧಾನ ಪರಿಷತ್ ಚುನಾವಣೆಗೆ ಸೋಮವಾರ (ಜೂ.3) ಕೊನೆಯ ದಿನವಾಗಿದ್ದು, ಈ ಹಿನ್ನೆಯಲ್ಲಿ 8 ಅಭ್ಯರ್ಥಿಗಳ ಹೆಸರನ್ನು ಘೋಷಿಸಲಾಗಿದೆ.
ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯ, ಎನ್.ಎಸ್.ಬೋಸರಾಜು, ವಂಸತ್ ಕುಮಾರ್, ಕೆ. ಗೋವಿಂದ ರಾಜ್, ಐವಾನ್ ಡಿಸೋಜ, ಜಗದೇವ್ ಗುತ್ತೇದಾರ್, ಬಿಲ್ಕಿಸ್ ಬಾನೊ, ಬಸನಗೌಡ ಬಾರ್ದಿಲಿ ಅವರಿಗೆ ಟಿಕೆಟ್ ಘೋಷಣೆ ಮಾಡಲಾಗಿದೆ.
ಜಗದೀಶ್ ಶೆಟ್ಟರ್ ಅವರ ರಾಜೀನಾಮೆಯಿಂದ ಸ್ಥಾನಕ್ಕೆ ಬಸನಗೌಡ ಬಾರ್ದಿಲಿ ಅವರಿಗೆ ಟಿಕೆಟ್ ನೀಡಲಾಗಿದೆ