ಬೆಂಗಳೂರು: ರಾಜಧಾನಿಯಲ್ಲಿ ಶನಿವಾರ ರಾತ್ರಿಯಿಡೀ ಭಾರೀ ಮಳೆಯಾಗಿದೆ. ಮುಂಗಾರು ಆರಂಭದಲ್ಲೇ ರಾಜ್ಯದ ಹಲವೆಡೆ ಪ್ರವಾಹದ ಸ್ಥಿತಿ ಕಂಡು ಬಂದಿದೆ.
ನಗರದ ಹಲವೆಡೆ ಗಾಳಿ ಮಳೆಗೆ ಮರಗಳು ಧರೆಗುರುಳಿವೆ. ಅಲ್ಲಲ್ಲಿ ರಸ್ತೆಗಳಲ್ಲಿ ಮಳೆ ನೀರು ನಿಂತು ವಾಹನ ಸವಾರರು ಪರದಾಡುವಂತಾಯಿತು. ಬೆಂಗಳೂರು ಸೇರಿದಂತೆ ಎಂಟು ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಮುಂಗಾರು ಅಬ್ಬರ ಆರಂಭವಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು, ಬೆಂಗಳೂರು ಗ್ರಾಮಾಂತರ, ರಾಮನಗರ, ಶಿವಮೊಗ್ಗ, ತುಮಕೂರು, ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.
ಕಳೆದ 24 ಗಂಟೆಯಲ್ಲಿ ಯಾವ ಭಾಗದಲ್ಲಿ ಎಷ್ಟು ಪ್ರಮಾಣದಲ್ಲಿ ಮಳೆಯಾಗಿದೆ ಎಂಬ ಬಗ್ಗೆ ಮಾಹಿತಿ ಇಲ್ಲಿದೆ.